ವಿಶ್ವಾಸ ಮತ ಯಾಚನೆ : ನೇರ ಪ್ರಸಾರಕ್ಕೆ ಸುಪ್ರೀಂ ಸೂಚನೆ
ಬೆಂಗಳೂರು, ಮೇ 19 : ದೇಶದ ಕಣ್ಣು ಕರ್ನಾಟಕದ ವಿಧಾನಸೌಧದ ಮೇಲಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಸಂಜೆ 4 ಗಂಟೆಗೆ ವಿಧಾನಸಭೆಯಲ್ಲಿ ವಿಶ್ವಾಸ ಮತವನ್ನು ಸಾಬೀತು ಮಾಡಬೇಕಿದೆ. ವಿಧಾನಸಭೆ ಕಲಾಪ ಈಗಾಗಲೇ ಆರಂಭವಾಗಿದೆ.
ಹಂಗಾಂಮಿ ಸ್ಪೀಕರ್ ಕೆ.ಜಿ.ಬೋಪಯ್ಯ ಅವರು ವಿಧಾನಸಭೆ ಕಲಾಪವನ್ನು ನಡೆಸಿಕೊಡುತ್ತಿದ್ದಾರೆ. ಹಂಗಾಮಿ ಸ್ಪೀಕರ್ ಆಗಿ ಬೋಪಯ್ಯ ಅವರನ್ನು ಆಯ್ಕೆ ಮಾಡಿದ್ದನ್ನು ಪ್ರಶ್ನಿಸಿ ಕಾಂಗ್ರೆಸ್-ಜೆಡಿಎಸ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.

ಅರ್ಜಿಯ ವಿಚಾರಣೆ ನಡೆಸುವಾಗ ಸುಪ್ರೀಂಕೋರ್ಟ್ ವಿಶ್ವಾಸಮತ ಯಾಚನೆ ಕಲಾಪವನ್ನು ನೇರ ಪ್ರಸಾರ ಮಾಡಬೇಕು ಎಂದು ಸೂಚನೆ ನೀಡಿದೆ. ಇದರಿಂದಾಗಿ ಪಾದರ್ಶಕವಾಗಿ ವಿಶ್ವಾಸಮತ ಸಾಬೀತು ಪ್ರಕ್ರಿಯೆ ನಡೆಯಲಿದೆ.
ಕರ್ನಾಟಕದ ಹಲವು ಖಾಸಗಿ ಚಾನೆಲ್‌ಗಳು ಕಲಾಪದ ನೇರ ಪ್ರಸಾರವನ್ನು ಮಾಡಲಿವೆ. ಇದನ್ನು ಬಳಸಿಕೊಳ್ಳಬಹುದು. ಪಾರದರ್ಶಕವಾಗಿ ಎಲ್ಲಾ ಪ್ರಕ್ರಿಯೆಗಳು ನಡೆಯಬೇಕು ಎಂದು ಸುಪ್ರೀಂಕೋರ್ಟ್ ಶನಿವಾರ ಸೂಚನೆ ನೀಡಿದೆ.
ವಿಧಾನಸಭೆ ಕಲಾಪ ಆರಂಭವಾಗಿದ್ದು, ಎಲ್ಲಾ ಶಾಸಕರು ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದಾರೆ. ಭೋಜನ ವಿರಾಮದ ಬಳಿಕ ವಿಶ್ವಾಸ ಮತ ಯಾಚನೆ ಪ್ರಕ್ರಿಯೆ ಆರಂಭವಾಗಲಿದೆ.












Click it and Unblock the Notifications