ಕರ್ನಾಟಕ ಬಂದ್ : ಕಾಂಗ್ರೆಸ್, ಬಿಜೆಪಿ ಟ್ವಿಟರ್ ವಾರ್!
ಬೆಂಗಳೂರು, ಜವನರಿ 25 : ಮಹದಾಯಿ ಯೋಜನೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ನಡೆಸುತ್ತಿವೆ. ಬಂದ್ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ.
ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು 'ಮಹದಾಯಿ ವಿಚಾರದಲ್ಲಿ ತಮ್ಮ ನಿಲುವು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರಾಜ್ಯದಲ್ಲಿ ಪ್ರವಾಸ ಮಾಡುವ ಸಂದರ್ಭದಲ್ಲಿಯೂ ಬಂದ್ ಮಾಡಲಾಗುವುದು' ಎಂದು ಈಗಾಗಲೇ ಎಚ್ಚರಿಕೆ ನೀಡಿದ್ದಾರೆ.
Recommended Video

ಗುರುವಾರ ರಾಜ್ಯದ ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ಟ್ವಿಟ್ಟರ್ ಮೂಲಕ ಯುದ್ಧ ಆರಂಭಿಸಿದ್ದಾರೆ. ಇದು ಕಾಂಗ್ರೆಸ್ ಸರ್ಕಾರದ ಪ್ರೇರಿತ ಬಂದ್, ಶಾಂತಿ ಕಾಪಾಡಿ ಎಂದು ಜನರಿಗೆ ಮನವಿ ಮಾಡಿದ್ದಾರೆ.
ಇಂದು ಮೈಸೂರಿನಲ್ಲಿ ಬಿಜೆಪಿಯ ಪರಿವರ್ತನಾ ಯಾತ್ರೆ ನಡೆಯುತ್ತಿದೆ. ಸಮಾವೇಶದಲ್ಲಿ ಪಾಲ್ಗೊಳ್ಳಲು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಆಗಮಿಸುತ್ತಿದ್ದಾರೆ. ಇಂದೇ ಕರ್ನಾಟಕ ಬಂದ್ ಮಾಡುತ್ತಿರುವುದಕ್ಕೆ ಬಿಜೆಪಿ ನಾಯಕರು ಅಸಮಾಧಾನಗೊಂಡಿದ್ದಾರೆ. ಇದು ರಾಜಕೀಯ ಪ್ರೇರಿತ ಬಂದ್ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
| Array |
ಕರ್ನಾಟಕ ಬಿಜೆಪಿ ಪ್ರಶ್ನೆ
ಮಹದಾಯಿಗಾಗಿ ಅಥವ ಅಮಿತ್ ಶಾ ವಿರೋಧ ಮಾಡಕ ಬಂದ್ ಮಾಡತಿರೋ? ಎಂದು ಕರ್ನಾಟಕ ಬಿಜೆಪಿ ಟ್ವಿಟ್ಟರ್‌ನಲ್ಲಿ ಪ್ರಶ್ನಿಸಿದೆ.
ಚಿತ್ರಗಳು : ಮಹದಾಯಿಗಾಗಿ ಕರ್ನಾಟಕ ಬಂದ್
|
ಕಾಂಗ್ರೆಸ್ ಪಕ್ಷವನ್ನು ತೊಗಿಸಿ
ಸಿದ್ದರಾಮಯ್ಯ ಪ್ರೇರಿತ ಕರ್ನಾಟಕ ಬಂದ್ ಸಮಯದಲ್ಲಿ ಶಾಂತಿ ಕಾಪಾಡಿ ಎಂದು ಸಿ.ಟಿ.ರವಿ ಮನವಿ ಮಾಡಿದ್ದಾರೆ.
|
ಈ ಬಂದ್ ಯಶಸ್ವಿಯಾಗುವುದಿಲ್ಲ
ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಅವರು ಈ ಬಂದ್ ಯಶಸ್ವಿಯಾಗುವುದಿಲ್ಲ ಎಂದು ಟ್ವಿಟ್ ಮಾಡಿದ್ದಾರೆ.
|
ಕಾಂಗ್ರೆಸ್ ಸರ್ಕಾರದಿಂದ ಬಂದ್
ಈ ಬಂದ್ ರಾಜಕೀಯ ಗಿಮಿಕ್
|
ನದಿ ವಿವಾದ ಬಗೆಹರಿಸಲಿ
ರಾಹುಲ್ ಗಾಂಧಿ, ನರೇಂದ್ರ ಮೋದಿ ಗಮನ ಹರಿಸಲಿ












Click it and Unblock the Notifications