Karnataka Bandh: ಕರ್ನಾಟಕ ಬಂದ್ ಬಗ್ಗೆ ಅಪ್ಡೇಟ್ ಮಾಹಿತಿ ಕೊಟ್ಟ ವಾಟಾಳ್ ನಾಗರಾಜ್
Karnataka Bandh: ಇತ್ತೀಚೆಗಷ್ಟೇ ಕರ್ನಾಟಕದ ಸಾರಿಗೆ ಕೆಎಸ್‌ಆರ್‌ಟಿಸಿ ಬಸ್ ಕಂಡಕ್ಟರ್ ಮತ್ತು ಚಾಲಕರ ಮುಖಕ್ಕೆ ಮರಾಠಿ ಪುಂಡರು ಮಸಿ ಬಳಿದಿದ್ದರು. ಅಷ್ಟೇ ಅಲ್ಲದೆ, ಹಲ್ಲೆಯನ್ನೂ ಸಹ ನಡೆಸಿದ್ದರು. ಇಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಹಾಗೂ ಇಂತಹ ಘಟನೆಗಳು ಮತ್ತೆ ಮರುಕಳಿಸದಂತೆ ತಡೆಯಲು ಸರ್ಕಾರದ ಮೇಲೆ ಒತ್ತಡ ಹಾಕಲು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ದಿಟ್ಟ ನಿರ್ಧಾರವೊಂದನ್ನು ತೆಗೆದುಕೊಂಡಿದ್ದಾರೆ.
ಮಾರ್ಚ್ 22ರಂದು ಅಖಂಡ ಕರ್ನಾಟಕ ಬಂದ್ ಫಿಕ್ಸ್ ಆಗಿದೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಘೋಷಣೆ ಮಾಡಿದ್ದಾರೆ. ಸಭೆಯಲ್ಲಿ ಮಾತನಾಡಿದ ವಾಟಾಳ್ ನಾಗರಾಜ್ ಅವರು, "ಯಾವುದೇ ಕಾರಣಕ್ಕೂ ಬಂದ್ ವಾಪಸ್ ಪಡೆಯುವುದಿಲ್ಲ, ಬಂದ್ ಮಾಡಿಯೇ ಮಾಡುತ್ತೇವೆ," ಎಂದು ವಾಟಾಳ್ ನಾಗರಾಜ್ ಘೋಷಣೆ ಮಾಡಿದ್ದಾರೆ.

ಹೊರರಾಜ್ಯ, ಸಂಸತ್ ಗಮನ ಸೆಳೆಯಲು ಮಾರ್ಚ್ 22ರಂದು ಕರ್ನಾಟಕ ಬಂದ್ ಮಾಡುತ್ತಿದ್ದೇವೆ. ಕರ್ನಾಟಕದಲ್ಲಿ ಕನ್ನಡಿಗರಿಗೆ ಹೊಡೆಯುತ್ತಿದ್ದಾರೆ. ಮಹಾರಾಷ್ಟ್ರದವರು ಕನ್ನಡಿಗರ ಮೇಲೆ ಹಲ್ಲೆ ನಡೆಸುತ್ತಿದ್ದಾರೆ ಎಂದು ಆಕ್ರೋಶ ಹೊರ ಹಾಕಿದರು. ಇತ್ತೀಚೆಗಷ್ಟೇ ಮರಾಠಿ ಪುಂಡರು ಕೆಎಸ್‌ಆರ್‌ಟಿಸಿ ಚಾಲಕ, ನಿರ್ವಾಕರ ಮುಖಕ್ಕೆ ಮಸಿ ಬಳಿಯುವುದಲ್ಲೆ ಹಲ್ಲೆ ಕೂಡ ಮಾಡಿದ್ದಾರೆ. ಹಲ್ಲೆ ಮಾಡಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಒತ್ತಾಯಿಸಲಾಗುತ್ತದೆ ಎಂದು ಹೇಳಿದ್ದಾರೆ.
