ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಾ.23ರಂದು ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ?

|
Google Oneindia Kannada News

ಬೆಂಗಳೂರು, ಮಾರ್ಚ್ 18 : ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕ ಮಾರ್ಚ್ 23ರಂದು ಪ್ರಕಟವಾಗುವ ಸಾಧ್ಯತೆ ಇದೆ. ಚುನಾವಣಾ ದಿನಾಂಕ ಘೋಷಣೆಯಾದ ತಕ್ಷಣ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಗೆ ಬರಲಿದೆ.

ಚುನಾವಣಾ ಆಯೋಗದ ಮೂಲಗಳ ಮಾಹಿತಿ ಪ್ರಕಾರ ಇದೇ ವಾರದಲ್ಲಿ ಚುನಾವಣಾ ದಿನಾಂಕ ಘೋಷಣೆಯಾಗಲಿದೆ. ಮೇ 7ರಿಂದ 13ರೊಳಗೆ ಮತದಾನ ನಡೆಯುವ ಸಾಧ್ಯತೆ ಇದೆ. ದಿನಾಂಕ ಘೋಷಣೆಗೂ ಮೊದಲು ಒ.ಪಿ.ರಾವತ್ ರಾಜ್ಯಕ್ಕೆ ಭೇಟಿ ಒಂದು ದಿನ ಭೇಟಿ ನೀಡಲಿದ್ದಾರೆ.

ಇದು ಹೊಸ ಅಧ್ಯಾಯದ ಆರಂಭ, ಮಹಾಧಿವೇಶನದಲ್ಲಿ ಸೋನಿಯಾ ರಣಕಹಳೆಇದು ಹೊಸ ಅಧ್ಯಾಯದ ಆರಂಭ, ಮಹಾಧಿವೇಶನದಲ್ಲಿ ಸೋನಿಯಾ ರಣಕಹಳೆ

ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ನೀತಿ ಸಂಹಿತೆ ಜಾರಿಗೂ ಮುನ್ನ ಸಂಬಂಧಪಟ್ಟ ಕೆಲಸಗಳನ್ನು ಮಾಡುತ್ತಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆಗೂ ಸಭೆ ನಡೆಸಲಾಗಿದ್ದು, ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗಿದೆ.

Karnataka assembly elections schedule may announce on March 23

ಮಾರ್ಚ್ 23ರಂದು ಕೇಂದ್ರ ಚುನಾವಣಾ ಆಯುಕ್ತ ಒ.ಪಿ.ರಾವತ್ ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಚುನಾವಣಾ ದಿನಾಂಕವನ್ನು ಘೋಷಣೆ ಮಾಡಲಿದ್ದಾರೆ. ಮೇ 7 ರಿಂದ 13ರೊಳಗೆ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಇದೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

ಮಾರ್ಚ್ 23ರಂದು ನೀತಿ ಸಂಹಿತೆ ಜಾರಿಗೆ ಬಂದರೆ 45 ದಿನಗಳ ನಂತರ ಮತದಾನ ನಡೆಯಬೇಕಿದೆ. ಮಾರ್ಚ್ ಅಂತ್ಯದೊಳಗೆ ನೀತಿ ಸಂಹಿತೆ ಜಾರಿಗೆ ಬರಲಿದೆ ಎಂದು ರಾಜಕೀಯ ಪಕ್ಷಗಳೂ ಸಿದ್ಧತೆ ಆರಂಭಿಸಿವೆ. ಶಾಸಕರು ತಮ್ಮ ಕ್ಷೇತ್ರಗಳಲ್ಲಿ ಬಾಕಿ ಇರುವ ಕೆಲಸಗಳತ್ತ ಗಮನ ಹರಿಸಿದ್ದಾರೆ.

ಎಲ್ಲಾ ಅಭ್ಯರ್ಥಿಗಳನ್ನು ರಿಜೆಕ್ಟ್ ಮಾಡಲು, ಬ್ರಹ್ಮಾಸ್ತ್ರ ಬಳಸಿ ಎಲ್ಲಾ ಅಭ್ಯರ್ಥಿಗಳನ್ನು ರಿಜೆಕ್ಟ್ ಮಾಡಲು, ಬ್ರಹ್ಮಾಸ್ತ್ರ ಬಳಸಿ

English summary
Elections Commission Of India may announce Karnataka assembly elections 2018 schedule on March 23, 2017. Election may held in the month of may.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X