Karnataka Bandh: ಅಖಂಡ ಕರ್ನಾಟಕ ಬಂದ್; ಶಿವಸೇನೆ ಪ್ರತಿಕೃತಿಗೆ ಬೆಂಕಿ ಹಚ್ಚಿ ಆಕ್ರೋಶ: ಬಸ್ ಸ್ಥಗಿತ
ಬೆಂಗಳೂರು, ಮಾರ್ಚ್ 22: ಬೆಳಗಾವಿಯಲ್ಲಿ ಮರಾಠಿಗರ ಪುಂಡಾಟ ದಿನದಿಂದ ದಿನಕ್ಕೆ ಹೆಚ್ಚಾಗಿದೆ. ಮಹಾರಾಷ್ಟ್ರದಲ್ಲಿ ಕರ್ನಾಟಕ ಸಾರಿಗೆ ಬಸ್ ಚಾಲಕನಿಗೆ ಕಿರುಕುಳ ಕೊಟ್ಟ ಘಟನೆ ಖಂಡಿಸಿ ಕನ್ನಡ ಪರ ಸಂಘಟನೆಗಳು ಬಂದ್ಗೆ ಕರೆ ನೀಡಿವೆ. ಇಂದು (ಮಾರ್ಚ್ 22) ರಾಜ್ಯ ಸ್ತಬ್ಧವಾಗಲಿದೆ. ಹಲವು ಸಂಘ-ಸಂಸ್ಥೆಗಳು ಈ ಬಂದ್ಗೆ ಬೆಂಬಲ ಸೂಚಿಸಿವೆ. ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಅಖಂಡ ಕರ್ನಾಟಕ ಬಂದ್ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ.
ಕರ್ನಾಟಕ ಬಂದ್ ಹಿನ್ನೆಲೆ ಬೆಂಗಳೂರಲ್ಲಿ ಖಾಸಗಿ ಬಸ್, ವಾಹನಗಳು, ಓಲಾ ಉಬರ್ ಹೋರಾಟ ಸ್ಥಗಿತವಾಗಿದ್ದು, ಮಧ್ಯಾಹ್ನದವರೆಗೆ ಚಿತ್ರಮಂದಿರಗಳಲ್ಲಿ ಚಲನಚಿತ್ರ ಪ್ರದರ್ಶನಗಳು ಕ್ಯಾನ್ಸಲ್ ಆಗಿದ್ದು, ಟೌನ್ ಹಾಲಿನಿಂದ ಬೃಹತ್ ರ‍್ಯಾಲಿ ನಡೆಯಲಿದೆ. ಹಾಗಾಗಿ ಬೆಳಿಗ್ಗೆಯಿಂದಲೇ ಸಾರ್ವಜನಿಕರಿಗೆ ಟ್ರಾಫಿಕ್ ಜಾಮ್ ಬಿಸಿ ತಟ್ಟಲಿದೆ. ಇತ್ತ ಚಿಕ್ಕಬಳ್ಳಾಪುರದಲ್ಲಿ ಕನ್ನಡಪರ ಹೋರಾಟಗಾರರು ಶಿವಸೇನೆ ಪ್ರತಿಕೃತಿಯನ್ನು ದಹಿಸಿ ತೀವ್ರವಾದ ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ಬಂದ್ ಬೆಂಬಲಿಸಿ ಚಿಕ್ಕಬಳ್ಳಾಪುರದಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ಶಿವಸೇನೆ ಪ್ರತಿಕೃತಿಯನ್ನು ದಹಿಸಿ ಕನ್ನಡ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಚಿಕ್ಕಬಳ್ಳಾಪುರ ನಗರದ ಬಿ ಆರ್ ಅಂಬೇಡ್ಕರ್ ವೃತ್ತದಲ್ಲಿ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಕನ್ನಡ ಸೇನೆ ಕರವೇ ಶಿವರಾಮೇಗೌಡ ಬಣ ಮುಖಂಡರು ಪ್ರತಿಭಟಿಸಿದರು. ಇನ್ನೊಂದು ಕಡೆ ಮೈಸೂರಿನಲ್ಲಿ ಕನ್ನಡಪರ ಸಂಘಟನೆಗಳು ಕೆಎಸ್ಆರ್ಟಿಸಿ ಬಸ್ ತಡೆದು ಪ್ರತಿಭಟನೆ ನಡೆಸಿದ್ದಾರೆ.
