• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಫೆಬ್ರವರಿ 13ರ ಕರ್ನಾಟಕ ಬಂದ್; ನಿಮಗಿದು ತಿಳಿದಿರಲಿ

|
   ಫೆಬ್ರವರಿ 13ರ ಕರ್ನಾಟಕ ಬಂದ್ ಬಗ್ಗೆ ನೀವು ತಿಳಿಯಬೇಕಾದ ವಿಷಯಗಳು | Karnataka Bandh | Feb 13th

   ಬೆಂಗಳೂರು, ಫೆಬ್ರವರಿ 10 : ಕರ್ನಾಟಕ ಸಂಘಟನೆಗಳ ಒಕ್ಕೂಟ ಗುರುವಾರ ಕರೆ ನೀಡಿರುವ ಬಂದ್‌ಗೆ 400ಕ್ಕೂ ಅಧಿಕ ಸಂಘಟನೆಗಳು ಬೆಂಬಲ ನೀಡಿವೆ. ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯ ತನಕ ಬಂದ್ ನಡೆಸಲಾಗುತ್ತದೆ.

   ಕರ್ನಾಟಕ ಸಂಘಟನೆಗಳ ಒಕ್ಕೂಟ ಫೆಬ್ರವರಿ 13ರಂದು ಕರ್ನಾಟಕ ಬಂದ್ ಕರೆ ನೀಡಿದೆ. ಓಲಾ, ಊಬರ್ ಮತ್ತು ಕೆಲವು ಆಟೋ ಸಂಘಟನೆಗಳು ಬಂದ್‌ಗೆ ಬೆಂಬಲ ಘೋಷಣೆ ಮಾಡಿವೆ. ಇನ್ನೂ ಎರಡು ದಿನ ಬಾಕಿ ಇದ್ದು, ಹಲವಾರು ಸಂಘಟನೆಗಳು ಅಂತಿಮ ತೀರ್ಮಾನ ತೆಗೆದುಕೊಂಡಿಲ್ಲ.

   ಫೆ.13ರ ಕರ್ನಾಟಕ ಬಂದ್; 100ಕ್ಕೂ ಅಧಿಕ ಸಂಘಟನೆಗಳ ಬೆಂಬಲ

   "ಫೆಬ್ರವರಿ 13ರ ಗುರುವಾರ ಕರ್ನಾಟಕ ಬಂದ್‌ ಅಂಗವಾಗಿ ಟೌನ್‌ ಹಾಲ್‌ನಿಂದ ಫ್ರೀಡಂ ಪಾರ್ಕ್ ತನಕ ಪ್ರತಿಭಟನಾ ಜಾಥಾ ನಡೆಸಲಾಗುತ್ತದೆ" ಎಂದು ಕರ್ನಾಟಕ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಾಗೇಶ್ ಹೇಳಿದ್ದಾರೆ.

   ಫೆಬ್ರವರಿ 13ರಂದು ಕರ್ನಾಟಕ ಬಂದ್‌ಗೆ ಕರೆ

   ಸರೋಜಿನಿ ಮಹಿಷಿ ವರದಿ ಜಾರಿಗೊಳಿಸಬೇಕು, ವರದಿಯಲ್ಲಿರುವಂತೆ ಕನ್ನಡಿಗರಿಗೆ ಉದ್ಯೋಗ ಸಿಗಬೇಕು ಎಂದು ಆಗ್ರಹಿಸಿ ಬಂದ್ ಕರೆ ನೀಡಲಾಗಿದೆ. 100ಕ್ಕೂ ಅಧಿಕ ಕನ್ನಡ ಸಂಘಟನೆಗಳು ಬಂದ್‌ ಬೆಂಬಲಿಸುವ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಂಡಿಲ್ಲ.

   ಕರ್ನಾಟಕದ 3 ಸಾವಿರ ಉದ್ಯೋಗಕ್ಕೆ ಕತ್ತರಿ ಹಾಕಿದ ಕೇಂದ್ರ

   ಯಾವ-ಯಾವ ಸಂಘಟನೆಗಳು

   ಯಾವ-ಯಾವ ಸಂಘಟನೆಗಳು

   ಫೆಬ್ರವರಿ 13ರ ಕರ್ನಾಟಕ ಬಂದ್‌ಗೆ ಕಾರ್ಮಿಕ ಸಂಘಟನೆಗಳು, ಸಿಐಟಿಯು ಸೇರಿದಂತೆ 400 ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ನೀಡಿವೆ. ನಮ್ಮ ಕನ್ನಡ ರಕ್ಷಣಾ ವೇದಿಕೆ, ಜಯಕರ್ನಾಟಕ, ಕರ್ನಾಟಕ ಸಂಘಟನೆಗಳ ಒಕ್ಕೂಟ, ಚಾಲಕರ ಸಂಘಟನೆಗಳ ಒಕ್ಕೂಟ, ಆಟೋ ಮತ್ತು ಟ್ಯಾಕ್ಸಿ ಚಾಲಕರ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ಬಂದ್ ಬೆಂಬಲಿಸಿವೆ.

