Gutka Ban: ಕರ್ನಾಟಕದಲ್ಲಿ ಗುಟ್ಕಾ, ಪಾನ್ ಮಸಾಲಾ ಬ್ಯಾನ್! ರಾಜ್ಯ ಸರ್ಕಾರದ ಮಹತ್ವದ ಆದೇಶ

ಬೆಂಗಳೂರು: ಆಹಾರ ಸುರಕ್ಷತೆ ದೃಷ್ಟಿಯಿಂದ ಹೋಟೆಲ್, ರೆಸ್ಟೋರೆಂಟ್‌ಗಳ ಮೇಲೆ ದಾಳಿ ನಡೆಸಿ ಶಾಕ್ ನೀಡಿದ್ದ ರಾಜ್ಯ ಆರೋಗ್ಯ ಇಲಾಖೆಯು ಗುಟ್ಕಾ, ಪಾನ್ ಮಸಾಲ ಪ್ರಿಯರಿಗೆ ಆಘಾತ ನೀಡಿದೆ. ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ತಂಬಾಕು ಹಾಗೂ ನಿಕೋಟಿನ್ ಹೊಂದಿರುವ ಉತ್ಪನ್ನಗಳ ವಿರುದ್ಧ ರಾಜ್ಯಾದ್ಯಂತ ಕಟ್ಟುನಿಟ್ಟಿನ ಕ್ರಮ ಜರುಗಿಸಿದೆ.ರಾಜ್ಯದಲ್ಲಿ ಎಲ್ಲ ವಿಧದ ಗುಟ್ಕಾ, ಪಾನ್ ಮಸಾಲಾ ನಿಷೇಧಿಸಿ ಆದೇಶಿಸಿದೆ.

ಆಗಸ್ಟ್ 10ರಂದು ಗುಟ್ಕಾ ನಿಷೇಧ ಸಂಬಂಧಿ ಅಧಿಸೂಚನೆ ಹೊರಡಿಸಲಾಗಿದೆ ಎಂದು ಬುಧವಾರ ಖುದ್ದು ಆರೋಗ್ಯ ಇಲಾಖೆಯೇ ಪ್ರಕಟಿಸಿದೆ. ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತಾ ವಿಭಾಗದ ವತಿಯಿಂದ ಗುಟ್ಕಾ ಬ್ಯಾನ್ ನಿರ್ಧಾರ ಕೈಗೊಂಡಿದೆ. ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ತಂಬಾಕು ಹಾಗೂ ನಿಕೋಟಿನ್ ಹೊಂದಿರುವ ಉತ್ಪನ್ನಗಳ ವಿರುದ್ಧ ರಾಜ್ಯಾದ್ಯಂತ ಕಟ್ಟುನಿಟ್ಟಿನ ಜಾರಿ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

Karnataka Bans Gutka

ರಾಜ್ಯದಲ್ಲಿ ಪ್ರತಿ ಹಂತದಲ್ಲೂ ಗುಟ್ಕಾ ನಿಷೇಧ!

ತಂಬಾಕು/ ನಿಕೋಟಿನ್ ಹೊಂದಿರುವ ಗುಟ್ಕಾ, ಪಾನ್ ಮಸಾಲಾ ಹಾಗೂ ಇತರೆ ನಿಷೇಧಿತ ಉತ್ಪನ್ನಗಳ ತಯಾರಿಕೆ, ಸಂಗ್ರಹಣೆ, ಸಾಗಣೆ, ವಿತರಣೆ ಮತ್ತು ಮಾರಾಟದ ವಿರುದ್ಧ ಆಹಾರ ಸುರಕ್ಷತಾ ಅಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತಪಾಸಣೆ ಹಾಗೂ ಜಾರಿ ಕಾರ್ಯಾಚರಣೆ ನಡೆಸಲಾಗಿದೆ.

ಒಂದು ವರ್ಷ ಗುಟ್ಕಾ ನಿಷೇಧ

ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯು ಆಹಾರ ಸುರಕ್ಷತೆ ಮತ್ತು 2006 ರ ಕಲಂ 30(2)(a) 8 Food Safety and Standards (Prohibition and Restrictions on Sales) Regulations, 2011ರ ನಿಯಮದಡಿ ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕರ್ನಾಟಕ ರಾಜ್ಯದಲ್ಲಿ ತಂಬಾಕು ಹಾಗೂ ನಿಕೋಟಿನ್ ಹೊಂದಿರುವ ಉತ್ಪನ್ನಗಳ ಮಾರಾಟ ಮತ್ತು ವಿತರಣೆ ನಿಷೇಧಿಸಲಾಗಿದೆ. ಆಗಸ್ಟ್ 10ರಂದು ಮುಂದಿನ 1 ವರ್ಷದ ಅವಧಿಗೆ ನಿಷೇಧ ನಿಯಮ ಜಾರಿಯಲ್ಲಿರುತ್ತದೆ.

ವ್ಯಸನಮುಕ್ತ ಸಮಾಜ ನಿರ್ಮಾಣ ಗುರಿ

ನಿಷೇಧಿತ ತಂಬಾಕು ಹಾಗೂ ನಿಕೋಟಿನ್ ಉತ್ಪನ್ನಗಳ ತಯಾರಿಕೆ, ಮಾರಾಟ ಅಥವಾ ವಿತರಣೆ ಕಂಡುಬಂದಲ್ಲಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿ, ಆರೋಗ್ಯಕರ ಹಾಗೂ ವ್ಯಸನಮುಕ್ತ ಕರ್ನಾಟಕ ನಿರ್ಮಾಣಕ್ಕೆ ಸಾರ್ವಜನಿಕರು ಸಹಕರಿಸುವಂತೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಆದೇಶದಲ್ಲಿ ಕೋರಿದೆ.

ಅಡಿಕೆ ಬೆಳೆಗಾರರ ಚಿಂತೆ?

ರಾಜ್ಯದಲ್ಲಿ ಕಳೆ ನಾಲ್ಕು ವರ್ಷಗಳಿಂದ ಅಡಿಕೆ ಬೆಳೆ ಬೆಳೆಯುವ ಪದ್ಧತೆ ಬೇರೆ ಬೇರೆ ಭಾಗಗಳಿಗೂ ವಿಸ್ತರಣೆ ಆಗಿದೆ. ಆದರೆ ಅಡಿಕೆ ಇಳುವರಿ ಸುಮಾರು ಶೇ.37ರಷ್ಟು ಕುಸಿತ ಆಗಿದೆ. ಇಳುವರಿ ಕುಸಿತಕ್ಕೆ ಎಲೆ ಚುಕ್ಕೆ ರೋಗ ಸೇರಿದಂತೆ ಇನ್ನಿತರ ಕಾರಣಗಳಿವೆ. ಇದೀಗ ಗುಟ್ಕಾ ಬ್ಯಾನ್ ಆಗಿದ್ದರಿಂದ ಇದು ಅಡಿಕೆ ಬೆಲೆ, ಉತ್ಪಾದನೆ, ಬೆಳೆಗಾರರ ಆರ್ಥಿಕತೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+