Karnataka Bandh: ಶಾಲಾ ಕಾಲೇಜು ರಜೆ ಕುರಿತು ಅಪ್‌ಡೇಟ್
ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಹಲ್ಲೆಯನ್ನು ಖಂಡಿಸಿ ಇಂದು ಅಖಂಡ ಕರ್ನಾಟಕ ಬಂದ್ ಗೆ ಕನ್ನಡಪರ ಸಂಘಟನೆಗಳು ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಂದ್ ಬಿಸಿ ಕಾವೇರಿದ್ದು, ವಿವಿಧ ಜಿಲ್ಲೆಗಳಲ್ಲಿ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅಖಂಡ ಕರ್ನಾಟಕ ಬಂದ್‌ನ ಭಾಗವಾಗಿ ಇಂದು ರಾಜಧಾನಿ ಬೆಂಗಳೂರು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ, ರ‍್ಯಾಲಿಗಳು ನಡೆಯಲಿವೆ. ರಸ್ತೆಗಿಳಿದು ಮಹಾರಾಷ್ಟ್ರ, ಮರಾಠಿಗರು, ಕೇಂದ್ರ ಹಾಗೂ ರಾಜ್ಯ ಸರಕಾರದ ನಡೆ ಖಂಡಿಸಿ ಹೋರಾಟ ಮಾಡಲಾಗುವುದು ಎಂದು ಕನ್ನಡಪರ ಸಂಘಟನೆಗಳು ಘೋಷಿಸಿವೆ.
ಕೆಎಸ್‌ಆರ್‌ಟಿಸಿ ನಿರ್ವಾಹಕನ ಮೇಲಿನ ಮರಾಠಿಗರ ದೌರ್ಜನ್ಯ ಖಂಡಿಸಿ, ಕನ್ನಡಿಗರ ಮೇಲೆ ದೌರ್ಜನ್ಯ ಎಸಗಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಹಾಗೂ ಎಂಇಎಸ್ ಮತ್ತು ಇತರೆ ಮರಾಠ ಸಂಘಟನೆಗಳನ್ನು ನಿಷೇಸುವಂತೆ ಆಗ್ರಹಿಸಿ ಕನ್ನಡ ಸಂಘಟನೆಗಳು ಅಖಂಡ ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಇನ್ನೂ ಕರ್ನಾಟಕ ಬಂದ್‌ಗೆ ಸಾಕಷ್ಟು ಸಂಘಟನೆಗಳು ಬೆಂಬಲ ಸೂಚಿಸಿದ್ದರೆ, ಕೆಲವು ಸಂಘಟನೆಗಳು ನೈತಿಕ ಬೆಂಬಲವನ್ನಷ್ಟೇ ನೀಡಿವೆ. ಹೀಗಾಗಿ ಕನ್ನಡ ಸಂಘಟನೆಗಳಲ್ಲೇ ಬಂದ್ ಬಗ್ಗೆ ಗೊಂದಲವಿರುವಂತೆ ಕಾಣುತ್ತಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಂದ್ ಬಿಸಿ ಕಾವೇರಿದ್ದು, ಕೆಲ ಜಿಲ್ಲೆಗಳಲ್ಲಿ ಯಾವುದೇ ಬಂದ್ ಬಿಸಿ ತಟ್ಟಿಲ್ಲ. ಇನ್ನೂ ಚಿಕ್ಕಬಳ್ಳಾಪುರ ಜಿಲ್ಲೆಯ ಜನತೆ ಬಂದ್‌ಗೆ ಬೆಂಬಲವನ್ನ ಸೂಚಿಸಿಲ್ಲ. ಬಲವಂತವಾಗಿ ಬಂದ್ ಗೆ ಮುಂದಾದ್ರೆ ಕ್ರಮ ವಹಿಸುವುದಾಗಿ ಎಚ್ಚರಿಕೆ ನೀಡಿದ್ದ ಪೊಲೀಸ್ ಇಲಾಖೆ ಜಿಲ್ಲಾಡಳಿತ ತಿಳಿಸಿದೆ. ಕೇವಲ ಹತ್ತು ನಿಮಿಷ ಪಂಜಿನ ಮೆರವಣಿಗೆಗೆ ನಡೆಸಿದ ಕನ್ನಡ ಪರ ಸಂಘಟನೆಗಳು ಜಿಲ್ಲಾಢಳಿತ ಹಾಗು ಪೊಲೀಸ್ ಇಲಾಖೆಗೆ ಎಚ್ಚರಿಕೆಗೆ ಬೆದರಿವೆ ಎನ್ನಲಾಗಿದೆ. ಈಗಾಗಲೇ ಎಂದಿನಂತೆ ವಾಹನ ಸಂಚಾರ ಸಹಜ ಸ್ಥಿತಿಯಲ್ಲಿದೆ.
ಇನ್ನು ಚಿಕ್ಕಬಳ್ಳಾಪುರದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ರವೀಂದ್ರ ಅಖಂಡ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ವಿದ್ಯಾರ್ಥಿಗಳು ಗೊಂದಲ ಮಾಡಿಕೊಳ್ಳದೆ ಶಾಲೆ ಮತ್ತು ಕಾಲೇಜಿಗೆ ತೆರಳಿ. ಚಿಕ್ಕಬಳ್ಳಾಪುರದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ. ಜಿಲ್ಲೆಯಲ್ಲಿ ಶಾಲೆ ಮತ್ತು ಕಾಲೇಜುಗಳು ಎಂದಿನಂತೆ ನಡೆಯಲಿವೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿಎನ್ ರವೀಂದ್ರ ಮಾಹಿತಿ ನೀಡಿದರು.












Click it and Unblock the Notifications