ವಿಶ್ವಾಸಮತಯಾಚನೆ ; 2018ರಲ್ಲಿ ಏನಾಗಿತ್ತು, ಈಗ ಏನಾಗಿದೆ?

Recommended Video

      Karnataka Crisis : 2018 ಹಾಗು 2019ರ ವಿಶ್ವಾಸಮತಯಾಚನೆಗೆ ಇರುವ ವ್ಯತ್ಯಾಸ ಏನು? | Oneindia Kannada

      ಬೆಂಗಳೂರು, ಜುಲೈ 17 : 2018ರ ವಿಧಾನಸಭೆ ಚುನಾವಣೆ ಬಳಿಕ ಕರ್ನಾಟಕದಲ್ಲಿ ಮೂರನೇ ಬಾರಿಗೆ ವಿಶ್ವಾಸಮತಯಾಚನೆ ಮಾಡಲು ವೇದಿಕೆ ಸಿದ್ಧವಾಗಿದೆ. ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಗುರುವಾರ ಸರ್ಕಾರಕ್ಕೆ ಬಹುಮತವಿದೆ ಎಂದು ಸಾಬೀತು ಮಾಡಬೇಕಿದೆ.

      2018ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳನ್ನು ಪಡೆದು ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ರಾಜ್ಯಪಾಲರು ಸರ್ಕಾರ ರಚನೆಗೆ ಆಹ್ವಾನ ನೀಡಿದ್ದರು. ಸರ್ಕಾರ ರಚನೆ ಮಾಡಿದ್ದ ಬಿಜೆಪಿ ಬಹುಮತ ಸಾಬೀತು ಮಾಡಲು ಸಾಧ್ಯವಾಗದೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಿದ್ದರು.

      ಈಗ ಮೂರನೇ ಬಾರಿಗೆ ಕರ್ನಾಟಕ ವಿಧಾನಸಭೆಯಲ್ಲಿ ಬಹುಮತವನ್ನು ಸಾಬೀತು ಮಾಡಬೇಕಿದೆ. ಜುಲೈ 6ರಂದು 9 ಕಾಂಗ್ರೆಸ್, 3 ಜೆಡಿಎಸ್ ಶಾಸಕರು ರಾಜೀನಾಮೆ ನೀಡಿದ ಬಳಿಕ ರಾಜ್ಯದಲ್ಲಿ ಉಂಟಾಗಿರುವ ರಾಜಕೀಯ ಅಸ್ಥಿರತೆಗೆ ಗುರುವಾರ ತೆರೆ ಬೀಳುವ ನಿರೀಕ್ಷೆ ಇದೆ.

      2018ರಲ್ಲಿ ಬಿ. ಎಸ್. ಯಡಿಯೂರಪ್ಪ ವಿಶ್ವಾಸಮತಯಾಚನೆಗೂ ಮೊದಲೇ ಬಹುಮತವಿಲ್ಲ ಎಂದು ತಿಳಿದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. 2019ರ ಜುಲೈ 18ರ ಗುರುವಾರ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರ ನಡೆ ಏನು ಎಂದು ನೋಡಲು ರಾಜ್ಯವೇ ಕಾದು ಕುಳಿತಿದೆ.

      2018ರಲ್ಲಿ ಏನಾಗಿತ್ತು?

      2018ರಲ್ಲಿ ಏನಾಗಿತ್ತು?

      2018ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳಲ್ಲಿ ಜಯಗಳಿಸಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಬಿಜೆಪಿಗೆ ಬಹುಮತವಿಲ್ಲದಿದ್ದರೂ ರಾಜ್ಯಪಾಲರು ಸರ್ಕಾರ ರಚನೆಗೆ ಆಹ್ವಾನ ಕೊಟ್ಟಿದ್ದರು.

