ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿಸೆಂಬರ್ 5ಕ್ಕೆ ಕರ್ನಾಟಕ ಬಂದ್: ಏನಿರುತ್ತೆ, ಏನಿರಲ್ಲ?

|
Google Oneindia Kannada News

ಬೆಂಗಳೂರು, ನವೆಂಬರ್ 21: ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ವಿರೋಧಿಸಿ ಡಿಸೆಂಬರ್ 5 ರಂದು ಕರ್ನಾಟಕ ಬಂದ್ ಮಾಡಲು ಕನ್ನಡ ಪರ ಸಂಘಟನೆಗಳು ಮುಂದಾಗಿವೆ. ಅಂದು ಯಾವೆಲ್ಲಾ ಸೇವೆಗಳು ಲಭ್ಯವಿರಲಿದೆ, ಯಾವುದಿಲ್ಲ ಎಂಬುದರ ಕುರಿತು ಮಾಹಿತಿ ಇಲ್ಲಿದೆ.

ಅಂದು ಆಟೋ, ಕ್ಯಾಬ್‌ಗಳು ಲಭ್ಯವಿರುವುದಿಲ್ಲ, ಬಾರ್‌ಗಳು ಬಂದ್ ಆಗಿರಲಿವೆ. ಅಟೋ ಡ್ರೈವರ್‌ಗಳು ಹಾಗೂ ಟ್ಯಾಕ್ಸಿ ಸಂಘಟನೆಗಳು ಕೂಡ ಬೆಂಬಲ ಸೂಚಿಸಿವೆ.

ಡಿಸೆಂಬರ್ 5ರ ಕರ್ನಾಟಕ ಬಂದ್; ವಿವಿಧ ಸಂಘಟನೆಗಳ ಬೆಂಬಲಡಿಸೆಂಬರ್ 5ರ ಕರ್ನಾಟಕ ಬಂದ್; ವಿವಿಧ ಸಂಘಟನೆಗಳ ಬೆಂಬಲ

ಸರ್ಕಾರವು ಮರಾಠ ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರೂ.ಗಳನ್ನು ಮೀಸಲಿಟ್ಟಿರುವುದಕ್ಕೆ ಕನ್ನಡ ಚಳವಳಿ ಪಕ್ಷದ ವಾಟಾಳ್ ನಾಗರಾಜ್ ಹಾಗೂ ಇತರೆ ಕನ್ನಡ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

Karnataka bandh: No Autos And Cabs Services, Bars To Remain Closed On December 5

ಬಾರ್ ಮಾಲೀಕರು ಕುಡಾ ಬಂದ್‌ಗೆ ಬೆಂಬಲ ಸೂಚಿಸಿದ್ದಾರೆ. ಆದರೆ ಕರ್ನಾಟಕ ಹೋಟೆಲ್ ಮಾಲೀಕರ ಸಂಘ ಬಂದ್‌ಗೆ ಬೆಂಬಲ ನೀಡುತ್ತಿಲ್ಲ. ಪೆಟ್ರೋಲ್ ಬಂಕ್‌ಗಳು ಕೂಡ ತೆರೆದಿರಲಿವೆ.

ಡಿಸೆಂಬರ್ 5 ರಂದು ಬೆಳಗ್ಗೆ 6 ರಿಂದ ಸಂಜೆ ಆರು ಗಂಟೆಯವರೆಗೆ ಬಂದ್ ನಡೆಯಲಿದೆ.

ವಿವಿಧ ಕನ್ನಡಪರ ಸಂಘಟನೆಗಳು, ಓಲಾ, ಊಬರ್ ಅಸೋಸಿಯೇಷನ್, ಆಟೋ ಅಸೋಸಿಯೇಷನ್ ಮತ್ತು ಸ್ಕೂಲ್ ವ್ಯಾನ್ ಅಸೋಸಿಯೇಷನ್ ಬಂದ್‍ಗೆ ಬೆಂಬಲ ನೀಡಿವೆ. ಜೊತೆಗೆ ಬಂದ್ ದಿನ 5 ಲಕ್ಷ ಜನರು ಬೆಂಗಳೂರಿನಲ್ಲಿ ಮೆರವಣಿಗೆ ನಡೆಸುವ ಸಿದ್ಧತೆ ಮಾಡಿಕೊಂಡಿದ್ದಾರೆ.

Recommended Video

26 /11 ಅದೇ ದಿನ ಮತ್ತೊಂದು ದಾಳಿ ಸಾಧ್ಯತೆ | Oneindia Kannada

ಶುಕ್ರವಾರ ನಡೆದ ಸಭೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು, ಫಿಲ್ಮ್ ಚೇಂಬರ್ ನ ಮಾಜಿ ಅಧ್ಯಕ್ಷರಾದ ಸಾರಾ ಗೋವಿಂದು, ಕರವೇ ಅಧ್ಯಕ್ಷ ಶಿವರಾಮೇಗೌಡ, ಮಂಜುನಾಥ್ ದೇವ, ಗಿರೀಶ್ ಗೌಡ, ಪಾಲನೇತ್ರ, ಟಿ.ಪಿ ಪ್ರಸನ್ನಕುಮಾರ್, ಅಮ್ಮಿಚಂದ್ರು, ನಾರಾಯಣ ಸ್ವಾಮಿ, ವಾಟಾಳ್ ವೆಂಕಟೇಶ್, ನರಸಿಂಹ ಮೂರ್ತಿ, ಮುಭಾರಕ್ ಪಾಷಾ, ಸಾಧಿಕ್ ಪಾಷಾ, ಬಾಲಾಜಿ ತಿಮ್ಲಾಪುರ, ಕೊಪ್ಪಳ ವಿಜಯ್, ಸಯ್ಯದ್ ಜಿಲಾನಿ ಪಾಷಾ, ಎರ್ರಿಸ್ವಾಮಿ, ಮುನ್ನಾವರ, ಪಾರ್ಥಸಾರಥಿ, ಬಾಲಾಜಿ ಕೃಷ್ಣಮೂರ್ತಿ, ವೇಣುಗೋಪಾಲ್, ಸೇರಿದಂತೆ ವಿವಿಧ ಕನ್ನಡ ಪರ ಸಂಘಟನೆಗಳ ಮುಖಂಡರೆಲ್ಲರು ಭಾಗವಹಿಸಿದ್ದರು.

English summary
Auto rickshaws and cabs will not operate on December 5 as the auto drivers and taxi unions have offered their support for the state-wide bandh called by the pro-Kannada groups.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X