Karnataka Assembly Poll 2023 LIVE: ಹೈವೋಲ್ಟೇಜ್ ಬಹಿರಂಗ ಪ್ರಚಾರ ಇಂದು ಸಂಜೆ ಅಂತ್ಯ: ಎಣ್ಣೆಯೂ ಬಂದ್!
ಬೆಂಗಳೂರು, ಮೇ 08: ರಾಜ್ಯ ವಿಧಾನಸಭಾ ಚುನಾವಣೆಯನ್ನ ಪ್ರತಿಷ್ಠೆಯಾಗಿ ತೆಗೆದುಕೊಂಡ ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರ, ರೋಡ್ ಶೋ ಹಾಗೂ ಸಮಾವೇಶಗಳ ಮೂಲಕ ಚುನಾವಣಾ ಕಾಅವು ಜೋರಾಗಿದ್ದು, ಮೇ 10 ರಂದು ನಡೆಯಲಿರುವ ಚುನಾವಣಾ ಬಹಿರಂಗ ಪ್ರಚಾರಕ್ಕೆ ಇಂದು (ಸೋಮವಾರ) ಸಂಜೆ 6 ಗಂಟೆಗೆ ತೆರೆ ಬೀಳಲಿದೆ. ಬಹಿರಂಗ ಪ್ರಚಾರ ಅಂತ್ಯಗೊಂಡ ನಂತರ ಕ್ಷೇತ್ರದ ಮತದಾರರಲ್ಲದವರು ಆ ಕ್ಷೇತ್ರದದಲ್ಲಿ ಉಳಿಯುವಂತಿಲ್ಲ.
ಮತದಾನ ಮುಕ್ತಾಯದ 48 ಗಂಟೆಗೂ ಮುನ್ನ ಬಹಿರಂಗ ಪ್ರಚಾರ ಅಂತ್ಯವಾಗಲಿದೆ. ಅದರಂತೆ ಇಂದು(ಸೋಮವಾರ) ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಬಹಿರಂಗ ಪ್ರಚಾರ ಅಂತ್ಯಗೊಂಡ ನಂತರ ಯಾವುದೇ ಅಭ್ಯರ್ಥಿ ಧ್ವನಿವರ್ಧಕ ಬಳಸಿ, ಸಮಾವೇಶ, ರೋಡ್ ಶೋಗಳ ಮೂಲಕ ಮತಯಾಚಿಸುವಂತಿಲ್ಲ. ಆದರೆ, ಮನೆ ಮನೆಗೆ ತೆರಳಿ ಮಂಗಳವಾರ ಸಂಜೆಯವರೆಗೂ ಮತ ಕೇಳಬಹುದು. ಇನ್ನೂ ಮತದಾರರ ಮನಗೊಳಿಸಲು ಕಳೆದ ಎರಡು ದಿನಗಳಷ್ಟೇ ಬಾಕಿ ಉಳಿದಿದ್ದು, ಇನ್ನೆರಡು ದಿನಗಳಲ್ಲಿ ಸೋಲು ಗೆಲುವಿನ ಲೆಕ್ಕಾಚಾರವೇ ಬದಲಾಗಲಿದೆ.

ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದ ಚುನಾವಣೆ ನಡೆಯಲಿದ್ದು, ಮೇ 8ರಂದು ಬಹಿರಂಗ ಪ್ರಚಾರಕ್ಕೆ ಅಂತಿಮ ದಿನವಾಗಿದೆ. ಇನ್ನು ಮೇ 10 ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13ರಂದು ಶನಿವಾರ ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ. ಮೇ 15 ರೊಳಗೆ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ.
