Karnataka Bandh: ಪ್ರತಿಭಟನೆ ಮಾಡಲಿ ಆದರೆ ಬಂದ್ ಮಾಡುವಂತಿಲ್ಲ: ಸಚಿವ ಡಾ.ಜಿ ಪರಮೇಶ್ವರ್ ಎಚ್ಚರಿಕೆ!
ಬೆಂಗಳೂರು ಸೆಪ್ಟೆಂಬರ್ 28: ಕಾವೇರಿ ನೀರು ತಮಿಳುನಾಡಿಗೆ ಬಿಡುವುದನ್ನು ಖಂಡಿಸಿ ಶುಕ್ರವಾರ ಕರ್ನಾಟಕ ಬಂದ್‌ಗೆ ವಿವಿಧ ಸಂಘಟನೆಗಳು ಕರೆ ನೀಡಿವೆ. ಈ ನಡುವೆ ಪ್ರತಿಭಟನೆ ಮಾಡಲಿ ಆದರೆ ಬಂದ್ ಮಾಡುವಂತಿಲ್ಲ ಎಂದು ಸಂಘಟನೆಗಳಿಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್ ಅವರು, 'ಬಂದ್‌ಗೆ ಕರೆ ಕೊಟ್ಟ ಸಂಘಟನೆಗಳಿಗೆ ತಿಳಿಸಲಾಗಿದೆ. ಕೋರ್ಟ್ ಕೂಡ ಹೇಳಿದೆ. ಯಾವುದೇ ಬಂದ್ ಮಾಡುವಂತಿಲ್ಲ. ಇದನ್ನು ಮೂರಿ ಮಾಡಿದರೇ ಕಾನೂನುಕ್ರಮ ಕೈಗೊಳ್ಳುವುದಾಗಿ' ಹೇಳಿದ್ದಾರೆ. ನೆರೆಯ ರಾಜ್ಯ ತಮಿಳುನಾಡಿಗೆ ಕಾವೇರಿ ನೀರು ಹರಿಸದಿರಲು ರಾಜ್ಯ ಸರ್ಕಾರ ಯಾವುದೇ ಪ್ರಯತ್ನ ಮಾಡಿಲ್ಲವೆಂದು ಆರೋಪಿಸಿ ರೈತರು, ಕನ್ನಡಪರ ಸಂಘಟನೆಗಳು ಮತ್ತು ವಿರೋಧ ಪಕ್ಷಗಳು ಆಕ್ರೋಶಗೊಂಡಿದ್ದಾರೆ. ಹೀಗಾಗಿ ಶುಕ್ರವಾರ (ಸೆಪ್ಟೆಂಬರ್ 29) ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ.

ಕಳೆದ ಒಂದು ವಾರದಿಂದಲೂ ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಒತ್ತಾಯಿಸಿ ಕರ್ನಾಟಕದ ರಾಜಧಾನಿ ಬೆಂಗಳೂರು, ಹಳೇ ಮೈಸೂರು ಭಾಗ, ಮಂಡ್ಯ ಹೀಗೆ ವಿವಿಧ ಜಿಲ್ಲೆಗಳಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಕಳೆದ ಮಂಗಳವಾರ ಬೆಂಗಳೂರು ಬಂದ್‌ಗೆ ಕರೆ ನೀಡಲಾಗಿತ್ತು. ಈ ಬಂದ್ ಸಿಲಿಕಾನ್ ಸಿಟಿ ಮಂದಿ ಸಾಥ್ ನೀಡಿದ್ದರು. ಬಹುತೇಕ ಕಡೆ ಸ್ವತಂ ಪ್ರೇರಿತರಾಗಿ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚಿ ಕಾವೇರಿ ಹೋರಾಟಕ್ಕೆ ತಮ್ಮ ಬೆಂಬಲವನ್ನು ಸೂಚಿಸಿದ್ದರು.
ಇನ್ನೂ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ ಸೇರಿದಂತೆ ವಿವಿಧ ಸಂಘಟನೆಗಳು ಕರ್ನಾಟಕ ಬಮದ್ ಗೆ ಕರೆ ನೀಡಿವೆ. ಈ ಬಗ್ಗೆ ಸಚಿವ ಜಿ ಪರಮೇಶ್ವರ್ ಮಾತನಾಡಿ, ಪ್ರತಿಭಟನೆ ಮಾಡೋದಕ್ಕೆ ಸಮಸ್ಯೆ ಇಲ್ಲ ಆದರೆ ಬಂದ್‌ಗೆ ಅವಕಾಶವಿಲ್ಲ ಎಂದಿದ್ದಾರೆ. ಜೊತೆಗೆ ಯಾವ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರಿಗೆ ನಿರ್ದೇಶನ ಕೊಡುವ ಅಗತ್ಯವಿಲ್ಲ ಎಂದರು.
ಈಗಾಗಲೇ ಬೆಂಗಳೂರು ಬಂದ್ (ಸೆ.26) ಮಾಡಿ ಕೋಟ್ಯಾಂತರ ರೂಪಾಯಿ ನಷ್ಟವಾಗಿದೆ. ಈಗ ಮತ್ತೆ ಬಂದ್ ಮಾಡಿದರೆ ಆರ್ಥಿಕ ಸಮಸ್ಯೆ ಆಗಲಿದೆ. ಮೊದಲೇ ಮಳೆ ಇಲ್ಲದ ಕಾರನ ಸಮಸ್ಯೆ ಉಂಟಾಗಿದೆ. ಇದರ ನಡುವೆ ಬಂದ್ ಮಾಡಿದರೇ ಇನ್ನಷ್ಟು ಸಮಸ್ಯೆ ಆಗಲಿದೆ. ಇದನ್ನೆಲ್ಲ ಸಂಘಟನೆಯವರು ತಿಳಿದುಕೊಳ್ಳಬೇಕು. ನಮಗೆ ಪ್ರತಿಭಟನೆ ಮಾಡುವ ಹಕ್ಕು ಇದೆ. ಆದರೆ ಬಂದ್ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

ಜೆಡಿಎಸ್-ಬಿಜೆಪಿ ಹೊಸ ಮದುವೆ
ಕಾವೇರಿ ವಿಚಾರದಲ್ಲಿ ಯಾರೂ ಕೂಡ ರಾಜಕೀಯ ಮಾಡಬಾರದು. ರಾಜ್ಯದ ಹಿತ ಕಾಪಾಡುವುದು ನಮ್ಮೆಲ್ಲರ ಕರ್ತವ್ಯ. ಜೆಡಿಎಸ್-ಬಿಜೆಪಿ ಹೊಸ ಮದುವೆಯಾಗಿವೆ. ಬಿಜೆಪಿ ಕಾಂಗ್ರೆಸ್ ಸರ್ಕಾರವನ್ನು ದೂಷಿಸುವುದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ. ವಿರೋಧ ಪಕ್ಷಗಳು ರಾಜ್ಯ ಸರ್ಕಾರಕ್ಕೆ ಸಹಕಾರ ನೀಡಬೇಕು ಎಂದು ಕಿಡಿ ಕಾರಿದರು.












Click it and Unblock the Notifications