Karnataka Battleground: ರಾಜ್ಯದ ಗಮನ ಸೆಳೆದ ಐದು ಕ್ಷೇತ್ರಗಳು
ಎಲೆಕ್ಷನ್ ಕಣ ಮತ್ತಷ್ಟು ರಂಗೇರಿದೆ. ಈ ಬಾರಿ ಯಾವ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂಬ ಕುತೂಹಲ ಮೂಡಿದೆ. ಈ ನಡುವೆ ಪಕ್ಷಾಂತರಿಗಳ ನಡುವೆ ಹಾಗೂ ಪ್ರಬಲ ನಾಯಕರೊಂದಿಗಿನ ಸೆಣಸಾಟ ಬಲೂ ಜೋರಾಗಿದೆ. ಕೆಲ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಜಿದ್ದಾಜಿದ್ದಿ ಭಾರೀ ಕುತೂಹಲವನ್ನು ಹುಟ್ಟುಹಾಕಿದೆ. ಈ ಬಾರಿ ಎಲ್ಲರ ಚಿತ್ತ ಆಕರ್ಷಿಸಿದ ಕೆಲ ಕ್ಷೇತ್ರಗಳು ಹಾಗೂ ಅಭ್ಯರ್ಥಿಗಳ ಒಂದು ನೋಟ ಇಲ್ಲಿದೆ.
ಸೋಮವಾರ ನಾಮಪತ್ರ ಹಿಂಪಡೆದ ಬಳಿಕ ಚುನಾವಣಾ ರಣರಂಗದಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಫೈಟ್ ಒಂದು ಹಂತಕ್ಕೆ ಫೈನಲ್ ಆಗಿದೆ. ಕೋಲಾರ, ಹಾಸನ ವಿಧಾನಸಭಾ ಕ್ಷೇತ್ರದ ಬಳಿಕ ಕರ್ನಾಟಕದಲ್ಲಿ ಸದ್ಯ ಅಥಣಿ ವಿಧಾನಸಭಾ ಕ್ಷೇತ್ರ ಹೆಚ್ಚು ಸದ್ದು ಮಾಡುತ್ತಿದೆ. ಇಲ್ಲಿ ಅಭ್ಯರ್ಥಿಗಳ ನಡುವಿನ ಫೈಟ್‌ಗಿಂತ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ನಡುವಿನ ಹಣಾಹಣಿ ರಾಜ್ಯದ ಗಮನ ಸೆಳೆದಿದೆ. ಅಥಣಿಯಿಂದ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆ ಲಕ್ಷ್ಮಣ್ ಸವದಿ ಸ್ವಾಭಿಮಾನದ ಪ್ರಶ್ನೆ ಮುಂದಿಟ್ಟು ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್‌ನಿಂದ ಸ್ಪರ್ಧಿಸುತ್ತಿದ್ದಾರೆ. ಬಿಜೆಪಿಯಿಂದ ಕಣಕ್ಕಿಳಿದಿರುವ ಮಹೇಶ್ ಕುಮಟಳ್ಳಿಗೆ ರಮೇಶ್ ಜಾರಕಿಹೊಳಿ ಶ್ರೀರಕ್ಷೆ ಇದ್ದು, ಇಲ್ಲಿ ಸವದಿ ವರ್ಸಸ್ ರಮೇಶ್ ಸಮರ ನಡೆಯವುದು ಶತಸಿದ್ಧ.

ಕಳೆದ ಉಪ ಚುನಾವಣೆಯಲ್ಲಿ ಮಹೇಶ್ ಕುಮಟಳ್ಳಿ ಅವರಿಗೆ ಕ್ಷೇತ್ರ ತ್ಯಾಗ ಮಾಡಿದ್ದ ಲಕ್ಷ್ಮಣ್ ಸವದಿ ಈ ಸಲ ಅಥಣಿಯಿಂದ ಬಿಜೆಪಿ ಟಿಕೆಟ್ ನಿರೀಕ್ಷೆಯಲ್ಲಿದ್ದರು. ಆದರೆ, ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ ಮಾತ್ರ ಪಟ್ಟು ಹಿಡಿದು ಮಹೇಶ್ ಕುಮಟಳ್ಳಿ ಅವರಿಗೆ ಟಿಕೆಟ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಹೇಶ್ ಕುಮಟಳ್ಳಿಗೆ ಟಿಕೆಟ್ ನೀಡದಿದ್ದರೆ, ನನಗೆ ಗೋಕಾಕ ಟಿಕೆಟ್ ಬೇಡ ಎಂಬುವಷ್ಟರ ಮಟ್ಟಿಗೆ ರಮೇಶ್ ಜಾರಕಿಹೊಳಿ ಒತ್ತಡ ಹಾಕಿದ್ದರು.
