ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಒಂದೇ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ: ಅರ್ಚಕರ ಮಾತಿಗೆ ಬೆಲೆ ಕೊಡದ ಮಾಜಿ ಸಿಎಂ ಸಿದ್ದರಾಮಯ್ಯ

|
Google Oneindia Kannada News

ಬೆಂಗಳೂರು, ಜನವರಿ 14: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸ್ಪರ್ಧೆಯ ವಿಚಾರವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಹಲವಾರು ಚರ್ಚೆಗಳು ನಡೆಯುತ್ತಿವೆ. 'ದೈವಿಕ ಶಕ್ತಿ' ಹೊಂದಿದ್ದಾರೆ ಎನ್ನಲಾಗುತ್ತಿರುವ ಅರ್ಚಕರೊಬ್ಬರು ಸಿದ್ದರಾಮಯ್ಯ ಸ್ಪರ್ಧೆಯ ಕುರಿತು ಹೇಳಿಕೆ ನೀಡಿದ್ದರು. ಇದಕ್ಕೆ ಸಂಬಂಧಿಸಿದ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿತ್ತು.

'ಒಂದೇ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧಿಸುವುದು ಅಪಾಯಕಾರಿ. ಅವರು ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವಂತೆ ಸೂಕ್ತ' ಎಂದು ಅರ್ಚಕರು ಸೂಚಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ. 2023 ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಒಂದು ವಿಧಾನಸಭಾ ಕ್ಷೇತ್ರದಿಂದ ಮಾತ್ರ ಸ್ಪರ್ಧಿಸುವುದಾಗಿ ಸ್ವತಃ ಸಿದ್ದರಾಮಯ್ಯನವರೇ ಸ್ಪಷ್ಟಪಡಿಸಿದ್ದಾರೆ.

ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, 'ಇತರರು ಏನೇ ಹೇಳಲಿ ನಾನು ಒಂದೇ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ' ಎಂದು ಹೇಳಿದ್ದಾರೆ.

Karnataka Assembly Elections Will contest from one segment only says Siddaramaiah

ಸಿದ್ದರಾಮಯ್ಯನವರ ಪುತ್ರ ಶಾಸಕ ಡಾ.ಯತೀಂದ್ರ ದೇವಸ್ಥಾನದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದಾಗ, ದೈವಿಕ ಶಕ್ತಿ ಇದೆ ಎನ್ನಲಾದ ಅರ್ಚಕರು ತಮ್ಮ ತಂದೆಗೆ ಎರಡು ಕ್ಷೇತ್ರಗಳಿಂದ ಸ್ಪರ್ಧಿಸುವಂತೆ ಸೂಚಿಸಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಡಾ.ಯತೀಂದ್ರ ಕೂಡ ತಮ್ಮ ತಂದೆ ವರುಣಾದಿಂದ ಸ್ಪರ್ಧಿಸುವಂತೆ ಸೂಚಿಸಿರುವುದಾಗಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು.

ಶುಕ್ರವಾರ ಅರಕಲಗೂಡು ತಾಲೂಕಿನ ಮುದಗನೂರು ಗ್ರಾಮಕ್ಕೆ ಭೇಟಿ ನೀಡಿದ್ದ ಸಿದ್ದರಾಮಯ್ಯ, ಅದು ಯತೀಂದ್ರ ಅವರ ವೈಯಕ್ತಿಕ ಅಭಿಪ್ರಾಯ, ನನ್ನದಲ್ಲ. ತಂದೆ ಮೇಲಿನ ಪ್ರೀತಿಯಿಂದ ಈ ಮಾತನ್ನು ಹೇಳಿರಬೇಕು. ಒಂದು ಸ್ಥಾನದಿಂದ ಸ್ಪರ್ಧಿಸಬೇಕು ಎಂಬುದು ನನ್ನ ಅಭಿಪ್ರಾಯ ಎಂದರು.

