Breaking: ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಅಂಗೀಕಾರ

ಬೆಳಗಾವಿ, ಡಿಸೆಂಬರ್ 23: ಗೃಹ ಸಚಿವ ಆರಗ ಜ್ಞಾನೇಂದ್ರ ಕರ್ನಾಟಕ ವಿಧಾನಸಭೆ ಸದನದಲ್ಲಿ ಮಂಡಿಸಲಾದ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ 2021 ಗುರುವಾರ ಧ್ವನಿ ಮತದ ಮೂಲಕ ಅಂಗೀಕಾರ ಪಡೆದಿದೆ.

ಪ್ರತಿಪಕ್ಷ ಕಾಂಗ್ರೆಸ್ ವಿರೋಧದ ಮಧ್ಯೆಯೇ ಮತಾಂತರ ನಿಷೇಧ ಮಸೂದೆಯನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ. ನಂತರ ವಿಧಾನ ಪರಿಷತ್‌ನಲ್ಲಿ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ 2021 ಮಂಡಿಸಿ ಒಪ್ಪಿಗೆ ಪಡೆಯಬೇಕಿದೆ.

Karnataka Assembly Passes the Anti Conversion Bill Amidst Protest by Congress Legislators

ಕಾಂಗ್ರೆಸ್ ವರ್ತನೆಗೆ ಮಾಜಿ ಸಿಎಂ ಯಡಿಯೂರಪ್ಪ ಸಿಟ್ಟು
ಮತಾಂತರ ಮಸೂದೆ ಬಗ್ಗೆ ಚರ್ಚೆ ಮಾಡಲು ಇನ್ನೇನೂ ಉಳಿದಿಲ್ಲ. ಮುಖ್ಯಮಂತ್ರಿ ಉತ್ತರ ಕೇಳಿ, ವಿಧೇಯಕ ಪಾಸ್​ ಮಾಡಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಿಟ್ಟಿನಿಂದ ಮಾತನಾಡಿದರು. 'ಪ್ರತಿಪಕ್ಷಗಳು ಸಭಾತ್ಯಾಗ ಮಾಡಲೆಂದೇ ಬಾವಿಗೆ ಇಳಿದಿದ್ದಾರೆ. ನೀವು ಯಾಕೆ ಅವರ ಬಗ್ಗೆ ತಲೆ ಕೆಡಿಸಿಕೊಳ್ತೀರಾ ಎಂದು ಗರಂ ಆದರು.

ನಂತರ ಸ್ವೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿಯವರು ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ 2021 ಅನ್ನು ವಿಧಾನಸಭೆ ಸದನದ ಮತಕ್ಕೆ ಹಾಕಿದರು. ಆಗ ದನಿ ಮತದ ಮೂಲಕ ಆಡಳಿತ ಪಕ್ಷದ ಸದಸ್ಯರು ಮಸೂದೆಯನ್ನು ಅಂಗೀಕರಿಸಿದರು.

ಮತಾಂತರ ನಿಷೇಧ ತಿದ್ದುಪಡಿ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರದ ನಂತರ ಸುವರ್ಣ ಸೌಧದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮತಾಂತರ ನಿಷೇಧ ವಿಧೇಯಕವನ್ನು ವಿರೋಧಿಸಿದವರಿಗೆ ಜನರು ತಕ್ಕ ಪಾಠ ಕಲಿಸಬೇಕು ಎಂದರು.

ಮತಾಂತರ ನಿಷೇಧ ಕಾಯ್ದೆ ಆರ್‌ಎಸ್‌ಎಸ್‌ನ ಕೂಸು: ಸಿದ್ದರಾಮಯ್ಯ
ಮತಾಂತರ ನಿಷೇಧ ತಿದ್ದುಪಡಿ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರದ ನಂತರ ಸುವರ್ಣಸೌಧದಲ್ಲಿ ಪತ್ರಕರ್ತರೊಂದಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿದರು.

