10 ದಿನಗಳ ಚಳಿಗಾಲದ ಅಧಿವೇಶನ : ಮೊದಲ ದಿನ ಏನಾಯ್ತ?

ಬೆಂಗಳೂರು, ನವೆಂಬರ್ 16 : 'ಹಿರಿಯ ಸಂಶೋಧಕ ಎಂ.ಎಂ.ಕಲಬುರ್ಗಿ ಅವರ ಹತ್ಯೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ತನಿಖೆಯನ್ನು ಚುರುಕುಗೊಳಿಸಲಾಗಿದ್ದು, ಹಂತಕರ ಸುಳಿವು ಪತ್ತೆಯಾಗಿಲ್ಲ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಗೆ ತಿಳಿಸಿದರು.

ಹತ್ತು ದಿನಗಳ ಚಳಿಗಾಲದ ಅಧಿವೇಶನ ಬೆಂಗಳೂರಿನ ವಿಧಾನಸೌಧದಲ್ಲಿ ಸೋಮವಾರ ಆರಂಭಗೊಂಡಿದೆ. ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿ ಕಲಾಪವನ್ನು ಮಂಗಳವಾರಕ್ಕೆ ಮುಂದೂಡಲಾಗಿದೆ. ಧಾರವಾಡದಲ್ಲಿ ಹತ್ಯೆಯಾದ ಎಂ.ಎಂ.ಕಲಬುರ್ಗಿ ಅವರಿಗೆ ಸದನದಲ್ಲಿ ಇಂದು ಸಂತಾಪ ಸೂಚಿಸಲಾಯಿತು. [ಕಲಬುರ್ಗಿ ಹತ್ಯೆಯಾಗಿ 2 ತಿಂಗಳು : ಎತ್ತ ಸಾಗಿದೆ ತನಿಖೆ?]

assembly session

ಸಂತಾಪ ಸೂಚನಾ ನಿರ್ಣಯದ ಮೇಲೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 'ಕಲಬುರ್ಗಿ ಅವರ ಹತ್ಯೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ತನಿಖೆಯ ನಡೆಯುತ್ತಿದೆ. ಆದರೆ, ಇದುವರೆಗೂ ಹಂತಕರ ಗುರುತು ಪತ್ತೆಯಾಗಿಲ್ಲ' ಎಂದು ಹೇಳಿದರು. [ಕಲಬುರ್ಗಿ ಹತ್ಯೆ : ಕಾಂಗ್ರೆಸ್ ಮೌನಕ್ಕೆ ಕಾರಣವೇನು?]

ಸದನದಲ್ಲಿ ಕಳಸಾ-ಬಂಡೂರಿ ಕಿಚ್ಚು : ವಿಧಾನಸಭೆ ಕಲಾಪಕ್ಕೆ ಧಾರವಾಡ ಜಿಲ್ಲಯ ನವಲಗುಂದ ಕ್ಷೇತ್ರದ ಜೆಡಿಎಸ್ ಶಾಸಕ ಕೋನರೆಡ್ಡಿ ಕಳಸಾ ಬಂಡೂರಿ ಯೋಜನೆ ಜಾರಿಗೊಳಿಸಿ ಎಂದು ಫೆಕ್ಸ್ ಹಿಡಿದು ಬಂದಿದ್ದರು. [ಏನಿದು ಕಸಳಾ-ಬಂಡೂರಿ ಯೋಜನೆ]

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+