Karnataka Assembly Elections Will contest from one segment only says Siddaramaiah

ಸಿದ್ದರಾಮಯ್ಯ ಅವರನ್ನು ಹರಕೆ ಕುರಿ ಎಂಬ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಪ್ರತಿಪಕ್ಷ ನಾಯಕ, ಕುಮಾರಸ್ವಾಮಿ ನಮ್ಮ ಪಕ್ಷದವರೇ? ನನ್ನನ್ನು ಬಲಿಪಶು ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಅದನ್ನು ಜನರೇ ನಿರ್ಧರಿಸುತ್ತಾರೆ ಎಂದು ಹೇಳಿದರು.

ಕಳೆದ ಬಾರಿ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಿಂದ ಸಿದ್ದರಾಮಯ್ಯ ಸ್ಪರ್ಧಿಸಿದ್ದರು. ಬಾದಾಮಿ ಹಾಗೂ ಚಾಮುಂಡೇಶ್ವರಿ ಕ್ಷೇತ್ರಗಳಲ್ಲಿ ಕಣಕ್ಕಿಳಿದಿದ್ದರು. ಬಾದಾಮಿ ಕ್ಷೇತ್ರದಲ್ಲಿ ಅಲ್ಪಮತದ ಅಂತರದಲ್ಲಿ ಗೆಲುವು ಸಾಧಿಸಿದ್ದ ಅವರು, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪರಾಭವಗೊಂಡಿದ್ದರು. ಜೆಡಿಎಸ್‌ನ ಜಿ ಟಿ ದೇವಗೌಡರ ವಿರುದ್ಧ ಸೋತಿದ್ದರು. ಬಾದಾಮಿಯಲ್ಲಿ ಬಿಜೆಪಿಯ ಶ್ರೀರಾಮುಲು ವಿರುದ್ಧ ಜಯ ಸಾಧಿಸಿದ್ದರು. ಹೀಗಾಗಿ, ಸಿದ್ದರಾಮಯ್ಯ ಸ್ಪರ್ಧೆಯ ಬಗ್ಗೆ ಮೊದಲಿನಿಂದಲೂ ಚರ್ಚೆಗಳು ನಡೆಯುತ್ತಲೇ ಇವೆ.

Karnataka Assembly Elections Will contest from one segment only says Siddaramaiah

ಕರ್ನಾಟಕ ಚುನಾವಣೆಗೆ ಇನ್ನೇನು ಮುರ್ನಾಲ್ಕು ತಿಂಗಳು ಬಾಕಿ ಇದೆ. ಫೆಬ್ರುವರಿಯಲ್ಲಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸಿದ್ದಪಡಿಸುವುದಾಗಿ ಆಡಳಿತಾರೂಢ ಬಿಜೆಪಿ ಹೇಳಿಕೊಂಡಿದೆ. ಜೆಡಿಎಸ್‌ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಜನವರಿ ಕೊನೆಯ ವಾರದಲ್ಲಿ ಕಾಂಗ್ರೆಸ್‌ನ ಮೊದಲ ಪಟ್ಟಿ ಸಿದ್ದಗೊಳ್ಳಲಿದೆ. ಕೋಲಾರ ಟಿಕೆಟ್‌ಗಾಗಿ ಹಲವರು ಅರ್ಜಿ ಸಲ್ಲಿಸಿದ್ದಾರೆ. ಬಂಡಾಯದ ಬಿಸಿ ಸಿದ್ದರಾಮಯ್ಯನವರಿಗೆ ತಟ್ಟಬಹುದೆಂಬ ಮಾತುಗಳೂ ಕೇಳಿಬಂದಿವೆ. ಇದೆಲ್ಲದಕ್ಕೂ ಕಾಲವೇ ಉತ್ತರಿಸಲಿದೆ.

English summary
Siddaramaiah himself has made it clear that he will contest the 2023 Karnataka assembly elections from only one constituency,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X