ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯೋಧರ ಮೇಲೆ ಉಗ್ರರ ದಾಳಿ ಖಂಡಿಸಿ ಫೆ.19 ರಂದು ಕರ್ನಾಟಕ ಬಂದ್

|
Google Oneindia Kannada News

ಬೆಂಗಳೂರು, ಫೆಬ್ರವರಿ 16: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಯೋಧರ ಮೇಲೆ ನಡೆದ ಅಮಾನುಷ, ಆತ್ಮಾಹುತಿ ಬಾಂಬ್ ದಾಳಿ ಖಂಡಿಸಿ ಫೆ.19ರಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ.

ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ಈ ಕುರಿತು ಮಾಹಿತಿ ನೀಡಿದ್ದು, ಯೋಧರ ಮೇಲೆ ಉಗ್ರರು ನಡೆಸಿದ ದಾಳಿ ಖಂಡಿಸಿ ಫೆ.19ರಂದು ಕರ್ನಾಟಕ ಬಂದ್ ಮಾಡಲಾಗುತ್ತಿದೆ. ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಬಂದ್‌ಗೆ ಕರೆನೀಡಲಾಗಿದೆ ಎಂದು ತಿಳಿಸಿದರು.

Karnataka bandh over terror attack on February 19

ಪುಲ್ವಾಮಾದಲ್ಲಿ 60 ಕೆಜಿ ಆರ್‌ಡಿಎಕ್ಸ್ ತುಂಬಿದ ವಾಹನವು ಯೋಧರಿದ್ದ ಬಸ್‌ ಪಕ್ಕ ಬಂದಾಗ ಅದನ್ನು ಸ್ಫೋಟಿಸಲಾಗಿತ್ತು ಅದರಲ್ಲಿ 42 ಯೋಧರು ಹುತಾತ್ಮರಾಗಿದ್ದರು. ಯೋಧರ ಕುಟುಂಬಸ್ಥರ ಆಕ್ರಂದ ಮುಗಿಲುಮುಟ್ಟಿದೆ.

2001ರ ನಂತರ ಇದು ಎರಡನೇ ಬಹುದೊಡ್ಡ ದಾಳಿಯಾಗಿದೆ. ದಾಳಿಯಲ್ಲಿ ಕರ್ನಾಟಕದ ಮಂಡ್ಯ ಜಿಲ್ಲೆಯ ಯೋಧ ಕೂಡ ಹುತಾತ್ಮರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ.

ಮಂಡ್ಯದ ಯೋಧ ಗುರು ಅವರ ಅಂತ್ಯ ಕ್ರಿಯೆ ಇಂದು ಸಂಜೆ 6.10ಕ್ಕೆ ಗುಡಿಗೆರೆಯಲ್ಲಿ ನಡೆಯಲಿದೆ. ಮಧ್ಯಾಹ್ನ ಎಚ್‌ಎಎಲ್‌ಗೆ ಪಾರ್ಥಿವ ಶರೀರ ಆಗಮಿಸಲಿದೆ.

English summary
Kannada pro activist Vatal Nagaraj announced that Karnataka bandh on February 19. over terror attack in Pulwama.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X