By Elections: ಉಪ ಚುನಾವಣೆ ಬಳಿಕ ವಿಧಾನಸಭೆಯಲ್ಲಿ ಪಕ್ಷಗಳ ಬಲಾಬಲ
ಬೆಂಗಳೂರು, ನವೆಂಬರ್ 24: ಕರ್ನಾಟಕದ ಮೂರು ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ಶನಿವಾರ ಘೋಷಣೆಯಾಗಿದೆ. ರಾಜ್ಯದಲ್ಲಿ ಅಧಿಕಾರದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಬಲವನ್ನು ಉಪ ಚುನಾವಣೆ ಫಲಿತಾಂಶ ಮತ್ತಷ್ಟು ಹೆಚ್ಚಿಸಿದೆ. ಮೂರು ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಕಾಂಗ್ರೆಸ್ ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ ಹಿನ್ನಡೆ ಉಂಟು ಮಾಡಿದೆ. 2023ರ ವಿಧಾನಸಭೆ ಚುನಾವಣೆಯಲ್ಲಿ ಗೆದ್ದಿದ್ದ ಕ್ಷೇತ್ರವನ್ನು ಬಿಜೆಪಿ, ಜೆಡಿಎಸ್ ಕಾಂಗ್ರೆಸ್‌ಗೆ ಬಿಟ್ಟುಕೊಟ್ಟಿವೆ.
ಶಿಗ್ಗಾವಿ, ಸಂಡೂರು ಮತ್ತು ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆ ಬಳಿಕ ಕರ್ನಾಟಕದ ವಿಧಾನಸಭೆ ಬಲಾಬಲದಲ್ಲಿಯೂ ಬದಲಾವಣೆಯಾಗಿದೆ. ವಿರೋಧ ಪಕ್ಷಗಳು ತಲಾ ಒಂದೊಂದು ಸ್ಥಾನವನ್ನು ಕಳೆದುಕೊಂಡಿದೆ. ವಿಧಾನಸಭೆಯಲ್ಲಿ ಪರಿಪೂರ್ಣ ಬಹುಮತ ಹೊಂದಿರುವ ಕಾಂಗ್ರೆಸ್ 'ಕೈ' ಇನ್ನಷ್ಟು ಬಲವಾಗಿದೆ.

2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 135 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ರಾಜ್ಯದಲ್ಲಿ ಅಧಿಕಾರವನ್ನು ಪಡೆದಿತ್ತು. 2024ರಲ್ಲಿ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಜಯಗಳಿಸುವ ಮೂಲಕ ಕಾಂಗ್ರೆಸ್ ಬಲ ಇನ್ನಷ್ಟು ಹೆಚ್ಚಿದೆ. ವಿಧಾನಸಭೆಯಲ್ಲಿ ಪಕ್ಷದ ಬಲ 138ಕ್ಕೆ ಏರಿಕೆಯಾಗಿದೆ.
ವಿಧಾನಸಭೆ ಬಲಾಬಲ: ಕರ್ನಾಟಕ ವಿಧಾನಸಭೆಯಲ್ಲಿ ಸದ್ಯ ಕಾಂಗ್ರೆಸ್ ಬಲ 138, ಬಿಜೆಪಿ 65 ಮತ್ತು ಜೆಡಿಎಸ್ 18. 2023ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 66, ಜೆಡಿಎಸ್ 19 ಸೀಟುಗಳಲ್ಲಿ ಜಯಗಳಿಸಿದ್ದವು. 2024ರ ಉಪ ಚುನಾವಣೆಯಲ್ಲಿ ಸೋಲುವ ಮೂಲಕ ಉಭಯ ಪಕ್ಷಗಳ ತಲಾ ಒಂದೊಂದು ಸೀಟು ವಿಧಾನಸಭೆಯಲ್ಲಿ ಕಡಿಮೆಯಾಗಿದೆ.
ಚನ್ನಪಟ್ಟಣದಲ್ಲಿ 2023ರಲ್ಲಿ ಗೆದ್ದಿದ್ದ ಎಚ್. ಡಿ. ಕುಮಾರಸ್ವಾಮಿ ಮಂಡ್ಯದಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಜಯಗಳಿಸಿದ ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆಗ ಪಕ್ಷದ ಸದಸ್ಯ ಬಲ 18ಕ್ಕೆ ಕುಸಿದಿತ್ತು. 2024ರ ಉಪ ಚುನಾವಣೆಯಲ್ಲಿ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ 87,229 ಮತಗಳನ್ನು ಪಡೆದು ಕಾಂಗ್ರೆಸ್‌ನ ಸಿ. ಪಿ. ಯೋಗೇಶ್ವರ ವಿರುದ್ಧ 25,413 ಮತಗಳ ಅಂತರದಿಂದ ಸೋಲು ಕಂಡಿದ್ದು, ಕಳೆದ ಚುನಾವಣೆಯಲ್ಲಿ ಗೆದ್ದ ಕ್ಷೇತ್ರ ಈಗ ಕಾಂಗ್ರೆಸ್ ಪಾಲಾಗಿದೆ.
