ನಾಳೆ ಕರ್ನಾಟಕ ಬಂದ್‌ ಹಿನ್ನೆಲೆ ಶಾಲೆ ರಜೆ ಘೋಷಣೆ ನಿರ್ಧರಿಸುವಂತೆ ಡಿಸಿಗೆ ಒತ್ತಾಯ

ಬೆಂಗಳೂರು, ಸೆಪ್ಟೆಂಬರ್‌ 28: ತಮಿಳುನಾಡಿಗೆ ಕಾವೇರಿ ಹರಿಸುವುದನ್ನು ಖಂಡಿಸಿ ಸೆಪ್ಟೆಂಬರ್‌ 29ರಂದು ವಿವಿಧ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದು, ಅಂದು ಶಾಲೆಗಳಿಗೆ ರಜೆ ಘೋಷಣೆ ಬಗ್ಗೆ ಇಂದು ಸಂಜೆಯೊಳಗೆ ನಿರ್ಧಾರ ಕೈಗೊಳ್ಳುವಂತೆ ಖಾಸಗಿ ಶಾಲೆಗಳ ಒಕ್ಕೂಟ ಜಿಲ್ಲಾಧಿಕಾರಿಗಳಿಗೆ ಒತ್ತಾಯಿಸಿದೆ.

ಸೆಪ್ಟೆಂಬರ್‌ 29 ಶುಕ್ರವಾರ ರಾಜ್ಯದಲ್ಲಿ ಕನ್ನಡ ಪರ ಸಂಘಟನೆಗಳು ಬಂದ್‌ಗೆ ಕರೆ ನೀಡಿವೆ. ಎಲ್ಲ ಅಂಗಡಿ ಮುಗ್ಗಟ್ಟು, ಹೋಟೆಲ್‌, ಸಾರಿಗೆ ಸೇರಿದಂತೆ ಎಲ್ಲ ಸೇವೆಗಳನ್ನು ನಿಲ್ಲಿಸಿ ಬಂದ್‌ಗೆ ಸಹಕಾರ ನೀಡುವಂತೆ ಮನವಿ ಮಾಡಿಕೊಂಡಿವೆ. ಈ ನಿಟ್ಟಿನಲ್ಲಿ ಕರ್ನಾಟಕ ಅಸೋಸಿಯೇಟೆಡ್‌ ಮ್ಯಾನೇಜ್‌ಮೆಂಟ್‌ ಆಫ್‌ ಸ್ಕೂಲ್‌ (ಕೆಎಎಂಎಸ್) ಕೂಡ ನೈತಿಕ ಬೆಂಬಲವನ್ನು ನೀಡಿದೆ.

Karnataka bandh: Demand for DC to decide on declaration of school holiday tomorrow

ಈ ಹಿನ್ನೆಲೆಯಲ್ಲಿ ಶುಕ್ರವಾರ ಬೆಂಗಳೂರಿನ ಎಲ್ಲ ಶಾಲೆಗಳಿಗೆ ರಜೆ ಘೋಷಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಂತೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯುತ್ತಿರುವುದರಿಂದ ಖಾಸಗಿ ಶಾಲಾ ಚಾಲಕರ ಸಂಘವು ನೈತಿಕ ಬೆಂಬಲವನ್ನು ಈಗಾಗಲೇ ಘೋಷಿಸಿದೆ.

ನಾವು ಕರ್ನಾಟಕ ಬಂದ್‌ಗೆ ನೈತಿಕ ಬೆಂಬಲ ನೀಡುತ್ತೇವೆ. ಬಂದ್‌ಗಳು ಮತ್ತು ಅನೇಕ ಸರ್ಕಾರಿ ರಜೆಗಳಿಂದ ವಿದ್ಯಾರ್ಥಿಗಳು ಪರೀಕ್ಷೆ ಸಮಯದಲ್ಲಿ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಆದ್ದರಿಂದ ಎಲ್ಲಾ ಜಿಲ್ಲಾಧಿಕಾರಿಗಳು ಇಂದು ಸಂಜೆಯೊಳಗೆ ರಜೆ ಬಗ್ಗೆ ನಿರ್ಧಾರ ಕೈಗೊಳ್ಳಬೇಕು. ಬಂದ್‌ ದಿನದವರೆಗೆ ನಿರ್ಧಾರವನ್ನು ಮುಂದೂಡಬಾರದು ಎಂದು ನಾವು ವಿನಂತಿಸುತ್ತೇವೆ. ಸ್ಥಳೀಯವಾಗಿ ಪರಿಸ್ಥಿತಿ ಆಧರಿಸಿ ಆಯಾ ಶಾಲೆಗಳಿಗೆ ರಜೆ ಘೋಷಿಸಲು ಮುಕ್ತ ಅವಕಾಶವಿದೆ ಎಂದು ಕೆಎಎಂಎಸ್ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ತಿಳಿಸಿದ್ದಾರೆ.

ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲು ಕನ್ನಡ ಒಕ್ಕೂಟ ಬ್ಯಾನರ್ ಅಡಿಯಲ್ಲಿ ಕನ್ನಡ ಪರ ಸಂಘಟನೆಗಳು ಶುಕ್ರವಾರ ಕರ್ನಾಟಕ ಬಂದ್‌ಗೆ ಕರೆ ನೀಡಿವೆ.

ಹೋಟೆಲ್ ಮಾಲೀಕರ ಸಂಘದ ಸಭೆ ಇಂದು:

ಕರ್ನಾಟಕ ಬಂದ್‌ಗೆ ಹೊಟೇಲ್ ಮಾಲೀಕರ ಸಂಘ ಈಗಾಗಲೇ ಬೆಂಬಲ ವ್ಯಕ್ತಪಡಿಸಿದ್ದು, ಶುಕ್ರವಾರ ಹೋಟೆಲ್‌ ಮುಚ್ಚುವ ಬಗ್ಗೆ ಬೆಂಗಳೂರಿನಲ್ಲಿ ಇಂದು ತುರ್ತು ಸಭೆ ಕರೆಯಲಾಗಿದ್ದು, ಅಂತಿಮ ನಿರ್ಧಾರ ಪ್ರಕಟಿಸಲಾಗುತ್ತದೆ. ಇತ್ತೀಚೆಗೆ ಸೆಪ್ಟೆಂಬರ್ 26ರಂದು ನಡೆದ ಬೆಂಗಳೂರು ಬಂದ್ ವೇಳೆ ಹೋಟೆಲ್ ಮಾಲೀಕರ ಒಕ್ಕೂಟ ನೈತಿಕ ಬೆಂಬಲ ವ್ಯಕ್ತಪಡಿಸಿತ್ತು.

ಕರ್ನಾಟಕ ಬಂದ್‌ ಕಾರಣ ಓಲಾ, ಉಬರ್ ಚಾಲಕರು ಮತ್ತು ಮಾಲೀಕರ ಸಂಘ ತಮ್ಮ ಬೆಂಬಲ ಘೋಷಿಸಿದ ಶುಕ್ರವಾರ ಸೇವೆ ನೀಡದಿರಲು ನಿರ್ಧರಿಸಿದೆ. ಅಲ್ಲದೆ ಬಂದ್‌ಗೆ ಕೇವಲ ನೈತಿಕ ಬೆಂಬಲ ನೀಡಲು ಏರ್‌ಪೋರ್ಟ್ ಟ್ಯಾಕ್ಸಿ ಅಸೋಸಿಯೇಷನ್ ​​ಕೂಡ ನಿರ್ಧರಿಸಿದೆ. ಬೆಂಗಳೂರಿನಲ್ಲಿರುವ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ತನ್ನ ಬೆಂಬಲವನ್ನು ಘೋಷಿಸಿದೆ. ಶುಕ್ರವಾರ ಎಲ್ಲ ತನ್ನ ಕೆಲಸಗಳನ್ನು ನಿಲ್ಲಿಸಲು ತಿಳಿಸಲಾಗಿದೆ.

ವಾಟಾಳ್ ನಾಗರಾಜ್‌ರಿಂದ ಬೆಂಗಳೂರು ಪ್ರವಾಸ:

ಕನ್ನಡ ಒಕ್ಕೂಟ ಬ್ಯಾನರ್‌ ಅಡಿಯಲ್ಲಿ ಕರ್ನಾಟಕ ಬಂದ್‌ಗೆ ಕರೆ ನೀಡಿರುವ ವಾಟಾಳ್ ನಾಗರಾಜ್ ಅವರು ಶುಕ್ರವಾರ ಬೆಂಗಳೂರು ನಗರದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಜನರು ತಮ್ಮ ವ್ಯಾಪಾರ ಮತ್ತು ಸಂಸ್ಥೆಗಳನ್ನು ಮುಚ್ಚುವಂತೆ ಮನವಿ ಮಾಡಲಿದ್ದಾರೆ. ಇದಲ್ಲದೆ ಅವರು ಶುಕ್ರವಾರ ಬೆಳಗ್ಗೆ 10 ಗಂಟೆಗೆ ಟೌನ್ ಹಾಲ್ ನಿಂದ ಫ್ರೀಡಂ ಪಾರ್ಕ್ ವರೆಗೆ ಬೃಹತ್ ಜಾಥಾಕ್ಕೆ ಕರೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+