"5/11/2009ರಲ್ಲಿ ಯಡಿಯೂರಪ್ಪನವರು ಮುಖ್ಯಮಂತ್ರಿ ಆಗಿದ್ದಾಗ ಆರ್‌ಎಸ್‌ಎಸ್ ಮೂಲದ ಚಿದಾನಂದ ಮೂರ್ತಿ, ನರಹರಿ, ಬಿ.ಎನ್. ಮೂರ್ತಿ, ಜಯದೇವ, ಆರ್. ಲೀಲಾ, ಮುತ್ತೂರು ಕೃಷ್ಣಮೂರ್ತಿ ಎಂಬುವವರು ಕಾನೂನು ಆಯೋಗಕ್ಕೆ ಮತಾಂತರ ನಿಷೇಧ ಕಾಯ್ದೆ ರೂಪಿಸಿ, ಜಾರಿಗೊಳಿಸುವಂತೆ ಮನವಿ ಮಾಡಿದ್ದರು".

"ಕಾನೂನು ಆಯೋಗದವರು 21/9/2013ರಲ್ಲಿ ಕಾನೂನು ಇಲಾಖೆಗೆ ಕರಡು ನೀಡುತ್ತಾರೆ. ನಂತರ ಈ ಕರಡು ಕಾನೂನು ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯಲ್ಲಿ ಚರ್ಚೆಯಾಗಿ ನಮ್ಮ ಕೈಸೇರಿದ್ದು 2015ರಲ್ಲಿ".

"ಇದನ್ನು ನಾವು ಸಚಿವ ಸಂಪುಟದ ಮುಂದಿಟ್ಟು ಚರ್ಚೆ ಮಾಡಿಲ್ಲ, ಅನುಮೋದನೆಯನ್ನೂ ನೀಡಿಲ್ಲ. ಮುಖ್ಯಮಂತ್ರಿ ಈ ರೀತಿ ಸಂಪುಟ ಚರ್ಚೆಗೆ ತನ್ನಿ ಎಂದ ಅನೇಕ ವಿಷಯಗಳು, ಕಡತಗಳು ತಿರಸ್ಕರಿಸಲ್ಪಟ್ಟಿವೆ, ಕೆಲವು ಮುಂದೂಡಲ್ಪಟ್ಟಿವೆ. ಇನ್ನು ಕೆಲವು ಸಂಪುಟ ಉಪ ಸಮಿತಿಗೆ ಹೋಗಿವೆ. ಈ ಎಲ್ಲಾ ಕಡೆ ಸಚಿವರಿಗೆ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ಇದೆ".

"ಈ ಹಿಂದಿನ ಕರಡು ಪ್ರತಿಗೂ, ಈಗಿನ ಕರಡು ಮಸೂದೆಗೂ ಬಹಳಷ್ಟು ವ್ಯತ್ಯಾಸಗಳಿವೆ. ಮದುವೆ ಎಂಬ ಪದ ಹೊಸದಾಗಿ ಸೇರಿಸಲಾಗಿದೆ, ಸಾಕ್ಷಾಧಾರ ಕೊರತೆ ಎದುರಾದಾಗ ದೂರುದಾರರಿಗೆ ಅನುಕೂಲವಾಗುವಂತೆ ನಿಯಮವಿದೆ. ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ, ಅಪ್ರಾಪ್ತರಿಗೆ, ಬುದ್ದಿಭ್ರಮಣೆಯಾದವರನ್ನು ಮತಾಂತರ ಮಾಡಿದಾಗ ಗರಿಷ್ಠ ಶಿಕ್ಷೆ ವಿಧಿಸಲಾಗಿದೆ. ಆದರೆ ಇವುಗಳಿಗೆ ಕಾನೂನಿನಲ್ಲಿ ಅವಕಾಶ ಇಲ್ಲ. ಕಾನೂನಿನ ಎದುರು ಸರ್ವರೂ ಸಮಾನರು".

ನಮ್ಮ ಸರ್ಕಾರದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿದ್ದ ಎಚ್. ಆಂಜನೇಯ ಅವರು ಕರಡು ಪ್ರತಿಯನ್ನು ನೋಡಿ, ಇದನ್ನು ಸಂಪುಟದ ಮುಂದೆ ತರುವ ಅಗತ್ಯವಿಲ್ಲ ಎಂದು ಬರೆದು, ಅದನ್ನು ಬದಿಗೆ ಹಾಕಿದ್ದರು.

ನಮಗೆ ಇಂಥದ್ದೊಂದು ಕಾಯ್ದೆ ತರುವ ಬಗ್ಗೆ ಕಾಳಜಿ ಇದ್ದಿದ್ದರೆ 2015ರ ನವೆಂಬರ್‌ನಲ್ಲಿ ಸಹಿ ಹಾಕಿ ಸಂಪುಟ ಚರ್ಚೆಗೆ ಕಳುಹಿಸಿದ್ದ ಕಡತ, ತಿರಸ್ಕಾರಗೊಂಡ ನಂತರ ಎರಡೂವರೆ ವರ್ಷ ನಾವು ಅಧಿಕಾರದಲ್ಲಿ ಇದ್ದರೂ ಒಮ್ಮೆಯೂ ಅದರ ಕಡೆ ಗಮನ ನೀಡಿಲ್ಲ. ನಮಗೆ ಅದರ ಅಗತ್ಯವೂ ಇರಲಿಲ್ಲ.

ಮತಾಂತರ ನಿಷೇಧ ಕಾಯ್ದೆ ಅತ್ಯಂತ ಅಮಾನವೀಯ, ಸಂವಿಧಾನ ಬಾಹಿರ ಮತ್ತು ವ್ಯಕ್ತಿ ಸ್ವಾತಂತ್ರ್ಯಕ್ಕೆ ವಿರುದ್ಧವಾದುದ್ದು. ಇದು ಆರ್‌ಎಸ್‌ಎಸ್‌ನ ಕೈವಾಡ. ಗುಜರಾತ್, ಉತ್ತರ ಪ್ರದೇಶ ಮತ್ತು ಕರ್ನಾಟಕ ಎಲ್ಲಾ ರಾಜ್ಯಗಳ ಕಾನೂನು ಒಂದೇ ರೀತಿಯ ಪದ ಬಳಕೆಯಿಂದ ಕೂಡಿದೆ. ಒಬ್ಬರೇ ಮೂರು ರಾಜ್ಯದ ಕರಡು ತಯಾರು ಮಾಡಿದಂತಿದೆ.

ನಾವು ಸಂವಿಧಾನರೀತ್ಯ ಕಾಯ್ದೆಯನ್ನು ವಿರೋಧ ಮಾಡಿದ್ದೇವೆ. ಯಾರನ್ನೋ ಖುಷಿಪಡಿಸುವುದಕ್ಕಲ್ಲ. ಯಾವುದೋ ಒಂದು ಧರ್ಮವನ್ನು ಗುರಿಯಾಗಿರಿಸಿ ಕಾನೂನು ರೂಪಿಸಿದ್ದಾರೆ ಎಂಬುದು ಸ್ಪಷ್ಟವಾಗಿ ಕಾಣುತ್ತಿದೆ. ರಾಜ್ಯದಲ್ಲಿ ಹಲವು ಜ್ವಲಂತ ಸಮಸ್ಯೆಗಳಿದ್ದಾವೆ. ಇವುಗಳಿಂದ ಜನರನ್ನು ವಿಮುಖಗೊಳಿಸಲು ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸಲು ಹೊರಟಿದ್ದಾರೆ.

ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಮನವಿ ಮಾಡಿದ್ದರಿಂದ ಕಾನೂನು ಆಯೋಗದವರು ಕರಡು ರಚನೆ ಮಾಡಿ ಸರ್ಕಾರಕ್ಕೆ ಕಳುಹಿಸಿಕೊಟ್ಟಿದ್ದಾರೆ. ಇದು ಆರ್‌ಎಸ್‌ಎಸ್ ಮತ್ತು ಯಡಿಯೂರಪ್ಪ ಅವರ ಸರ್ಕಾರದ ಕೂಸು. ನಮ್ಮದಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+