'ಒನ್ ಇಂಡಿಯಾ ಕನ್ನಡ' ಜಾಲತಾಣ ಓದುಗರಿಗೆ ಚುನಾವಣಾ ಬೆಳವಣಿಗೆಯ ಮಾಹಿತಿಯನ್ನು ಲೈವ್ ಬ್ಲಾಗ್ ಮೂಲಕ ನೀಡಲಿದೆ. ನೀವು ಇಲ್ಲಿ ಪ್ರಮುಖ ರಾಜಕೀಯ ಪಕ್ಷಗಳ ನಾಯಕರ ಪ್ರಚಾರ, ಭರವಸೆ, ಸಾರ್ವಜನಿಕ ಸಭೆಗಳು, ಹೇಳಿಕೆಗಳು, ಚರ್ಚೆಗಳು, ಪ್ರಚಾರದ ಸದ್ದು-ಗದ್ದಲಗಳ ಕ್ಷಣ ಕ್ಷಣದ ಮಾಹಿತಿ ತಿಳಿದುಕೊಳ್ಳಬಹುದು .
ಫ್ಯಾನ್ಸ್ ಕಿಡಿ: ಶಿವಣ್ಣ ಬಗ್ಗೆ ಹೇಳಿದ ಮಾತನ್ನು ಹಿಂಪಡೆದ ಪ್ರಶಾಂತ್ ಸಂಬರ್ಗಿ
ಸೋನಿಯಾ ಗಾಂಧಿ ವಿರುದ್ಧ ಶೋಭಾ ಕರಂದ್ಲಾಜೆ ದೂರು
ಭಾರತ ಐಕ್ಯತಾ ಯಾತ್ರೆಯ ವೇಳೆ ನಾನು ಕರ್ನಾಟಕದ ಜನತೆಯಿಂದ ಅರಿತಿದ್ದು ಬಹಳಷ್ಟು. ಅವರ ಸಮಸ್ಯೆಗಳಿಗೆ ಸ್ಪಂದಿಸಲು ಕಾಂಗ್ರೆಸ್ 5 ಗ್ಯಾರಂಟಿ ಯೋಜನೆಗಳನ್ನು ನೀಡುತ್ತಿದೆ. ಸರ್ಕಾರ ರಚನೆಯಾದ ಮೊದಲ ಸಂಪುಟ ಸಭೆಯಲ್ಲೇ ಅವುಗಳನ್ನು ಜಾರಿಗೆ ತರಲಾಗುವುದು.
— Karnataka Congress (@INCKarnataka) May 8, 2023
ಇದು ನಾವು ಮಾಡುವ ಕೆಲಸದ ಆರಂಭ ಅಷ್ಟೇ! ಇನ್ನೂ ಬಹಳಷ್ಟಿದೆ!
- ರಾಹುಲ್ ಗಾಂಧಿ… pic.twitter.com/TXB3f6xan1
40% ಕಮಿಷನ್ ಲೂಟಿ ಮಾಡುವವರು ಬೇಡ,
— Karnataka Congress (@INCKarnataka) May 8, 2023
5 ಪ್ರಮುಖ ಜನಸ್ನೇಹಿ ಗ್ಯಾರಂಟಿಗಳನ್ನು ಈಡೇರಿಸುವವರು ಬೇಕು,
ಎಂದು ಜನತೆ ತೀರ್ಮಾನಿಸಿಯಾಗಿದೆ,
ಜನರ ಈ ತೀರ್ಮಾನಕ್ಕೆ ಹಲವು ಸಮೀಕ್ಷೆಗಳಲ್ಲಿ ವ್ಯಕ್ತವಾದ ಕಾಂಗ್ರೆಸ್ ಪರ ಬೆಂಬಲವೇ ಸಾಕ್ಷಿ.
ಕಾಂಗ್ರೆಸ್ ಭರ್ಜರಿ ಬಹುಮತದೊಂದಿಗೆ ಗೆಲ್ಲವುದು ಗ್ಯಾರಂಟಿ, ನಮ್ಮ ಗ್ಯಾರಂಟಿಗಳನ್ನು ಈಡೇರಿಸುವುದು ಗ್ಯಾರಂಟಿ.… pic.twitter.com/s6xBmPVYTN












Click it and Unblock the Notifications