ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಂದೇಮಾತರಂನೊಂದಿಗೆ ಸದನ ಆರಂಭ: ಯಡಿಯೂರಪ್ಪ, ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ

|
Google Oneindia Kannada News

ಬೆಂಗಳೂರು, ಮೇ 19: ಕರ್ನಾಟಕ ವಿಧಾನಸಭೆಗೆ ಚುನಾಯಿತರಾದ ನೂತನ ಶಾಸಕರು ಪ್ರಮಾಣವಚನ ಸ್ವೀಕರಿಸುವ ಪ್ರಕ್ರಿಯೆಗೆ ಚಾಲನೆ ದೊರೆತಿದೆ.

ವಂದೇಮಾತರಂ ಗೀತೆಯೊಂದಿಗೆ ಸದನವು 11 ಗಂಟೆಗೆ ಆರಂಭವಾಯಿತು. ಬಿ.ಎಸ್. ಯಡಿಯೂರಪ್ಪ ಅವರು ಶಾಸಕರಾಗಿ ಮೊದಲು ಪ್ರಮಾಣವಚನ ಸ್ವೀಕರಿಸಿದರು. ರೈತರ ಹೆಸರಿನಲ್ಲಿ ಅವರು ಪ್ರಮಾಣವಚನ ಸ್ವೀಕರಿಸಿದರು.

ಸ್ಪೀಕರ್ ಕೆ.ಜಿ. ಬೋಪಯ್ಯ ಅವರು ಪ್ರಮಾಣ ವಚನ ಬೋಧನೆ ಮಾಡಿದರು. ಮುಖ್ಯಮಂತ್ರಿಯಾಗಿ ಅವರು ಗುರುವಾರ ಪ್ರಮಾಣವಚನ ಸ್ವೀಕಾರ ಮಾಡಿದ್ದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಜ್ಞಾವಿಧಿ ಸ್ವೀಕರಿಸಿದರು. ಉಳಿದ ಶಾಸಕರೂ ಪ್ರಮಾಣವಚನ ಸ್ವೀಕರಿಸಲು ಆರಂಭಿಸಿದ್ದಾರೆ. ಇಬ್ಬರು ಶಾಸಕರು ಒಟ್ಟಿಗೆ ಪ್ರಮಾಣವಚನ ಸ್ವೀಕಾರ ಮಾಡುತ್ತಿದ್ದಾರೆ.

ಇದುವರೆಗೆ ಸುಮಾರು 210 ಶಾಸಕರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಸದನವನ್ನು 3.30ಕ್ಕೆ ಮುಂದೂಡಲಾಗಿದೆ.

Karnataka assembly floor test 2018 session start

ಚುನಾವಣೆ ಬಳಿಕ ವಿಧಾನಸಭೆಯಲ್ಲಿ ನಡೆಯುತ್ತಿರುವ ಮೊದಲ ಸಭೆ ಇದಾಗಿದ್ದು, ಶಾಸಕರ ಪ್ರಮಾಣವಚನ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಸಂಜೆ 4 ಗಂಟೆಗೆ ಬಹುಮತ ಸಾಬೀತುಪಡಿಸುವ ಪ್ರಕ್ರಿಯೆ ಆರಂಭವಾಗಲಿದೆ.

English summary
Karnataka assembly floor test 2018: Karnataka assembly oath taking begins. Newly elected MLAs are taking oath from the speaker. There are 221 MLAs in the assembly including pro tem speaker KG Bopaiah.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X