ಇದೇ ಕಾರಣಕ್ಕೆ ಮಹೇಶ್ ಕುಮಟಳ್ಳಿಗೆ ಟಿಕೆಟ್ ನೀಡಿ ಲಕ್ಷ್ಮಣ್ ಸವದಿ ಅವರಿಗೆ ಟಿಕೆಟ್ ನಿರಾಕರಿಸಿತ್ತು. ಇದೇ ಬೇಸರದಿಂದಾಗಿ ಸವದಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಜೊತೆಗೆ ಅಥಣಿಯಲ್ಲಿ ಕಾಂಗ್ರೆಸ್ ನಿಂದಲೇ ಸರ್ಧೆ ಮಾಡುತ್ತಿದ್ದಾರೆ. ಹೀಗಾಗಿ ಇದನ್ನು ಮಹೇಶ್ ಕುಮಟಳ್ಳಿ ಹಾಗೂ ಲಕ್ಷ್ಮಣ ಸವದಿ ನಡುವಿನ ಫೈಟ್‌ಗಿಂತ ರಮೇಶ್ ಜಾರಕಿಹೊಳಿ ಹಾಗೂ ಲಕ್ಷ್ಮಣ ಸವದಿ ನಡುವಿನ ಫೈಟ್ ಎನ್ನಬಹುದು.

ಒಂದು ಕಾಲದಲ್ಲಿ ಬಿಜೆಪಿಯ ಭದ್ರಕೋಟೆಯಾಗಿದ್ದ ಮಾಜಿ ಸಿಎಂ ಜಗದೀಶ ಶೆಟ್ಟರ್ ಕಾಂಗ್ರೆಸ್‌ನತ್ತ ಮುಖ ಮಾಡುವುದರೊಂದಿಗೆ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿನ ಹೋರಾಟ ಕುತೂಹಲ ಮೂಡಿಸಿದೆ. ಬಿಜೆಪಿ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿ ಅವರು ಭಾರೀ ದಂಗೆಯನ್ನು ಸೋಲಿಸುವ ಮೂಲಕ ತಮ್ಮ ರಾಜಕೀಯ ಜೀವನವನ್ನು ಕೆತ್ತಲು ಶೆಟ್ಟರ್ ಬಿಗ್ ಪ್ಲ್ಯಾನ್ ಮಾಡಿದ್ದಾರೆ.
ಸಿಎಂ ಆಕಾಂಕ್ಷಿ ಆದ ಸಿದ್ದರಾಮಯ್ಯ ಅವರನ್ನು ಸೋಲಿಸಲು ಬಿಜೆಪಿ ವರುಣಾದಿಂದ ವಿ ಸೋಮಣ್ಣ ಅವರನ್ನು ಕಣಕ್ಕಿಳಿಸಿದೆ. ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿರುವ ವಿ ಸೋಮಣ್ಣ ಸಿದ್ದರಾಮಯ್ಯ ಅವರನ್ನು ಸೋಲಿಸುವರೇ ಎನ್ನುವ ಕುತೂಹಲ ಮೂಡಿದೆ. ಸಿದ್ದರಾಮಯ್ಯ ಅವರಿಗೆ ಇದು ರಾಜಕೀಯದಲ್ಲಿ ತಮ್ಮ ಅಮೋಘ ದಾಖಲೆಯನ್ನು ಕಾಯ್ದುಕೊಳ್ಳುವ ಹೋರಾಟವಾಗಿದೆ.
ಇತ್ತ ಕನಕಪುರವೂ ರಾಜ್ಯದ ಗಮನ ಸೆಳೆದಿದೆ. ಕನಕಪುರ ಬಂಡೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಸೋಲಿಸಲು ಬಿಜೆಪಿ ಆರ್ ಅಶೋಕ್ ಅವರನ್ನು ಕಣಕ್ಕೆ ಇಳಿಸಿದೆ. ಈ ಬಾರಿ ಕಾಂಗ್ರೆಸ್ ಹಾಗೂ ಬಿಜೆಪಿಗೆ ಈ ಕನಕಪುರದಲ್ಲಿನ ಗೆಲುವು ಪ್ರತಿಷ್ಠೆಯ ಪ್ರಶ್ನೆಯಾಗಿದೆ.
ಇದು ಹಣದ ಚೀಲಗಳ ಚತುಷ್ಕೋನ ಹೋರಾಟ. ಸೋಮಶೇಖರ್ ರೆಡ್ಡಿ ಬಳ್ಳಾರಿ ನಗರದಲ್ಲಿ ತಮ್ಮ ಹಿಡಿತವನ್ನು ಉಳಿಸಿಕೊಳ್ಳಲು ಹೋರಾಡುತ್ತಿದ್ದರೆ, ಅವರ ಸೊಸೆ ಅರುಣಾ ಅವರು ಜನಾರ್ದನ ರೆಡ್ಡಿ ಅವರ ಕೆಜೆಪಿಪಿಯ ಹೊಸ ಪಕ್ಷದ ಬ್ಯಾನರ್ ಅಡಿಯಲ್ಲಿ ಸ್ಥಾನವನ್ನು ಗೆಲ್ಲಲು ಪ್ರಯತ್ನಿಸುತ್ತಿದ್ದಾರೆ. ಹೀಗಾಗಿ ಈ ಬಾಋಇ ಕೆಲ ಕ್ಷೇತ್ರಗಳಲ್ಲಿ ಪ್ರಬಲ ನಾಯಕರ ಗೆಲುವಿನ ಹೋರಾಟ ಭಾರೀ ಕುತೂಹಲವನ್ನು ಮೂಡಿಸಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications