Karnataka Bandh-School Holiday: ನಾಳೆ ಕರ್ನಾಟಕ ಬಂದ್​, ಶಾಲಾ - ಕಾಲೇಜುಗಳಿಗೆ ರಜೆ ಇರುತ್ತಾ, ಯಾವ ಸೇವೆ ಇರಲಿದೆ

Karnataka Bandh-School Holiday: ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಹಾಗೂ ಕರ್ನಾಟಕದ ಪ್ರಮುಖ ನೀರಾವರಿ ಯೋಜನೆಗಳನ್ನು ಅನುಷ್ಠಾನ ಮಾಡಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಆಗಸ್ಟ್ 13ರ ಗುರುವಾರದಂದು 'ಕರ್ನಾಟಕ ಬಂದ್'ಗೆ (Karnataka Bandh) ಕರೆ ನೀಡಿವೆ. ಹಿರಿಯ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರ ನೇತೃತ್ವದಲ್ಲಿ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ನಾಳೆ ಏನು ಇರಲಿದೆ ಹಾಗೂ ಏನು ಇರಲ್ಲ ಎನ್ನುವ ಸಂಪೂರ್ಣ ವಿವರ ಈ ಲೇಖನದಲ್ಲಿದೆ.

ಕಾವೇರಿ ನದಿ ನೀರು ಹಂಚಿಕೆ ವಿಷಯವು ದಿನದಿಂದ ದಿನಕ್ಕೆ ವಿವಾದದ ಸ್ವರೂಪ ಪಡೆದುಕೊಳ್ಳುತ್ತಿದೆ. ವಿವಿಧ ಕನ್ನಡಪರ ಸಂಘಟನೆಗಳು ಆಗಸ್ಟ್‌ 13ರ ಗುರುವಾರ ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಮುಖ್ಯವಾಗಿ ಕರ್ನಾಟಕ ಬಂದ್‌ನ ಪರಿಣಾಮವು ಬೆಂಗಳೂರಿನ ಮೇಲೆ ಹೆಚ್ಚು ಬೀರುವ ಸಾಧ್ಯತೆ ಇದೆ. ತಮಿಳುನಾಡು ಮತ್ತು ಕರ್ನಾಟಕದ ನಡುವಿನ ಕಾವೇರಿ ನೀರು ಹಂಚಿಕೆ ವಿವಾದ ಉಲ್ಬಣಗೊಂಡಿದೆ. ಹೀಗಾಗಿ, ನಾಳೆ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಆಗಸ್ಟ್ 12 ರಿಂದ 15 ದಿನಗಳವರೆಗೆ ತಮಿಳುನಾಡಿಗೆ ಪ್ರತಿದಿನವು 12,000 ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯೂಎಂಎ) ಕರ್ನಾಟಕಕ್ಕೆ ನಿರ್ದೇಶನ ನೀಡಿದ್ದು, ಮುಖ್ಯವಾಗಿ ಇದನ್ನು ವಿರೋಧಿಸಿ ಹಾಗೂ ಕರ್ನಾಟಕ ಸರ್ಕಾರದ ಧೋರಣೆಯನ್ನು ವಿರೋಧಿಸಿ ನಾಳೆ ಬಂದ್‌ಗೆ ಕರೆ ನೀಡಲಾಗಿದೆ.

Karnataka Bandh

ಕಳೆದ ಒಂದು ವಾರಕ್ಕೂ ಹೆಚ್ಚು ಅವಧಿಯಿಂದ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಆಗುತ್ತಿದ್ದು. ಕಾವೇರಿ ನದಿ ನೀರು ಹಂಚಿಕೆ ವಿವಾದ ಸ್ವಲ್ಪ ತಣ್ಣಗಾಗಿದೆ. ಆದರೆ, ಕಾವೇರಿ ನದಿ ನೀರು ಹಂಚಿಕೆ ವಿಷಯದ ಬಗ್ಗೆ ತಮಿಳುನಾಡಿನ ವಿಧಾನಸಭೆಯಲ್ಲಿ ನಿರಂತರವಾಗಿ ಚರ್ಚೆಗಳು ನಡೆಯುತ್ತಿವೆ. ನೀರು ಹಂಚಿಕೆ ಆದೇಶದ ಹೊರತಾಗಿಯೂ ಪ್ರತಿಭಟನೆ ಮುಂದುವರಿಯಲಿದೆ ಎಂದು ಕನ್ನಡಪರ ಸಂಘಟನೆಯ ವಾಟಾಳ್ ನಾಗರಾಜ್ ಅವರು ಹೇಳಿದ್ದಾರೆ.

"ಯಾವುದೇ ಬೆಲೆ ತೆತ್ತಾದರೂ ನಾವು ಬಂದ್ ಮಾಡಲಿದ್ದೇವೆ. ನಮ್ಮ ಮುಷ್ಕರಕ್ಕೆ ಎಲ್ಲರೂ ಬೆಂಬಲ ನೀಡಬೇಕೆಂದು ನಾನು ಮನವಿ ಮಾಡುತ್ತೇನೆ" ಎಂದಿದ್ದಾರೆ. ಮಂಡ್ಯ ಜಿಲ್ಲಾ ರೈತ ಕಲ್ಯಾಣ ರಕ್ಷಣಾ ಸಮಿತಿಯು ಬುಧವಾರ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆಯ ಬಳಿ ಪ್ರತಿಭಟನೆಯನ್ನು ಘೋಷಿಸಿದೆ. ರೈತರು, ಕನ್ನಡ ಸಂಘಟನೆಗಳು, ಕಾರ್ಮಿಕರು, ಮಹಿಳೆಯರು ಹಾಗೂ ಸಾರ್ವಜನಿಕರೆಲ್ಲರೂ ಬಂದ್‌ಗೆ ಬೆಂಬಲ ನೀಡುವಂತೆ ಮನವಿ ಮಾಡಲಾಗಿದೆ.