   ಬಂದ್ ಬಗ್ಗೆ ತೀರ್ಮಾನವಿಲ್ಲ

   ಬಂದ್ ಬಗ್ಗೆ ತೀರ್ಮಾನವಿಲ್ಲ

   ಪೆಟ್ರೋಲ್ ಬಂಕ್ ಮಾಲೀಕರ ಸಂಘ, 100ಕ್ಕೂ ಅಧಿಕ ಕನ್ನಡ ಸಂಘಟನೆಗಳು, ರಾಜ್ಯ ಸಾರಿಗೆ ನೌಕರರು, ವರ್ತಕರ ಸಂಘಟನೆಗಳು, ಖಾಸಗಿ ಶಿಕ್ಷಣ ಸಂಸ್ಥೆಗಳು, ಸರ್ಕಾರಿ ನೌಕರರ ಸಂಘ ಇನ್ನೂ ಬಂದ್‌ ಬೆಂಬಲಿಸುವ ಕುರಿತು ತೀರ್ಮಾನವನ್ನು ಕೈಗೊಂಡಿಲ್ಲ.

   ಏನಿರುತ್ತೆ, ಏನಿರಲ್ಲ

   ಏನಿರುತ್ತೆ, ಏನಿರಲ್ಲ

   ರಾಜ್ಯ ಸಾರಿಗೆ ನೌಕರರು ಬಂದ್‌ಗೆ ಬೆಂಬಲ ನೀಡುವ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ. ಆದ್ದರಿಂದ, ಸರ್ಕಾರಿ ಬಸ್‌ಗಳ ಸಂಚಾರ ಇರುತ್ತದೆ. ಹೋಟೆಲ್ ಮಾಲೀಕರ ಸಂಘ ಬಂದ್ ಬೆಂಬಲಿಸಿದೆ. ಹೋಟೆಲ್ ಬಂದ್ ಮಾಡಲಾಗುತ್ತದೆಯೇ?, ನೈತಿಕ ಬೆಂಬಲವೋ ಎನ್ನುವುದು ಖಚಿತವಾಗಿಲ್ಲ.

   ಬೀದಿ ಬದಿ ವ್ಯಾಪಾರಿಗಳ ಬೆಂಬಲ

   ಬೀದಿ ಬದಿ ವ್ಯಾಪಾರಿಗಳ ಬೆಂಬಲ

   ಬೀದಿ ಬದಿ ವ್ಯಾಪಾರಿಗಳು ಬಂದ್‌ಗೆ ಬೆಂಬಲ ನೀಡಿದ್ದಾರೆ. ಆದ್ದರಿಂದ, ತರಕಾರಿ, ಹೂವು, ಹಣ್ಣಿನ ಅಂಗಡಿಗಳು ಬಂದ್ ಆಗುವ ಸಾಧ್ಯತೆ ಇದೆ. ಕರ್ನಾಟಕ ಬ್ಯಾಂಕ್ ಎಂಪ್ಲಾಯಿಸ್ ಫೆಡರಲ್ ಅಸೋಸಿಯೇಶನ್ ಬಂದ್‌ಗೆ ನೈತಿಕ ಬೆಂಬಲ ನೀಡುವ ಸಾಧ್ಯತೆ ಇದೆ.

   ಶಾಲಾ-ಕಾಲೇಜಗಳು

   ಶಾಲಾ-ಕಾಲೇಜಗಳು

   ಶಾಲಾ-ಕಾಲೇಜುಗಳ ಬಗ್ಗೆ ಇನ್ನೂ ತಿರ್ಮಾನವಾಗಿಲ್ಲ. ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಕರೆದುಕೊಂಡು ಹೋಗುವ ಚಾಲಕರು ಬಂದ್ ಬೆಂಬಲಿಸಿದರೆ ಶಾಲಾ ವಾಹನಗಳ ಸಂಚಾರ ಸ್ಥಗಿತಗೊಳ್ಳಲಿದೆ. ಮಾಲ್‌, ಚಿತ್ರಮಂದಿರ ತೆರೆಯಬೇಕೆ? ಎಂಬುದು ಇನ್ನೂ ಚರ್ಚೆಯ ಹಂತದಲ್ಲಿದೆ.

   English summary
   More than 400 organizations extended support for the Karnataka bandh on February 13, 2020 called by Karnataka Sangatenegala Okkuta. What you need to know about bandh.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X
   We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more
   X