• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ರೈತರ ಪ್ರತಿಭಟನೆ; ಸಿಎಂ ಯಡಿಯೂರಪ್ಪ ಟ್ವೀಟ್

|

ಬೆಂಗಳೂರು, ಸೆಪ್ಟೆಂಬರ್ 28 : ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ, ದಲಿತ, ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ ಕರ್ನಾಟಕ ಬಂದ್‌ ನಡೆಯುತ್ತಿದೆ. ಕೆಲವು ಜಿಲ್ಲೆಗಳಲ್ಲಿ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

   ರೈತರ ಪ್ರತಿಭಟನೆ ಕುರಿತು C.M BSY ಹೇಳಿದ್ದೇನು | Oneindia Kannada

   ರೈತ, ದಲಿತ, ಕಾರ್ಮಿಕರ ಸಂಘಟನೆಗಳು ಐಕ್ಯ ಹೋರಾಟ ಸಮಿತಿ ಹೆಸರಿನಲ್ಲಿ ಸೋಮವಾರ ಕರ್ನಾಟಕ ಬಂದ್ ನಡೆಸುತ್ತಿವೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಜೊತೆ ಸಂಘಟನೆಗಳ ಪ್ರಮುಖರು ನಡೆಸಿದ ಮಾತುಕತೆ ಶುಕ್ರವಾರ ವಿಫಲವಾಗಿತ್ತು.

   Karnataka Bandh Live Updates: ಕರ್ನಾಟಕ ಬಂದ್: ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ರೈತ ಪ್ರತಿಭಟನೆಯ ಬಿಸಿ

   ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಟ್ವೀಟ್ ಮಾಡಿದ್ದಾರೆ. "ರೈತರಿಗೆ ಸ್ವಾತಂತ್ರ್ಯ ನೀಡುವುದಕ್ಕಾಗಿ, ಅವರು ಬೆಳೆದ ಬೆಳೆಯನ್ನು ಅವರು ಎಪಿಎಂಸಿಯಲ್ಲಾಗಲಿ ಅಥವಾ ಎಲ್ಲಿ ಬೇಕಾದರೂ ಮಾರುವ ಅವಕಾಶ ಅವರಿಗೆ ನೀಡಲಾಗುತ್ತಿದೆ" ಎಂದು ಹೇಳಿದ್ದಾರೆ.

   ಸೋಮವಾರ ಕರ್ನಾಟಕ ಬಂದ್; ಏನಿರುತ್ತೆ, ಏನಿರಲ್ಲ?

   "ಬಹುತೇಕ ರೈತರು ಇದನ್ನು ಸ್ವಾಗತ ಮಾಡುತ್ತಿದ್ದಾರೆ. ಹಾಗೆಯೇ, ಬಹುದಿನಗಳ ಬೇಡಿಕೆಯಂತೆ ಕಾಡುಗೊಲ್ಲರ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ" ಎಂದು ಸೋಮವಾರ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

   ಸೆ. 28ರ ಕರ್ನಾಟಕ ಬಂದ್; ಕೆಎಸ್ಆರ್‌ಟಿಸಿಯ ಪ್ರಕಟಣೆ

   ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಕರ್ನಾಟಕ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಸಹ ಕರ್ನಾಟಕ ಬಂದ್‌ಗೆ ಬೆಂಬಲ ನೀಡಿವೆ. ರೈತ, ದಲಿತ, ಕಾರ್ಮಿಕ ಸಂಘಟನೆಗಳು ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆಗಳನ್ನು ನಡೆಸುತ್ತಿವೆ.

   ಬೆಂಗಳೂರಿನಲ್ಲಿ ಟೌನ್‌ ಹಾಲ್‌ನಿಂದ ಫ್ರೀಡಂ ಪಾರ್ಕ್‌ ತನಕ ವಿವಿಧ ಸಂಘಟನೆಗಳು ಬೃಹತ್ ಧರಣಿಯನ್ನು ನಡೆಸುತ್ತಿವೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ನಗರದಲ್ಲಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ.

   English summary
   Farmer and other organizations protesting against farmer and labor against move by the government. Chief Minisster B. S. Yediyurappa tweet in the time of Karnataka bandh.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X