ಸಮೀಕ್ಷೆ : ಮುಖ್ಯಮಂತ್ರಿ ಹುದ್ದೆಗೆ ಸಿದ್ದರಾಮಯ್ಯ ಅವರೇ ಬೆಸ್ಟ್!

ಬೆಂಗಳೂರು, ಜನವರಿ 26 : ಈಗ ಚುನಾವಣೆ ನಡೆದರೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಬೇಕು ಎಂದು ಜನರು ಅಭಿಪ್ರಾಯಪಟ್ಟಿದ್ದಾರೆ. ಶೇ 34ರಷ್ಟು ಜನರು ಸಿದ್ದರಾಮಯ್ಯ ಅವರ ಪರವಾಗಿದ್ದಾರೆ.

ಲೋಕನೀತಿ-ಐಎಸ್‌ಡಿಎಸ್‌ ಕರ್ನಾಟಕದಲ್ಲಿ ಈಗ ವಿಧಾನಸಭೆ ಚುನಾವಣೆ ನಡೆದರೆ? ಎಂಬ ವಿಷಯದ ಬಗ್ಗೆ ಸಮೀಕ್ಷೆ ನಡೆಸಿದ್ದು, ಫಲಿತಾಂಶ ಹೊರಬಂದಿದೆ. ವಿವಿಧ ವಿಚಾರಗಳನ್ನು ಮುಂದಿಟ್ಟುಕೊಂಡು ಸಮೀಕ್ಷೆ ನಡೆಸಲಾಗಿದೆ.

ಸಮೀಕ್ಷೆಯಲ್ಲಿ ಸಿದ್ದರಾಮಯ್ಯ ಸರ್ಕಾರದ ಬಗ್ಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇಂದೇ ಚುನಾವಣೆ ನಡೆದರೆ ಕಾಂಗ್ರೆಸ್‌ ಪಕ್ಷಕ್ಕೆ ಶೇ 49ರಷ್ಟು ಜನರು ಬೆಂಬಲ ನೀಡಲಿದ್ದಾರೆ ಎಂಬುದು ಸಮೀಕ್ಷೆಯಿಂದ ತಿಳಿದುಬಂದಿದೆ.

'ಈ ಚುನಾವಣೆ ಮುಗಿದ ಮೇಲೆ ನಿಮ್ಮ ಮುಂದಿನ ಮುಖ್ಯಮಂತ್ರಿ ಯಾರಾಗಬೇಕು?' ಎಂದು ಜನರನ್ನು ಪ್ರಶ್ನಿಸಲಾಗಿದೆ. ಶೇ 34ರಷ್ಟು ಜನರು ಸಿದ್ದರಾಮಯ್ಯ ಅವರ ಪರವಾಗಿದ್ದಾರೆ. ಗೊತ್ತಿಲ್ಲ-ಹೇಳಲು ಸಾಧ್ಯವಿಲ್ಲ ಎಂದು ಶೇ 7ರಷ್ಟು ಜನರು ಅಭಿಪ್ರಾಯಪಟ್ಟಿದ್ದಾರೆ.

ಮಹತ್ವದ ರಾಜಕೀಯ ವಿಚಾರ, ಆರ್ಥಿಕ ಹಾಗೂ ಸಾಮಾಜಿಕ ಬೆಳವಣಿಗೆಗಳ ಬಗ್ಗೆ ಜನರ ಅಭಿಪ್ರಾಯಗಳನ್ನು ಸಂಗ್ರಹಣೆ ಮಾಡಲು ಲೋಕನೀತಿ-ಸಿಎಸ್‌ಡಿಎಸ್ ಗಣರಾಜ್ಯೋತ್ಸವದ ದಿನದ ಸಂದರ್ಭದಲ್ಲಿ ದೇಶದ ಜನರ ಮನದಲ್ಲೇನಿದೆ (ಮೂಡ್ ಆಫ್‌ ದ ನೇಷನ್ ಸರ್ವೆ) ಸಮೀಕ್ಷೆ ನಡೆಸಿದೆ ವಿವರಗಳು ಚಿತ್ರದಲ್ಲಿವೆ..

ಯಡಿಯೂರಪ್ಪ ಪರ ಎಷ್ಟು?

ಯಡಿಯೂರಪ್ಪ ಪರ ಎಷ್ಟು?

ಬಿಜೆಪಿ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಣೆ ಮಾಡಿದೆ. ಆದರೆ, ಲೋಕನೀತಿ-ಐಎಸ್‌ಡಿಎಸ್‌ ಸಮೀಕ್ಷೆಯಲ್ಲಿ ಯಡಿಯೂರಪ್ಪ ಪರ ಶೇ 14ರಷ್ಟು ಅಭಿಪ್ರಾಯ ಮಾತ್ರ ವ್ಯಕ್ತವಾಗಿದೆ.

ಎಚ್.ಡಿ.ಕುಮಾರಸ್ವಾಮಿಗೆ ಬೆಂಬಲ

ಎಚ್.ಡಿ.ಕುಮಾರಸ್ವಾಮಿಗೆ ಬೆಂಬಲ

ಲೋಕನೀತಿ-ಐಎಸ್‌ಡಿಎಸ್‌ ಸಮೀಕ್ಷೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಬಹುದು ಎಂದು ಶೇ 19ರಷ್ಟು ಜನರು ಅಭಿಪ್ರಾಯಪಟ್ಟಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ

ಮಲ್ಲಿಕಾರ್ಜುನ ಖರ್ಗೆ

ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿಯಾಗಬಹುದೇ? ಎಂದು ಜನರನ್ನು ಪ್ರಶ್ನಿಸಲಾಗಿತ್ತು. ಲೋಕನೀತಿ-ಐಎಸ್‌ಡಿಎಸ್‌ ಸಮೀಕ್ಷೆಯಲ್ಲಿ ಶೇ 10ರಷ್ಟು ಜನರು ಅವರಿಗೆ ಬೆಂಬಲ ನೀಡಿದ್ದಾರೆ.

ಇತರ ಅಭ್ಯರ್ಥಿಗಳು

ಇತರ ಅಭ್ಯರ್ಥಿಗಳು

ಲೋಕನೀತಿ-ಐಎಸ್‌ಡಿಎಸ್‌ ಸಮೀಕ್ಷೆಯಲ್ಲಿ ಶೇ 16ರಷ್ಟು ಜನರು ಇತರರು ಕರ್ನಾಟಕದ ಮುಖ್ಯಮಂತ್ರಿ ಹುದ್ದೆಗೆ ಬೆಸ್ಟ್ ಎಂದು ಅಭಿಪ್ರಾಯಪಟ್ಟಿದ್ದಾರೆ. ಶೇ 7ರಷ್ಟು ಜನರು ಗೊತ್ತಿಲ್ಲ, ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+