Karnataka Bandh: ಕಾಲ್ತುಳಿತ ದುರ್ಘಟನೆ: ಕರ್ನಾಟಕ ಬಂದ್.. ಸರ್ಕಾರದ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಬೆಂಗಳೂರು,ಜೂನ್ 11: RCB ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ದುರ್ಘಟನೆಯಲ್ಲಿ 11 ಜನರು ಸಾವಿಗೀಡಾಗಿದ್ದು, ಈ ಘಟನೆಯ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ವಿಪಕ್ಷಗಳು ಪ್ರತಿಭಟನೆ ನಡೆಸಿದ್ದು, ಮಠಾದೀಶರು ಸಹ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೀಗ ಕಾಲ್ತುಳಿತ ದುರ್ಘಟನೆ ಸಂಬಂಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಯನ್ನ ಹಮ್ಮಿಕೊಂಡಿದ್ದು, ಕರ್ನಾಟಕ ಬಂದ್ ಆಗುವ ಸಾಧ್ಯತೆ ಇದೆ.
ಈ ಕುರಿತು ಮಾಧ್ಯಮಗಳ ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರು ಮಾಧ್ಯಮಗಳ ಮೂಲಕ ಮಾಹಿತಿಯನ್ನ ಹಂಚಿಕೊಂಡಿದ್ದು, ಜನವಿರೋಧಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಸರಕಾರದ ವಿರುದ್ಧ ಬೃಹತ್ ಹೋರಾಟ ಮಾಡಲು ತೀರ್ಮಾನಿಸಲಾಗಿದೆ. ಜನವಿರೋಧಿ ಕಾಂಗ್ರೆಸ್ ಸರಕಾರ ಕಿತ್ತೊಗೆಯುವ ವರೆಗೂ ಹೋರಾಟ ಮುಂದುವರೆಸಲು ನಿರ್ಧರಿಸಿದ್ದೇವೆ. ಜೂನ್ 13ರಂದು ಬೆಂಗಳೂರು ಮಹಾನಗರದ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ಇದೆ. ಬಿಜೆಪಿ ಕಾರ್ಯಕರ್ತರು, ಘಟನೆಯಲ್ಲಿ ನೊಂದ ಕುಟುಂಬಗಳ ಸದಸ್ಯರು, ನೊಂದವರು ಬರಲಿದ್ದಾರೆ. ಸುಮಾರು 15- 20 ಸಾವಿರ ಸಂಖ್ಯೆಯಲ್ಲಿ ಪ್ರತಿಭಟನಾಕಾರರು ಸೇರಲಿದ್ದಾರೆ ಎಂದು ಹೇಳಿದ್ದಾರೆ. ಹೀಗಾಗಿ ಕರ್ನಾಟಕವೇ ಬಂದ್ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಆರ್‍ಸಿಬಿ ಗೆಲುವಿನ ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತ, 11 ಸಾವಿನ ಸಂಬಂಧ ದುರ್ಘಟನೆಯಲ್ಲಿ ಆರೋಪಿ ನಂಬರ್ 1 ಆರ್‍ಸಿಬಿ ಅಲ್ಲ. ಆರ್‍ಸಿಬಿ, ಕೆಎಸಿಎ, ಡಿಎನ್‍ಎ ಅವರು ಕೂಡ ಆರೋಪಿಗಳೇ ಆಗಿದ್ದಾರೆ. ಮುಖ್ಯಮಂತ್ರಿಗಳೇ ಆರೋಪಿ ನಂಬರ್ 1, ಉಪ ಮುಖ್ಯಮಂತ್ರಿಗಳು ಎಡರನೇ ಆರೋಪಿ, ಕೈಕಟ್ಟಿ ಕುಳಿತಿದ್ದ ಗೃಹ ಸಚಿವ ಪರಮೇಶ್ವರ್ ಅವರು ಆರೋಪಿ ನಂಬರ್ 3 ನಂತರದ ಹೊಣೆಗಾರರು ಆರ್‍ಸಿಬಿ, ಕೆಎಸಿಎ, ಡಿಎನ್‍ಎ ಎಂದು ಬಿ ವೈ ವಿಜಯೇಂದ್ರ ಅವರು ತಿಳಿಸಿದರು.
