ಭಾಷಣಕ್ಕೂ ರಾಜ್ಯಪಾಲರಿಗೆ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆಯ ಸ್ವಾಗತ
ಬೆಂಗಳೂರು, ಫೆ.14: ರಾಜ್ಯದಲ್ಲಿ ಹಿಜಾಬ್ ವಿವಾದ ಬಗೆಹರಿಯುವ ಮುನ್ನವೇ ಇಂದು ಶಾಲಾ, ಕಾಲೇಜುಗಳ ತರಗತಿಗಳನ್ನು ಪುನರ್ ಆರಂಭಿಸಲಾಗಿದೆ. ಇತ್ತ ವಿಧಾನಸಭೆಯಲ್ಲಿ ಬಜೆಟ್ ಅಧಿವೇಶನ ಆರಂಭಗೊಂಡಿದೆ. ವಿದ್ಯಾರ್ಥಿಗಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಬಾರದು ಎಂಬುದರ ಬಗ್ಗೆ ಗಮನಸೆಳೆಯಲು ಪ್ರತಿಪಕ್ಷ ಕಾಂಗ್ರೆಸ್ ಕಪ್ಪು ಪಟ್ಟಿ ಧರಿಸಿ ವಿಧಾನಸೌಧದಲ್ಲಿಂದು ಮೌನ ಪ್ರತಿಭಟನೆ ಮಾಡಿತು.
ರಾಜ್ಯಪಾಲ ತಾವರ್ ಚಂದ್ ಗೆಲ್ಹೋಟ್ ಅವರು ವಿಧಾನಮಂಡಲದ ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಭಾಷಣ ಆರಂಭಿಸುವ ಮುನ್ನವೇ ಕಾಂಗ್ರೆಸ್ ಸದಸ್ಯರು ತಮ್ಮ ತೋಳಿಗೆ ಕಪ್ಪುಪಟ್ಟಿ ಧರಿಸಿ ವಿಧಾನಸಭೆಗೆ ಹಾಜರಾದರು.
ಹಿಜಾಬ್ ಧರಿಸುವುದಕ್ಕೆ ಸರ್ಕಾರ ನಿಷೇಧ ಹೇರಿರುವುದನ್ನು ವಿರೋಧಿಸುತ್ತಾ ಬಂದಿರುವ ಕಾಂಗ್ರೆಸ್, ಸರ್ಕಾರದ ನಿಲುವನ್ನು ಪ್ರತಿಭಟಿಸಿ ಕಪ್ಪು ಪಟ್ಟಿ ಧರಿಸುವ ಮೂಲಕ ಮೌನ ಪ್ರತಿಭಟನೆ ನಡೆಸಿತು. ಸರ್ಕಾರದ ಹಲವು ನಿಲುವುಗಳನ್ನು ವಿರೋಧಿಸಿ ಕಪ್ಪು ಪಟ್ಟಿ ಧರಿಸಿ ಸದನದಲ್ಲಿ ಮೌನ ಪ್ರತಿಭಟನೆ ಮಾಡುವುದಾಗಿ ತಿಳಿಸಿದರು.

ಬೆಂಗಳೂರು- ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲು ಆಗಮಿಸಿದ ರಾಜ್ಯಪಾಲ ತಾವರ್ ಚಂದ್ ಗೆಲ್ಹೋಟ್ ಅವರನ್ನು ವಿಧಾನಸೌಧದ ಮೆಟ್ಟಿಲುಗಳ (ಗ್ರಾಂಡ್ ಸ್ಟೆಪ್ಸ್) ಬಳಿ ವಿಧಾನಸಭಾಧ್ಯಕ್ಷ ವಿಶ್ವೇರ್ಶವರ ಹೆಗಡೆ ಕಾಗೇರಿ, ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಘಿ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಕಾನೂನು ಸಚಿವ ಮಾಧುಸ್ವಾಮಿ, ಉಭಯ ಸದನದ ಕಾರ್ಯದರ್ಶಿಗಳು ಸ್ವಾಗತ ಕೋರಿದರು.
ನಂತರ ವಿಧಾನಸೌಧದ ಮುಂಭಾಗದ ಮೆಟ್ಟಿಲುಗಳ ಮೇಲೆ ಹಾಕಿದ್ದ ರತ್ನಗಂಬಳಿ ಮೇಲೆ ರಾಜ್ಯಪಾಲರನ್ನು ಬರಮಾಡಿಕೊಂಡರು. ರಾಜ್ಯಪಾಲರು ವಿಧಾನಸೌಧ ಪ್ರವೇಶಿಸುತ್ತಿದ್ದಂತೆ ಪೊಲೀಸ್ ವಾದ್ಯಗೋಷ್ಠಿಯಿಂದ ಸ್ವಾಗತವನ್ನು ಕೋರಲಾಯಿತು.

ಸಭಾಧ್ಯಕ್ಷರು ಮತ್ತು ಸಭಾಪತಿ, ಮುಖ್ಯಮಂತ್ರಿ ಸೇರಿದಂತೆ ಗಣ್ಯರು ರಾಜ್ಯಪಾಲರನ್ನು ವಿಧಾನಸಭೆಯ ಸಭಾಂಗಣಕ್ಕೆ ಕರೆತಂದರು. ರಾಜ್ಯಪಾಲರು ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಿದ ನಂತರ, ಅವರನ್ನು ಅದೇ ರೀತಿ ಬೀಳ್ಕೊಡಲಾಯಿತು.
ಬೆಂಗಳೂರು- ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲ ತಾವರ್ ಚಂದ್ ಗೆಲ್ಹೋಟ್ ಅವರು ಕನ್ನಡದಲ್ಲಿ ತಮ್ಮ ಭಾಷಣವನ್ನು ಆರಂಭಿಸಿದರು. ವಿಧಾನಸಭೆಯಲ್ಲಿಂದು ಆರಂಭಗೊಂಡ ಪ್ರಸಕ್ತ ವರ್ಷದ ಚೊಚ್ಚಲ ಅಧಿವೇಶನದಲ್ಲಿ ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಿದರು.
Recommended Video
ರಾಷ್ಟ್ರಗೀತೆ ಹಾಡಿದ ಬಳಿಕ ತಮ್ಮ ಭಾಷಣ ಆರಂಭಿಸಿದ ರಾಜ್ಯಪಾಲರು, ವಿಧಾನಸಭೆ ಸಭಾಧ್ಯಕ್ಷರು, ವಿಧಾನಪರಿಷತ್ ಸಭಾಪತಿ ಸೇರಿದಂತೆ ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಕನ್ನಡದಲ್ಲಿಯೇ ಮಾತನಾಡಿ, ಅಧಿವೇಶನಕ್ಕೆ ಸ್ವಾಗತ ಕೋರಿದರು. ನಂತರ ಹಿಂದಿಯಲ್ಲಿ ತಮ್ಮ ಭಾಷಣವನ್ನು ಮುಂದುವರೆಸಿದರು. ರಾಜ್ಯದ ರಾಜ್ಯಪಾಲರಾದ ಮೇಲೆ ಗೆಲ್ಹೋಟ್ ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಿದ ಮೊದಲ ಅಧಿವೇಶನವಿದು.












Click it and Unblock the Notifications