ಸೆಪ್ಟೆಂಬರ್ 28ರಂದು ಕರ್ನಾಟಕ ಬಂದ್; ಕೋಡಿಹಳ್ಳಿ ಚಂದ್ರಶೇಖರ್
ಬೆಂಗಳೂರು, ಸೆಪ್ಟೆಂಬರ್ 23 : "ಕೇಂದ್ರ ಸರ್ಕಾರದ ರೈತ, ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಸೆಪ್ಟೆಂಬರ್ 28ರ ಸೋಮವಾರ ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ" ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.
Recommended Video
ಕರ್ನಾಟಕ ಬಂದ್ ಕರೆ ನೀಡುವ ಬಗ್ಗೆ ಬುಧವಾರ ಬೆಳಗ್ಗೆಯಿಂದ ರೈತ ಸಂಘದ ನಡುವೆಯೇ ಒಮ್ಮತ ಮೂಡಿರಲಿಲ್ಲ. ಸಂಜೆ 4 ಗಂಟೆಯ ಸಭೆಯ ಬಳಿಕ ಸೋಮವಾರ ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ.
"ಸೆಪ್ಟೆಂಬರ್ 25ರಂದು ಮೈಸೂರು ಬ್ಯಾಂಕ್ ವೃತ್ತದಲ್ಲಿ 500ಕ್ಕೂ ಅಧಿಕ ಜನರು ಸೇರಿ ಧರಣಿ ನಡೆಸಿ, ರಸ್ತೆ ತಡೆ ನಡೆಸಲಿದ್ದಾರೆ. ರಾಜ್ಯಾದ್ಯಂತ ಎಲ್ಲಾ ಜಿಲ್ಲೆ, ತಾಲೂಕು, ಗ್ರಾಮಗಳಲ್ಲಿಯೂ ಪ್ರತಿಭಟನೆ ನಡೆಯಲಿದೆ" ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಮಾರುತಿ ಮಾನ್ಪಡೆ ಹೇಳಿದ್ದಾರೆ.
ಸೆಪ್ಟೆಂಬರ್ 28ರಂದು ಕರ್ನಾಟಕ ಬಂದ್ ನಡೆಸಲು ಎಲ್ಲಾ ರೈತ ಮುಖಂಡರು ಸಮ್ಮತಿ ಸೂಚಿಸಿದ್ದಾರೆ. 32ಕ್ಕೂ ಅಧಿಕ ರೈತ ಸಂಘಟನೆಗಳು ಬಂದ್‌ಗೆ ಬೆಂಬಲವನ್ನು ನೀಡಿವೆ.

ಸರ್ಕಾರದ ಮೊಸಳೆ ಕಣ್ಣೀರು
"ನಮ್ಮ ಒತ್ತಾಯಕ್ಕೆ ಮಣಿದು ಸರ್ಕಾರ ಎಪಿಎಂಸಿ ಮಸೂದೆ ಮಂಡನೆ ಮಾಡುವುದನ್ನು ತಡೆ ಹಿಡಿಯಬಹುದು ಎಂಬ ವಿಶ್ವಾಸವಿತ್ತು. ಆದರೆ, ಸರ್ಕಾರ ಮೊಸಳೆ ಕಣ್ಣೀರು ಸುರಿಸಿದೆ. ಬೀದಿಯಲ್ಲಿ ನಾವು ಪ್ರತಿಭಟನೆ ಮಾಡುತ್ತಿದ್ದರೂ ನಮ್ಮನ್ನು ಮಾತನಾಡಿಸಲು ಸರ್ಕಾರ ಮುಂದಾಗಿಲ್ಲ" ಎಂದು ಕೋಡಿಹಳ್ಳಿ ಚಂದ್ರಶೇಖರ್ ದೂರಿದರು.

ಶುಕ್ರವಾರ ನಗರದಲ್ಲಿ ಪ್ರತಿಭಟನೆ
"ಸೆಪ್ಟೆಂಬರ್ 28ರ ಸೋಮವಾರ ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ. ಶುಕ್ರವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ. ಈ ಸರ್ಕಾರ ಬಂಡವಾಳ ಶಾಹಿಗಳ ಪರವಾಗಿದೆ. ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ ಯಡಿಯೂರಪ್ಪ ಮುಖವಾಡ ಬಯಲಾಗಿದೆ" ಎಂದು ಆರೋಪಿಸಿದರು.

ಕರ್ನಾಟಕ ಬಂದ್ ತೀರ್ಮಾನಕ್ಕೆ ಬೆಂಬಲ
"ಅಖಿಲ ಭಾರತ ಕೃಷಿ ಸಂಘರ್ಷ ಸಮಿತಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ 9ಕ್ಕೂ ಹೆಚ್ಚು ರೈತ ಸಂಘಟನೆಗಳು, 10ಕ್ಕೂ ಹೆಚ್ಚು ದಲಿತ ಸಂಘಟನೆಗಳು ಮತ್ತು ಕಾರ್ಮಿಕ ಸಂಘಟನೆಗಳು ಪಾಲ್ಗೊಂಡಿದ್ದವು. ಕರ್ನಾಟಕ ಬಂದ್ ತೀರ್ಮಾನಕ್ಕೆ ಬೆಂಬಲ ನೀಡಲಾಗಿದೆ" ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ನಾಗೇಂದ್ರ ಹೇಳಿದರು.

32 ಸಂಘಟನೆಗಳ ಬೆಂಬಲ
ರಾಜ್ಯ ರೈತ ಸಂಘ, ರಾಜ್ಯ ಕಬ್ಬು ಬೆಳೆಗಾರರ ಸಂಘ ಸೇರಿದಂತೆ ಕರ್ನಾಟಕ ಬಂದ್‌ಗೆ ಐಕ್ಯ ಹೋರಾಟ ಸಮಿತಿ ನೇತೃತ್ವದಲ್ಲಿ 32ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ನೀಡಿದೆ. ಇದರಿಂದಾಗಿ ಕರ್ನಾಟಕ ಬಂದ್ ನಡೆಯುವುದು ಬಹುತೇಕ ಖಚಿತವಾಗಿದೆ.
-
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ












Click it and Unblock the Notifications