ಫೆಬ್ರವರಿ 13ರಂದು ಕರ್ನಾಟಕ ಬಂದ್ಗೆ ಕರೆ
Recommended Video
ಬೆಂಗಳೂರು, ಫೆಬ್ರವರಿ 05 : ಕರ್ನಾಟಕ ಸಂಘಟನೆಗಳ ಒಕ್ಕೂಟ ಫೆಬ್ರವರಿ 13ರಂದು ಕರ್ನಾಟಕ ಬಂದ್ಗೆ ಕರೆ ನೀಡಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಂದ್ ಕರೆ ನೀಡಲಾಗಿದ್ದು, ಯಾವ ಸಂಘಟನೆ ಬೆಂಬಲ ನೀಡಲಿದೆ? ಕಾದು ನೋಡಬೇಕು.
ಕರ್ನಾಟಕ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಾಗೇಶ್ ಈ ಕುರಿತು ಮಾಹಿತಿ ನೀಡಿದರು. "ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ 2019ರ ನವೆಂಬರ್ 4ರಿಂದ ಮೌರ್ಯ ವೃತ್ತದಲ್ಲಿ ಧರಣಿ ನಡೆಸಲಾಗುತ್ತಿದೆ. 93 ದಿನ ಪೂರೈಸಿರುವ ಧರಣಿಗೆ ಹಲವು ರಾಜಕೀಯ ನಾಯಕರು, ಸಾಹಿತಿಗಳು ಬೆಂಬಲ ನೀಡಿದ್ದಾರೆ" ಎಂದರು.
ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವ ಡಾ. ಸರೋಜಿನಿ ಮಹಿಷಿ ವರದಿ ಜಾರಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ. ಕರ್ನಾಟಕ ಸಂಘಟನೆಗಳ ಒಕ್ಕೂಟ ಕರೆ ನೀಡಿರುವ ಬಂದ್‌ಗೆ ಯಾರು ಬೆಂಬಲ ನೀಡಲಿದ್ದಾರೆ? ಎಂಬುದು ಇನ್ನು ಅಂತಿಮವಾಗಿಲ್ಲ.

ಮೌರ್ಯ ವೃತ್ತದಲ್ಲಿ ಧರಣಿ ನಡೆಸುತ್ತಿರುವಾಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ. ಟಿ. ರವಿ ಹಾಗೂ ಕಾರ್ಮಿಕ ಸಚಿವ ಎಸ್. ಸುರೇಶ್ ಕುಮಾರ್ ಭೇಟಿ ನೀಡಿ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದರು.
ಸರ್ಕಾರ ಇರುವರೆಗೂ ಯಾವುದೇ ಬೇಡಿಕೆ ಈಡೇರಿಸಲು ಪ್ರಯತ್ನವನ್ನು ನಡೆಸಿಲ್ಲ. ಆದ್ದರಿಂದ, ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ ಎಂದು ಕರ್ನಾಟಕ ಸಂಘಟನೆಗಳ ಒಕ್ಕೂಟ ಹೇಳಿದೆ.












Click it and Unblock the Notifications