ಶಿಗ್ಗಾವಿಯಲ್ಲಿ 2023ರಲ್ಲಿ ಗೆದ್ದಿದ್ದ ಬಸವರಾಜ ಬೊಮ್ಮಾಯಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸಂಸದದರಾಗಿ ಆಯ್ಕೆಯಾದರು. ಶಿಗ್ಗಾವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಆಗ ಪಕ್ಷದ ಸದಸ್ಯ ಬಲ 65ಕ್ಕೆ ಕುಸಿದಿತ್ತು. 2024ರ ಉಪ ಚುನಾವಣೆಯಲ್ಲಿ ಶಿಗ್ಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ 87,308 ಮತಗಳನ್ನು ಪಡೆದು 13,448 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಪಠಾಣ್ ವಿರುದ್ಧ ಸೋತಿದ್ದಾರೆ. ಆದ್ದರಿಂದ ಕ್ಷೇತ್ರ ಕಾಂಗ್ರೆಸ್ ವಶವಾಗಿದೆ.
ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಇ. ತುಕಾರಾಂ ಗೆದ್ದಿದ್ದರು. ಲೋಕಸಭೆ ಚುನಾವಣೆಯಲ್ಲಿ ಅವರು ಬಳ್ಳಾರಿ ಕ್ಷೇತ್ರದಿಂದ ಜಯಗಳಿಸಿದ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. 2024ರ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ನ ಇ. ಅನ್ನಪೂರ್ಣ ಸಂಡೂರಿನಲ್ಲಿ 93,616 ಮತಗಳನ್ನು ಪಡೆದು 9,649 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕ್ಷೇತ್ರವನ್ನು ಕಾಂಗ್ರೆಸ್‌ಗೆ ಉಳಿಸಿಕೊಟ್ಟಿದ್ದಾರೆ.
ಹೊಸ ದಾಖಲೆ: ಸಂಡೂರಿನಲ್ಲಿ ಬಳ್ಳಾರಿ ಸಂಸದ ಇ. ತುಕಾರಾಂ ಪತ್ನಿ ಇ. ಅನ್ನಪೂರ್ಣ ಉಪ ಚುನಾವಣೆ ಗೆಲ್ಲುವ ಮೂಲಕ ಹೊಸ ದಾಖಲೆ ನಿರ್ಮಾಣವಾಗಿದೆ. ಇದೇ ಮೊದಲು ಜಿಲ್ಲೆಯ ರಾಜಕೀಯ ಇತಿಹಾಸದಲ್ಲಿಯೇ ಪತಿ ಸಂಸದರು, ಪತ್ನಿ ಶಾಸಕರು. ಸಂಡೂರು ಕ್ಷೇತ್ರದಲ್ಲಿ ಜಯಗಳಿಸಿದ ಮೊದಲ ಮಹಿಳಾ ಅಭ್ಯರ್ಥಿ ಎಂಬ ಹೆಗ್ಗಳಿಕೆಯನ್ನೂ ಸಹ ಅನ್ನಪೂರ್ಣ ಪಡೆದಿದ್ದಾರೆ.
ಸಂಡೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ನ ಇ. ಅನ್ನಪೂರ್ಣ 93,616 ಮತಗಳನ್ನು ಪಡೆದು, 9,649 ಮತಗಳ ಅಂತರದ ಗೆಲುವು ಸಾಧಿಸಿದ್ದಾರೆ. ಪ್ರತಿಸ್ಪರ್ಧಿಯಾಗಿದ್ದ ಬಂಗಾರ ಹನುಮಂತ 83,967 ಮತಗಳನ್ನು ಪಡೆದಿದ್ದಾರೆ. ಉಳಿದಂತೆ, ಕರ್ನಾಟಕ ಜನತಾ ಪಕ್ಷದ ಅಂಜಿನಪ್ಪ. ಎನ್ 632, ಪಕ್ಷೇತರ ಅಭ್ಯರ್ಥಿಗಳಾದ ಟಿ. ಎಂ. ಮಾರುತಿ 211, ಟಿ. ಎರ‍್ರಿಸ್ವಾಮಿ 271 ಮತ್ತು ಎನ್. ವೆಂಕಣ್ಣ 461 ಮತಗಳನ್ನು ಪಡೆದಿದ್ದಾರೆ. ಒಟ್ಟು 1,040 ನೋಟಾ ಮತಗಳು ದಾಖಲಾಗಿವೆ.
-
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ












Click it and Unblock the Notifications