ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕುಡಿಯುವ ನೀರಿಗಾಗಿ ಏಪ್ರಿಲ್ 7ರಂದು ಕರ್ನಾಟಕ ಬಂದ್

ಕುಡಿಯುವ ನೀರಿನ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಆಗ್ರಹಿಸಿ ಹಲವು ಸಂಘಟನೆಗಳು ಏಪ್ರಿಲ್ 7 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿವೆ.

By ವಿಕಾಸ್ ನಂಜಪ್ಪ
|
Google Oneindia Kannada News

ಬೆಂಗಳೂರು, ಮಾರ್ಚ್ 1: ಕುಡಿಯುವ ನೀರಿನ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಆಗ್ರಹಿಸಿ ಹಲವು ಸಂಘಟನೆಗಳು ಏಪ್ರಿಲ್ 7 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿವೆ.

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ತೀವ್ರ ಕೊರತೆ ಕಂಡು ಬಂದಿದೆ. ಹೀಗಾಗಿ ಕುಡಿಯುವ ನೀರಿನ ಯೋಜನೆಗಳನ್ನು ತಕ್ಷಣ ಜಾರಿಗೆ ತರಬೇಕು. ಅಷ್ಟೆ ಅಲ್ಲದೆ ಮಹದಾಯಿ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಧ್ಯ ಪ್ರವೇಶ ಮಾಡಬೇಕು ಎಂದು ಒತ್ತಾಯಿಸಿ ಒಂದು ದಿನದ ಹರತಾಳಕ್ಕೆ ಕರೆ ನೀಡಲಾಗಿದೆ. [ಕಾವೇರಿ ಜನಿಸುವ ಕೊಡಗಿನ ಜನರು ನೀರಿಗಾಗಿ ಪಡುವ ಪಾಡಿದು]

Karnataka bandh on April 7

ಮಂಗಳವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಹೋರಾಟಗಾರ ವಾಟಾಳ್ ನಾಗರಾಜ್, ಕುಡಿಯುವ ನೀರಿನ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಆಗ್ರಹಿಸಿ ಏಪ್ರಿಲ್ 7 ರಂದು ಕರ್ನಾಟಕ ಬಂದ್ ನಡೆಸುವುದಾಗಿ ಹೇಳಿದ್ದಾರೆ.

ಸದ್ಯದ ಮಟ್ಟಿಗೆ ಬಂದ್ ನಡೆಯುತ್ತೋ ಇಲ್ಲವೋ ಗೊತ್ತಿಲ್ಲ. ಆದರೆ ಮಹದಾಯಿ ಹೋರಾಟದ ಕಾವು ಈಗಾಗಲೇ ಉತ್ತರ ಕರ್ನಾಟಕದಲ್ಲಿ ಜೋರಾಗಿದೆ. ಹಲವು ಸಂಘಟನೆಗಳು ಹಿಂದಿನಿಂದಲೂ ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರವೇಶ ಮಾಡಬೇಕು ಎಂದು ಒತ್ತಾಯಿಸುತ್ತಲೇ ಬಂದಿವೆ. ಹೀಗಾಗಿ ಬಂದ್ ನಡೆಯುವ ಸಾಧ್ಯತೆಗಳು ಜಾಸ್ತಿ. [ಹಸಿದ ಅನ್ನದಾತರ ಹೊಟ್ಟೆ ತುಂಬಿಸಲಿದೆ ಡಿಸಿಸಿ ಬ್ಯಾಂಕ್: ಕೆಎನ್ನಾರ್]

English summary
Several organisations have called for a Karnataka bandh on April 7 seeking early implementation of drinking water projects. It has been pointed out that there is a acute drinking water crisis in the districts of Kolar and Chikkaballapur.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X