Karnataka Bandh-School Holiday: ಕರ್ನಾಟಕ ಬಂದ್ ಶಾಲಾ - ಕಾಲೇಜುಗಳಿಗೆ ರಜೆ ಇರಲಿದೆಯೇ ?

ಆಗಸ್ಟ್ 13 ರಂದು ಕರ್ನಾಟಕ ಬಂದ್ ಇದೆ. ಆದರೆ, ನಾಳೆ ಶಾಲಾ - ಕಾಲೇಜುಗಳಿಗೆ ರಜೆ ಇರುವುದು ಬಹುತೇಕ ಅನುಮಾನ ಎಂದೇ ಹೇಳಲಾಗಿದೆ. ನಾಳೆ ಶಾಲಾ - ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸುವ ಸಾಧ್ಯತೆ ಇದೆ. ಇದಕ್ಕೆ ಮುಖ್ಯ ಕಾರಣ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಆಗಸ್ಟ್‌ 13ರ ಗುರುವಾರ ಶಾಲಾ-ಕಾಲೇಜುಗಳಿಗೆ ಮೊದಲು ರಜೆ ಘೋಷಿಸಿದ್ದ ಕರ್ನಾಟಕ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ ಆಡಳಿತ ಮಂಡಳಿ ಒಕ್ಕೂಟ (KAMS)ವು ಇದೀಗ ರಜೆಯನ್ನು ಹಿಂಪಡೆದಿದೆ. ಇದೀಗ ಶಾಲಾ - ಕಾಲೇಜುಗಳಿಗೆ ರಜೆ ನೀಡುವುದರಿಂದ ಶೈಕ್ಷಣಿಕ ವೇಳಾಪಟ್ಟಿಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ ಎನ್ನಲಾಗಿದೆ.

ಆದಾಗ್ಯೂ KAMS ಕರ್ನಾಟಕ ಬಂದ್‌ಗೆ ನೈತಿಕ ಬೆಂಬಲ ನೀಡಿದೆ. ಶಾಲಾ ಆಡಳಿತ ಮಂಡಳಿಗಳು, ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿ ಸಂಕೇತವಾಗಿ ಕಪ್ಪು ರಿಬ್ಬನ್‌ಗಳು ಅಥವಾ ಕಪ್ಪು ಪಟ್ಟಿಗಳನ್ನು ಧರಿಸಲು ತಿಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬ್ಯಾಂಕ್‌ಗಳು, ಆಸ್ಪತ್ರೆಗಳು ಮತ್ತು ಸಾರ್ವಜನಿಕ ಸಾರಿಗೆ ವ್ಯವಸ್ಥೆ ಹೇಗೆ

ಇನ್ನು ಆಗಸ್ಟ್ 13 ರಂದು ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ನಿಗದಿಯಾಗಿರುವ ‌ಎಲ್ಲ ಸಾರ್ವಜನಿಕ ಸೇವೆಗಳು ಸಹ ಎಂದಿನಂತೆ ಇರುವ ಸಾಧ್ಯತೆ ಇದೆ. ಬಂದ್ ಸಮಯದಲ್ಲಿ ಬ್ಯಾಂಕ್‌ಗಳು, ಆಸ್ಪತ್ರೆಗಳು, ಔಷಧಾಲಯಗಳು, ಸಾರ್ವಜನಿಕ ಸಾರಿಗೆ ಹಾಗೂ ಇತರ ಅಗತ್ಯ ಸೇವೆಗಳು ಕಾರ್ಯನಿರ್ವಹಿಸುವ ನಿರೀಕ್ಷೆ ಇದೆ.

ವರ್ಕ್‌ಫ್ರಮ್ ಹೋಮ್ ಆಯ್ಕೆ

ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿರುವ ಅನೇಕ ಐಟಿ ಕಂಪನಿಗಳು, ಸ್ಟಾರ್ಟ್ ಅಪ್‌ಗಳು ಮತ್ತು ಕಾರ್ಪೊರೇಟ್ ಕಚೇರಿ ಈಗಾಗಲೇ ವರ್ಕ್‌ಫ್ರಮ್ ಹೋಮ್ ಆಯ್ಕೆಯನ್ನು ನೀಡಿವೆ.

ನಮ್ಮ ಮೆಟ್ರೋ ಸಂಚಾರ ಇರಲಿದೆಯೇ ?

ಇನ್ನು ನಾಳೆ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಬೆಂಗಳೂರಿನ ನಮ್ಮ ಮೆಟ್ರೋ ಸಂಚಾರ ಇರಲಿದೆಯೇ ಇಲ್ಲವೇ ಎನ್ನುವ ಅನುಮಾನ ಹಲವರಲ್ಲಿ ಇದೆ. ಆದರೆ ನಾಳೆ ಮೆಟ್ರೋ ಸಂಚಾರದ ಬಂದ್‌ನ ಬಗ್ಗೆ ನಮ್ಮ ಮೆಟ್ರೋ ಅಧಿಕೃತ ಮಾಹಿತಿ ನೀಡಿಲ್ಲ. ಹೀಗಾಗಿ, ನಾಳೆ ಮೆಟ್ರೋ ಸಂಚಾರ ಸಹ ಎಂದಿನಂತೆ ಇರುವ ನಿರೀಕ್ಷೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+