      ಬಿಜೆಪಿ ಸರ್ಕಾರ ರಚನೆಗೊಂಡು ಬಿ. ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾದರು. ಇದರ ವಿರುದ್ಧ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಸುಪ್ರೀಂಕೋರ್ಟ್ ಮೆಟ್ಟಿಲೇರಿದರು. 24 ಗಂಟೆಯಲ್ಲಿ ಬಹುಮತ ಸಾಬೀತು ಮಾಡಿ ಎಂದು ನ್ಯಾಯಾಲಯ ಆದೇಶ ನೀಡಿತು.

      111 ಸದಸ್ಯ ಬಲ ತಮಗೆ ಇದೆ ಎಂದು ಬಹುಮತ ಸಾಬೀತು ಮಾಡಲು ಸಾಧ್ಯವಾಗದ ಯಡಿಯೂರಪ್ಪ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಕೊಟ್ಟರು. ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ 116 ಸದಸ್ಯ ಬಲಹೊಂದಿತ್ತು.

      2019ರಲ್ಲಿ ಏನಾಗಿದೆ?

      2019ರಲ್ಲಿ ಏನಾಗಿದೆ?

      ಕಾಂಗ್ರೆಸ್‌ನ 13, ಜೆಡಿಎಸ್‌ನ 3 ಒಟ್ಟು 16 ಶಾಸಕರ ರಾಜೀನಾಮೆಯಿಂದಾಗಿ ಕರ್ನಾಟಕ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ. ವಿಧಾನಸಭೆಯಲ್ಲಿ ಬಹುಮತ ಸಾಬೀತು ಮಾಡುವುದಾಗಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಘೋಷಣೆ ಮಾಡಿದರು. ಸ್ಪೀಕರ್ ರಮೇಶ್ ಕುಮಾರ್ ಜುಲೈ 18ರ ಗುರುವಾರ ಬೆಳಗ್ಗೆ 11ಗಂಟೆಗೆ ಸಮಯ ನಿಗದಿಮಾಡಿದ್ದಾರೆ.

      ಸ್ಪೀಕರ್ ನಡೆ ಏನು?

      ಸ್ಪೀಕರ್ ನಡೆ ಏನು?

      ವಿಧಾನಸಭೆಯ ಸ್ಪೀಕರ್ ವಿಶ್ವಾಸಮತಯಾಚನೆ ಪ್ರಕ್ರಿಯೆಯನ್ನು ನಡೆಸಿಕೊಡಲಿದ್ದಾರೆ. ವಿಶ್ವಾಸಮತಯಾಚನೆಯಲ್ಲಿ ಸ್ಪೀಕರ್ ಪಾತ್ರ ಮಹತ್ವದ್ದಾಗಿದೆ. ಒಂದು ವೇಳೆ ಎರಡೂ ಪಕ್ಷಗಳು ಒಂದೇ ಸಂಖ್ಯೆಯ ಮತ ಪಡೆದು ಟೈ ಆದರೆ ಸ್ಫೀಕರ್ ತಮ್ಮ ಮತವನ್ನು ಚಲಾಯಿಸಲಿದ್ದಾರೆ. ಈಡೀ ಪ್ರಕ್ರಿಯೆ ಅಂಕಿ ಸಂಖ್ಯೆಗಳ ಆಟವಾಗಿದೆ.

      ಸಿಎಂ ರಾಜೀನಾಮೆ ನೀಡಬೇಕು

      ಸಿಎಂ ರಾಜೀನಾಮೆ ನೀಡಬೇಕು

      ಮುಖ್ಯಮಂತ್ರಿಗಳು ವಿಧಾನಸಭೆಯಲ್ಲಿ ವಿಶ್ವಾಸಮತವನ್ನು ಕೋರಬೇಕು. ಇಡೀ ಪ್ರಕ್ರಿಯೆಯನ್ನು ಸ್ಪೀಕರ್ ನಡೆಸಿಕೊಡಲಿದ್ದಾರೆ. ಒಂದು ವೇಳೆ ವಿಶ್ವಾಸಮತಸಾಬೀತು ಮಾಡಲು ವಿಫಲವಾದರೆ ಮುಖ್ಯಮಂತ್ರಿಗಳು ರಾಜೀನಾಮೆ ನೀಡಬೇಕು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+