ಇಂದು ಕರ್ನಾಟಕ ಬಂದ್ ಬಗ್ಗೆ ತೀರ್ಮಾನ ಮಾಡಲು ವಾಟಾಳ್ ನಾಗರಾಜ್ ಸಭೆ ಕರೆದಿದ್ದರು. ಈ ವೇಳೆ ಹಲವು ಸಂಘಟನೆಗಳ ಮುಖಂಡರು ಸಭೆಯಲ್ಲಿ ಹಾಜರಿದ್ದರು. ಈ ವೇಳೆ ಮಾತನಾಡಿದ ಮುಖಂಡರು ಬಂದ್‌ಗೆ ನೈತಿಕ ಬೆಂಬಲ ಅನ್ನೋರು ಮನೆಯಲ್ಲಿ ಕೂತುಕೊಳ್ಳಿ. ಸುಮ್ಮನೆ ಸಂಘಟನೆ ಯಾಕೆ ಇಟ್ಟುಕೊಳ್ತಿರಾ? ಅನೇಕ ಕನ್ನಡಪರ ಸಂಘಟನೆಗಳು ನಮಗೆ ಬೆಂಬಲ ಕೊಟ್ಟಿದೆ. ನಾವು ಮಾರ್ಚ್ 22ರಂದು ಬಂದ್ ಮಾಡುತ್ತೇವೆ. ಇನ್ನೂ 3 ದಿನಗಳ ಕಾಲಾವಕಾಶವಿದೆ. ಬಂದ್ ಸಂಪೂರ್ಣ ಯಶಸ್ವಿಯಾಗಲಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಾಟಾಳ್ ನಾಗರಾಜ್ ಅವರು, ಮಾರ್ಚ್ 22ರಂದು ಬೆಳಗ್ಗೆ 6ರಿಂದ ಸಂಜೆ 6 ಗಂಟೆವರೆಗೆ ಕರ್ನಾಟಕ ಬಂದ್ ಮಾಡುತ್ತೇವೆ. ಬೆಳಗ್ಗೆ 10:30ಕ್ಕೆ ಟೌನ್ ಹಾಲ್‌ನಿಂದ ಫ್ರೀಡಂ ಪಾರ್ಕ್‌ವರೆಗೂ ಪ್ರತಿಭಟನಾ ಮೆರವಣಿಗೆ ಮಾಡುತ್ತೇವೆ ಎಂದು ಹೇಳಿದರು.
ಮತ್ತೆ ಮುಂದುವರೆದು ಮಾತನಾಡಿದ ಅವರು, ರಾಜ್ಯಪಾಲರು ಜಂಟಿ ಅಧಿವೇಶನದಲ್ಲಿ ಹಿಂದಿಯಲ್ಲಿ ಭಾಷಣ ಮಾಡುತ್ತಿದ್ದಾರೆ. ವಿಧಾನಸಭೆಯೊಳಗೆ ಯಾಕೆ ಯಾರು ಇದನ್ನು ಪ್ರಶ್ನೆ ಮಾಡುವ ಸಾಹಸಕ್ಕೆ ಕೈಹಾಕುತ್ತಿಲ್ಲ. ಮೂಕ ಪ್ರೇಕ್ಷಕರಂತೆ ಮಾನ ಮರ್ಯಾದೆ ಇಲ್ಲದೇ ಶಾಸಕರು ಸುಮ್ಮನಿದ್ದಾರೆ. ಖಾಸಗಿ ಶಿಕ್ಷಣ ಸಂಸ್ಥೆಗಳು, ದರೋಡೆಕೋರರು, ಕನ್ನಡ ಕಲಿಸುವುದಿಲ್ಲ ಅಂತ ನ್ಯಾಯಾಲಯಕ್ಕೆ ಹೋಗುತ್ತಾರೆ. ಚಾಲಕರು ಯಾರೇ ಇರಲಿ, ಬಸ್ ಆಟೋ, ಕಾರು ಚಾಲಕರಿಗೆ ಇದು ಸ್ವಾಭಿಮಾನ, ಮರ್ಯಾದೆ ಪ್ರಶ್ನೆಯಾಗಿದೆ ಎಂದು ವಾಟಾಳ್ ನಾಗರಾಜ್ ಹೇಳಿದ್ದಾರೆ.
ಇನ್ನು ಸಾರಾ ಗೋವಿಂದ್ ಮಾತನಾಡಿ, ಮಾರ್ಚ್ 22ರಂದು ನಡೆಯುವ ಬಂದ್ ವಾಪಸ್ ಪಡೆಯುವ ಮಾತೇ ಇಲ್ಲ. ಕೆಲವರು ಬಂದ್ ಯಾಕೆ ಅಂತಾರೆ. ಎಂಇಎಸ್ ಪುಂಡ ಹಾವಳಿ ಮೀತಿ ಮೀರಿದೆ. ಸರ್ಕಾರ ಕಂಡು ಕಾಣದಂತೆ ಸುಮ್ಮಣೆ ಕುಳಿತಿದೆ ಎಂದು ಆಕ್ರೋಶ ವ್ಯಕಪಡಿಸಿದರು.












Click it and Unblock the Notifications