ಕರ್ನಾಟಕ ಬಂದ್; ಸರ್ಕಾರಿ ಶಾಲಾ-ಕಾಲೇಜುಗಳಿಗೆ ರಜೆ ಇದೆಯೇ?

ಬೆಂಗಳೂರು, ಫೆಬ್ರವರಿ 12 : ಕರ್ನಾಟಕ ಸಂಘಟನೆಗಳ ಒಕ್ಕೂಟ ಫೆಬ್ರವರಿ 13ರ ಗುರುವಾರ ಕರ್ನಾಟಕ ಬಂದ್ಗೆ ಕರೆ ನೀಡಿದೆ. ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯ ತನಕ ಬಂದ್ ನಡೆಯಲಿದ್ದು, ಹಲವಾರು ಸಂಘಟನೆಗಳು ಬೆಂಬಲ ಘೋಷಣೆ ಮಾಡಿವೆ.

ಸರ್ಕಾರಿ ಶಾಲಾ-ಕಾಲೇಜುಗಳಿಗೆ ಗುರುವಾರ ರಜೆಯನ್ನು ಘೋಷಣೆ ಮಾಡಿಲ್ಲ. ಖಾಸಗಿ ಶಾಲಾ-ಕಾಲೇಜುಗಳು ಬುಧವಾರ ಸಂಜೆ ಈ ಕುರಿತು ತೀರ್ಮಾನವನ್ನು ಕೈಗೊಳ್ಳಲಿವೆ. ಗುರುವಾರ ನಡೆಯಬೇಕಿರುವ ಯಾವುದೇ ಪರೀಕ್ಷೆಯನ್ನು ಇನ್ನೂ ಮುಂದೂಡಿಲ್ಲ.

Karnataka Bandh On Feb 13 No Holiday For Govt School And Colleges

ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಧ್ಯಮಗಳ ಜೊತೆ ಮಾತನಾಡಿದ್ದು, "ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಇರುವುದಿಲ್ಲ. ಪರಿಸ್ಥಿತಿಗೆ ಅನುಗುಣವಾಗಿ ಕ್ರಮಕ್ಕೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ" ಎಂದು ಹೇಳಿದರು.

ಖಾಸಗಿ ಶಾಲೆಗಳು ರಜೆ ಘೋಷಣೆ ಮಾಡುವ ಕುರಿತು ಯಾವುದೇ ತೀರ್ಮಾನ ಕೈಗೊಂಡಿಲ್ಲ. ಆದರೆ, ಚಾಲಕರ ಸಂಘಟನೆಗಳು ಬಂದ್‌ಗೆ ಬೆಂಬಲ ಕೊಟ್ಟಿವೆ. ಆದ್ದರಿಂದ ಶಾಲಾ ಬಸ್‌ಗಳ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆ ಇದೆ.

ಕರ್ನಾಟಕ ಬಂದ್‌ ಹಿನ್ನಲೆಯಲ್ಲಿ ಬೆಂಗಳೂರು ನಗರದಲ್ಲಿ ಗುರುವಾರ 6 ಲಕ್ಷ ವಾಹನಗಳ ಸಂಚಾರ ಸ್ಥಗಿತಗೊಳ್ಳಲಿದೆ. 10 ಸಾವಿರ ವಿಮಾನ ನಿಲ್ದಾಣದ ಟ್ಯಾಕ್ಸಿಗಳು ಓಡಾಟ ಬಂದ್ ಆಗಲಿದೆ. ಖಾಸಗಿ ಬಸ್‌ಗಳ ಸಂಚಾರವೂ ಸ್ಥಗಿತಗೊಳ್ಳಲಿದೆ.

ಸುಮಾರು 600 ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿವೆ. 25 ಸಾವಿರ ಮ್ಯಾಕ್ಸಿಕ್ಯಾಬ್, 9 ಸಾವಿರ ಖಾಸಗಿ ಬಸ್‌ಗಳ ಸಂಚಾರವೂ ಸ್ಥಗಿತಗೊಳ್ಳಲಿದೆ. ಆದರೆ, ಕೆಎಸ್ಆರ್‌ಟಿಸಿ, ಬಿಎಂಟಿಸಿ, ನಮ್ಮ ಮೆಟ್ರೋ ಸಂಚಾರದಲ್ಲಿ ಯಾವುದೇ ವ್ಯತ್ಯಯ ಉಂಟಾಗುವುದಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+