ಕರ್ತವ್ಯನಿರತ ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಈ ಪ್ರಕರಣದ ತನಿಖೆ ನಡೆಸಬೇಕೆಂದು ಬಿಜೆಪಿ ಆಗ್ರಹಿಸಿತ್ತು. ಸಿಐಡಿ ತನಿಖೆಗೆ ಕೊಟ್ಟರು. ಮತ್ತೊಂದು ಕಡೆ ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿಗಳಿಂದ ತನಿಖೆಗೆ ಆದೇಶಿಸಿದ್ದಾರೆ. ಅವರಿಗೆ ಬೇಕಾದವರನ್ನು ನೇಮಿಸಿ ರಾಜ್ಯ ಸರಕಾರಕ್ಕೆ ಕ್ಲೀನ್ ಚಿಟ್ ಕೊಟ್ಟು ಅಧಿಕಾರಿಗಳ ಮೇಲೆ ಗೂಬೆ ಕೂರಿಸಿ ಹೊಣೆಯಿಂದ ತಪ್ಪಿಸಿಕೊಳ್ಳಲೆಂದೇ ಹೀಗೆ ಮಾಡಿದ್ದಾರೆ ಎಂದು ಆರೋಪಿಸಿದರು. ರಾಜ್ಯ ಸರಕಾರಕ್ಕೆ ಕಿಂಚಿತ್ತಾದರೂ ಮಾನಮರ್ಯಾದೆ ಇದ್ದರೆ ಹೈಕೋರ್ಟ್‍ನ ಸಿಟ್ಟಿಂಗ್ ನ್ಯಾಯಮೂರ್ತಿಗಳಿಂದ ಈ ಪ್ರಕರಣದ ತನಿಖೆ ನಡೆಸಲಿ ಎಂದು ವಿಜಯೇಂದ್ರ ಅವರು ಆಗ್ರಹಿಸಿದರು.
ಸಿಎಂ, ಡಿಸಿಎಂ ನಡುವೆ ಪೈಪೋಟಿ ಇತ್ತು. ತಮ್ಮ ಜನಪ್ರಿಯತೆಗಾಗಿ ವಿಧಾನಸೌಧದ ಮುಂದೆ ಮುಖ್ಯಮಂತ್ರಿ ಕಾರ್ಯಕ್ರಮ ಆಯೋಜಿಸಿದ್ದರು. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಡಿ.ಕೆ.ಶಿವಕುಮಾರ್ ಕಾರ್ಯಕ್ರಮ ಏರ್ಪಡಿಸಿದ್ದರು ಎಂದು ಪ್ರಶ್ನೆಗೆ ಉತ್ತರಿಸಿದರು. ಇವರ ಗೊಂದಲದಿಂದ ಬಲಿ ಆದುದು ಯಾರು? ಯಾರ ಮರ್ಯಾದೆ ಹೋಗಿದೆ? ಎಂದು ವಿಜಯೇಂದ್ರ ಅವರು ಕೇಳಿದರು. ಚಿನ್ನಸ್ವಾಮಿ ಸ್ಟೇಡಿಯಂ ವಿಚಾರದಲ್ಲಿ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ. ಸಿಎಂ, ಡಿಸಿಎಂ ನಡುವೆ ಸಂಬಂಧವೇ ಇಲ್ಲದ ಸರಕಾರ ಎಂದು ಮುಖ್ಯಮಂತ್ರಿಗಳು ಹೇಳಿಕೆ ಕೊಡಲಿ ಎಂದು ಅವರು ಒತ್ತಾಯಿಸಿದರು.
ವಿಧಾನಸೌಧದ ಮುಂದೆ ರಾಜಕಾರಣಿಗಳ ಉಪಟಳ ತಡೆಯಲು ಸಾಧ್ಯವಾಗದೆ ಆರ್‍ಸಿಬಿ ಅಭಿಮಾನಿಗಳು ವಿಧಾನಸೌಧದ ಮೆಟ್ಟಿಲ ಬಳಿ ಚಪ್ಪಲಿ, ಕಲ್ಲು ತೂರಿದ್ದಾರೆ. ಇವರಿಗೆ ಸೆಲ್ಫಿ ಚಟ, ಜನಪ್ರಿಯತೆಯ ಚಟ ಇತ್ತು. ರಾಜ್ಯದ ಗೌರವವನ್ನೂ ಹಾಳು ಮಾಡಿದ್ದಾರೆ ಎಂದು ಟೀಕಿಸಿದರು. ರಾಜ್ಯಪಾಲರನ್ನು ತಪ್ಪು ದಾರಿಗೆ ಎಳೆದು ಅವರನ್ನೂ ಕೂರಿಸಿಕೊಂಡಿದ್ದರು. ವಿಧಾನಸೌಧದಲ್ಲಿ ಕಾರ್ಯಕ್ರಮ ಮಾಡಲು ನಾವು ಹೇಳಿದ್ದೇವಾ? ನಾವು ಮೆರವಣಿಗೆಗೆ ಅವಕಾಶ ಕೋರಿದ್ದೆವು. ಮೆರವಣಿಗೆ ಮಾಡಿದ್ದರೆ ಬಹುಶಃ ದುರ್ಘಟನೆ ನಡೆಯುತ್ತಿರಲಿಲ್ಲ ಎಂದರು.












Click it and Unblock the Notifications