ಇನ್ನೂ ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಹೋಗುವ ಬಸ್ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ. ಬೆಳಿಗ್ಗೆ ಆರಂಭವಾಗಬೇಕಿದ್ದ ಮಹಾರಾಷ್ಟ್ರ ಸಾರಿಗೆ ಬಸ್ ಗಳು ಸ್ಥಗಿತಗೊಂಡಿದ್ದು, ಮಹಾರಾಷ್ಟ್ರಕ್ಕೆ ಹೋಗುವ ಬಸ್ ಬಂದ್ ಹಿನ್ನೆಲೆ ಪ್ರಯಾಣಿಕರ ಪರದಾಡುವಂತಾಗಿದೆ. ಮೈಸೂರಿನ ಬಸ್ ನಿಲ್ದಾಣದ ಬಳಿ ತೆರಳಿದ ಕನ್ನಡ ಪರ ಸಂಘಟನೆಗಳು ಬಸ್ ಸಂಚರಿಸುತ್ತಿದ್ದನ್ನು ಗಮನಿಸಿ ಆಕ್ರೋಶ ಹಾಕಿದ್ದಾರೆ. ಕೂಡಲೇ ಬಸ್ಸಿನ ಚಾಲಕರಿಗೆ ಕನ್ನಡ ಪರ ಹೋರಾಟಗಾರರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೇ ಬಸ್ ಬಿಡದೇ ಬಸ್ಸಿನ ಮುಂಭಾಗದಲ್ಲಿ ಕುಳಿತು ಪ್ರತಿಭಟನೆ ನಡೆಸಿದರು.
ಅಖಂಡ ಕರ್ನಾಟಕ ಬಂದ್‌ಗೆ ಕನ್ನಡ ಒಕ್ಕೂಟ- ಕರ್ನಾಟಕ ರಾಜ್ಯದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಕರೆ ಕೊಟ್ಟಿದ್ದಾರೆ. ಆದರೆ, ಕರ್ನಾಟಕ ಬಂದ್‌ಗೆ ನಮ್ಮ ಬೆಂಬಲ ಇಲ್ಲ ಎಂದು ಚಾಲಕರ ಒಕ್ಕೂಟ ತಿಳಿಸಿದೆ. ಅಲ್ಲದೇ ಇಂಡಿಯನ್ ವೆಹಿಕಲ್ ಡ್ರೈವರ್ಸ್ ಟ್ರೇಡ್ ಯೂನಿಯನ್ ಅಧ್ಯಕ್ಷ ಗಂಡಸಿ ಸದಾನಂದ ಸ್ವಾಮಿ ಮತ್ತು ಸ್ನೇಹಜೀವಿ ಚಾಲಕರ ಟ್ರೇಡ್ ಯೂನಿಯನ್ ಅಧ್ಯಕ್ಷ ಸಂತೋಷ್ ಕುಮಾರ್ ಅವರು ಬಂದ್‌ಗೆ ಬೆಂಬಲ ಇಲ್ಲ ಎಂದರು.
ಇನ್ನೂ ಈ ಕರ್ನಾಟಕ ಬಂದ್ ಚಾಲಕರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕುವಂತಿದೆ. ಬೆಂಗಳೂರಿನಲ್ಲಿ 75 ಸಾವಿರಕ್ಕೂ ಅಧಿಕ ಆಟೋಗಳು ಸಂಚರಿಸುತ್ತಿವೆ. 2.5 ಲಕ್ಷಕ್ಕೂ ಅಧಿಕ ಕುಟುಂಬಗಳು ಚಾಲಕ ವೃತ್ತಿಯನ್ನು ಅವಲಂಬಿಸಿದ್ದಾರೆ. ಬಂದ್ ನಿಂದ ಇವರ ಬದಕು ದುಸ್ತರವಾಗಲಿದೆ. ಔಷಧ, ತರಕಾರಿ, ಹಾಲು, ಅಗತ್ಯ ವಸ್ತುಗಳ ಸಾಗಾಣೆ, ಶಾಲಾ ವಾಹನಗಳು ಸೇವೆ ಸ್ಥಗಿತಗೊಳಿಸಿದರೆ ಜೀವನ ನಿರ್ವಹಣೆ ಕಷ್ಟವಾಗುತ್ತದೆ ಎಂದು ತಿಳಿಸಿದ್ದಾರೆ.
ಏನಿರಲ್ಲ?
ಬಂದ್ ವೇಳೆಯಲ್ಲಿ ಹೋಟೆಲ್ ಕ್ಲೋಸ್
ಸಿನಿಮಾ ಥಿಯೇಟರ್ ಬಂದ್
ಸರ್ಕಾರಿ ಕಚೇರಿಗಳು ತೆರೆದಿರೋದು ದೌಟ್
ಓಲಾ, ಉಬರ್, ಆಟೋ, ಲಾರಿ ಸಂಚಾರ ಬಹುತೇಕ ಸ್ಥಗಿತ.
ಮಾಲ್ ಗಳು ಕ್ಲೋಸ್
ಏನಿರುತ್ತೆ.?
ಮೆಡಿಕಲ್ ಶಾಪ್ ಓಪನ್
ಹಾಲಿನ ಬೂತ್ ಗಳು
ಹಣ್ಣು-ತರಕಾರಿ ಅಂಗಡಿ ಓಪನ್
ಅಗತ್ಯ ವಸ್ತುಗಳ ಪೂರೈಕೆ ಸೇವೆ
ರೈಲು, ವಿಮಾನ ಸಂಚಾರದಲ್ಲಿ ವ್ಯತ್ಯಯ ಆಗೋದು ಕಡಿಮೆ
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications