ಶುಕ್ರವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಸಿದ್ದರಾಮಯ್ಯ
ಬೆಂಗಳೂರು, ಸೆಪ್ಟೆಂಬರ್ 08 : ರಾಜ್ಯದ ಎಲ್ಲಾ ಸರ್ಕಾರಿ ಶಾಲಾ-ಕಾಲೇಜುಗಳಿಗೆ ಸೆಪ್ಟೆಂಬರ್ 9ರ ಶುಕ್ರವಾರ ರಜೆ ಘೋಷಣೆ ಮಾಡಲಾಗಿದೆ. 'ಜನರು ಶಾಂತಿಯುತವಾಗಿ ಪ್ರತಿಭಟನೆ ನಡೆಸಬೇಕು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
Must Read : ಬೆರಳ ತುದಿಯಲ್ಲಿ ರಿಲಯನ್ಸ್ ಕಾರ್ ವಿಮೆ ನವೀಕರಣ
ವಿಧಾನಸೌಧದಲ್ಲಿ ಗುರುವಾರ ಸಂಜೆ ಮಾತನಾಡಿದ ಸಿದ್ದರಾಮಯ್ಯ ಅವರು, 'ಎಲ್ಲಾ ಸರ್ಕಾರಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸರ್ಕಾರಿ ಕಚೇರಿಗಳಲ್ಲೂ ಶುಕ್ರವಾರ ಅಟೆಂಡೆನ್ಸ್ ಇರುವುದಿಲ್ಲ' ಎಂದು ಹೇಳಿದರು.[ಕಾವೇರಿಗಾಗಿ ಕಾವೇರಿದ ಕರ್ನಾಟಕ, ಬಂದ್ ದಿನ ಏನೆಲ್ಲ ಬಂದ್?]

'ಕರ್ನಾಟಕ ಬಂದ್ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ. ಹೊರರಾಜ್ಯಗಳಿಂದಲೂ ಪೊಲೀಸ್ ಪಡೆಗಳನ್ನು ಕರೆಸಿಕೊಳ್ಳಲಾಗುತ್ತಿದೆ. ಬಂದ್ ಹೆಸರಿನಲ್ಲಿ ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಹಾನಿ ಮಾಡಬಾರದು' ಎಂದು ಸಿದ್ದರಾಮಯ್ಯ ಮನವಿ ಮಾಡಿದರು.[ಟೆಕ್ಕಿಗಳ ವೀಕೆಂಡ್ ರಜಾ ಹಾಳು ಮಾಡಿದ ಕರ್ನಾಟಕ ಬಂದ್!]
ಬಂದ್ ವೇಳೆ ಸಾರ್ವಜನಿಕರು ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕಾಗಿ ವಿನಂತಿ. ನಮಗಾದ ಅನ್ಯಾಯಕ್ಕೆ ನಮ್ಮದೇ ಆಸ್ತಿಪಾಸ್ತಿಗಳ ಹಾನಿ ಬೇಡ. ಬಂದ್ ಶಾಂತಿಯುತವಾಗಿರಲಿ.
— CM of Karnataka (@CMofKarnataka) September 8, 2016
* ಖಾಸಗಿ ಶಾಳೆಗಳ ಒಕ್ಕೂಟ ಶುಕ್ರವಾರ ರಜೆ ಘೋಷಣೆ ಮಾಡಿದೆ
* ಸರ್ಕಾರಿ ಬಸ್ಸುಗಳ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆ ಇದೆ
* ಹೋಟೆಲ್, ಪೆಟ್ರೋಲ್ ಬಂಕ್‌ಗಳು ಬಂದ್ ಆಗಲಿವೆ
* ಟ್ಯಾಕ್ಸಿ, ಆಟೋಗಳ ಸಂಚಾರವೂ ಸ್ಥಗಿತಗೊಳ್ಳಲಿದೆ












Click it and Unblock the Notifications