ಉಭಯ ಸದನಗಳ ಕಲಾಪ ನುಂಗಿದ ವಜ್ರದ ವಾಚ್

ಬೆಂಗಳೂರು, ಮಾರ್ಚ್ 01 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಜ್ರ ಖಚಿತ ಊಬ್ಲೋ ವಾಚ್ ವಿವಾದ ವಿಧಾನಸಭೆ ಮತ್ತು ವಿಧಾನಪರಿಷತ್ತಿನಲ್ಲಿ ಕೋಲಾಹಲಕ್ಕೆ ಕಾರಣವಾಯಿತು. ಇದರಿಂದಾಗಿ ಉಭಯ ಸದನಗಳ ಕಲಾಪವನ್ನು ಬುಧವಾರಕ್ಕೆ ಮುಂದೂಡಲಾಯಿತು.

ಐದು ದಿನಗಳ ಜಂಟಿ ಅಧಿವೇಶನದ 2ನೇ ದಿನದ ಕಲಾಪ ಮಂಗಳವಾರ ಆರಂಭವಾಗುತ್ತಿದ್ದಂತೆ ಉಭಯ ಸದನಗಳಲ್ಲಿ ಅಗಲಿದ ಗಣ್ಯರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಅವರ ವಾಚ್ ವಿವಾದದ ಬಗ್ಗೆ ಚರ್ಚಿಸಲು ಅವಕಾಶ ಕೊಡಬೇಕು ಎಂದು ಪ್ರತಿಪಕ್ಷ ಬಿಜೆಪಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಮನವಿ ಮಾಡಿತು. [ಊಬ್ಲೋ ವಾಚ್ ವಿವಾದ : ಡಾ.ಸುಧಾಕರ ಶೆಟ್ಟಿ ಹೇಳಿದ್ದೇನು?]

assembly session

ಸದನದಲ್ಲಿ ನಡೆದದ್ದೇನು?

* 'ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿದೇಶಿ ವಾಚ್ ಉಡುಗೊರೆ ಪಡೆಯುವ ಮೂಲಕ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ 2 (ಎಚ್) ಉಲ್ಲಂಘಟನೆ ಮಾಡಿದ್ದಾರೆ' ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದರು. ಇತರ ಬಿಜೆಪಿ ಶಾಸಕರು ಶೆಟ್ಟರ್ ಮಾತಿಗೆ ಧ್ವನಿಗೂಡಿಸಿದರು. [ಸಖತ್ ಮಿಂಚುತ್ತಿರುವ ದುಬಾರಿ ಉಬ್ಲೋ ವಾಚುಗಳ ಕಥೆ]

* ಶೆಟ್ಟರ್ ಮಾತಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು,'ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆಯನ್ನು ತಾವು ಉಲ್ಲಂಘನೆ ಮಾಡಿಲ್ಲ' ಎಂದು ಸ್ಪಷ್ಟನೆ ನೀಡಿದರು. ಆದರೆ, ಬಿಜೆಪಿ ಸದಸ್ಯರು ಈ ಬಗ್ಗೆ ವಿವರವಾದ ಚರ್ಚೆ ನಡೆಯಬೇಕು ಎಂದು ಪಟ್ಟು ಹಿಡಿದರು. [ಸಿದ್ದುಗೆ ಕಂಟಕ ತರಲಿದೆಯಾ ಉಬ್ಲೋ ಡೈಮಂಡ್ ವಾಚ್?]

* ಸಚಿವರಾದ ಡಾ.ಜಿ.ಪರಮೇಶ್ವರ, ಆರ್.ವಿ.ದೇಶಪಾಂಡೆ, ಕೆ.ಜೆ.ಜಾರ್ಜ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲಕ್ಕೆ ನಿಂತರು. ಚರ್ಚೆಗೆ ಅವಕಾಶ ಕೊಡಬೇಕು ಎಂದು ಬಿಜೆಪಿ ಶಾಸಕರು ಸದಸನದ ಬಾವಿಗಳಿದು ಪ್ರತಿಭಟನೆ ಆರಂಭಿಸಿದರು. ಇದರಿಂದಾಗಿ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ನಡುವೆ ಮಾತಿನ ಸಮರ ನಡೆಯಿತು. ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು ಸದನವನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಿದರು. ['ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಡಲಿ']

* 3 ಗಂಟೆಗೆ ಸದನ ಸಮಾವೇಶಗೊಂಡ ಬಳಿಕವೂ ಸದಸ್ಯರ ಮಾತಿನ ಚಕಮಕಿ, ಶಾಸಕರ ಪ್ರತಿಭಟನೆ, ಗದ್ದಲ ಮುಂದುವರೆದ ಹಿನ್ನಲೆಯಲ್ಲಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು ಕಲಾಪವನ್ನು ಬುಧವಾರಕ್ಕೆ ಮುಂದೂಡಿದರು.

* ವಿಧಾನಪರಿಷತ್ತಿನಲ್ಲಿ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರು ಸಿದ್ದರಾಮಯ್ಯ ಅವರ ವಾಚ್ ವಿವಾದದ ಬಗ್ಗೆ ವಿಷಯ ಪ್ರಸ್ತಾಪಿಸಿದರು. 'ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾನೂನು ಪದವೀಧರರು. ವಿದೇಶಿ ದೇಣಿಗೆ ಸ್ವೀಕರಿಸಬಾರದು ಎಂದು ತಿಳಿದಿಲ್ಲವೇ?' ಎಂದು ಈಶ್ವರಪ್ಪ ಪ್ರಶ್ನಿಸಿದರು. [ಗಡಿಯಾರದ ಗಲಾಟೆ, ಎಚ್ಡಿಕೆ ಬುಟ್ಟಿಯಲ್ಲಿ ಹೊಸ ಹಾವು!]

* ಈಶ್ವರಪ್ಪ ಹೇಳಿಕೆಯಿಂದಾಗಿ ಪರಿಷತ್ತಿನಲ್ಲಿ ಆಡಳಿತ ಮತ್ತು ಪತಿಪಕ್ಷಗಳ ನಡುವೆ ಮಾತಿನ ಚಕಮಕಿ ನಡೆಯಿತು. ವಾಚ್ ವಿವಾದದ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕು ಎಂದು ಬಿಜೆಪಿ ಸದಸ್ಯರು ಆಗ್ರಹಿಸಿದರು. ಸದಸ್ಯರ ನಡುವೆ ಜಟಾಪಟಿ ಹೆಚ್ಚಾಗಿದ್ದರಿಂದ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅವರು, ಕಲಾಪವನ್ನು ಬುಧವಾರಕ್ಕೆ ಮುಂದೂಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+