Winter Session: ಇಂದಿನಿಂದ ಬೆಳಗಾವಿ ಚಳಿಗಾಲ ಅಧಿವೇಶನ: 20 ವಿಧೇಯಕ ಮಂಡನೆಗೆ ಸಿದ್ಧತೆ, ಏನೆಲ್ಲ ಚರ್ಚೆಗಳಾಗುತ್ತೆ?
Winter Session 2025: ಉತ್ತರ ಕರ್ನಾಟಕದ ಸಮಸ್ಯೆಗಳು, ಪರಿಹಾರಗಳನ್ನೇ ಪ್ರಧಾನಾಗಿಟ್ಟುಕೊಂಡು ಹಾಗೂ ಸಿಎಂ ಕುರ್ಚಿ ಕದನದ ಮಧ್ಯ ರಾಜ್ಯದಲ್ಲಿ ಎರಡು ವಾರಗಳ ಚಳಿಗಾಲದ ಬೆಳಗಾವಿ ಅಧಿವೇಶನ (Belagavi Winter Session 2025) ಇಂದಿನಿಂದ (ಡಿ.8) ಆರಂಭವಾಗುತ್ತಿದೆ. ರಾಜ್ಯದ ನಾಯಕತ್ವ ಬದಲಾವಣೆ ತಿಕ್ಕಾಟದ ಮಧ್ಯ ಒಗ್ಗಟ್ಟಿನ ಮಂತ್ರ ಜಪಿಸಿರುವ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳು ವಿಪಕ್ಷಗಳ ಟೀಕೆಗಳಿಗೆ, ಪ್ರಶ್ನೆಗಳು ಮತ್ತು ಆರೋಪಗಳಿಗೆ ತಕ್ಕ ಉತ್ತರ ಕೊಡಲು ಸಜ್ಜಾಗಿದ್ದಾರೆ.
ಬೆಂಬಲ ಬೆಲೆ, ರೈತರು ಬೆಳೆದ ಕಬ್ಬು, ಮಕ್ಕೆಜೋಳ ಇತರ ಬೆಳೆಗೆ ಸೂಕ್ತ ಬೆಲೆ, ನೆರೆ-ಪ್ರವಾಹ ಪರಿಹಾರ, ಸರ್ಕಾರ ನೇಮಕಾತಿ, ಪೊಲೀಸ್ ವೈಫಲ್ಯ, ನೀರಾವರಿ ವಿಷಯಗಳು ಸೇರಿದಂತೆ ಉತ್ತರ ಕರ್ನಾಟಕದ ಹತ್ತು ಹಲವು ಸಮಸ್ಯೆಗಳು, ಬೇಡಿಕೆಗಳ ಪ್ರಸ್ತಾಪಿಸಿ ಸರ್ಕಾರದ ಮೇಲೆ ಮುಗಿ ಬೀಳಲು ವಿಪಕ್ಷಗಳು ಅಣಿಯಾಗಿವೆ. ಇದಕ್ಕೆ ರಾಜ್ಯ ಸರ್ಕಾರ ಎರಡೂ ವರೆ ವರ್ಷಗಳ ಸಾಧನೆ ಸಮೇತ ಪ್ರತ್ಯುತ್ತರಕ್ಕೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಲು ತಯಾರಾಗಿದ್ದಾರೆ.

ಹಲವು ವರ್ಷಗಳಿಂದ ಬೆಳಗಾವಿ ಚಳಿಗಾಲ ಅಧಿವೇಶನ ನಡೆದಿದೆ. ಅದೆಷ್ಟು ಉತ್ತರ ಕರ್ನಾಟಕದ ಪ್ರಶ್ನೆಗಳಿಗೆ ಉತ್ತರ, ಸಮಸ್ಯೆಗಳಿಗೆ ಪರಿಹಾರ ಸಿಕ್ಕಿದೆ ಎಂದು ಸರ್ಕಾರ ಮತ್ತ ವಿಪಕ್ಷಗಳು ತನ್ನನ್ನು ತಾನು ಕೇಳಿಕೊಳ್ಳಬೇಕು. ಈ ಬಾರಿಯು ಉತ್ತರ ಕರ್ನಾಟಕದ ಪ್ರಮುಖ ವಿಷಯಗಳ ಮೇಲೆ ಚರ್ಚೆಗಳು ನಡೆಯಲಿವೆ. ಈ ವೇಳೆ ರಾಜ್ಯ ನಾಯಕತ್ವ ಕಿತ್ತಾಟ, ಕಾನೂನು ಸುವ್ಯವಸ್ಥೆ, ರೈತರ ಬೇಡಿಕೆ-ಸಮಸ್ಯೆಗಳು, ಉತ್ತರ ಕರ್ನಾಟಕಕ್ಕೆ ಮಲತಾಯಿ ಧೋರಣೆ, ಅಭಿವೃದ್ಧಿಗೆ ಹಿನ್ನಡೆ, ಡಿಕೆಶಿ ದುಬಾರಿ ವಾಚ್ ಪ್ರಕರಣ, ಅನುದಾನ ಆರೋಪಗಳು, ಅಂಕಿ-ಸಂಖ್ಯೆ, ಪ್ರತ್ಯುತ್ತರಗಳ ಸೇರಿದಂತೆ ಹಲವು ವಿಚಾರಗಳು ಚರ್ಚೆಯಾಗುವ ನಿರೀಕ್ಷೆ ಇದೆ.
ಈ ವೇಳೆ ಸರ್ಕಾರ ಸುಮಾರು 20 ವಿಧೇಯಕ ಮಂಡನೆಗೆ ಸಿದ್ಧತೆ ನಡೆದಿದೆ. ಜೊತೆಗೆ ಕಬ್ಬು ಬೆಳೆಗಾರರು ಸೇರಿದಂತೆ ವಿವಿಧ ರೈತರ ಬೇಡಿಕೆಗಳಿಗೆ ಈಡೇರಿಕೆಗಾಗಿ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ಪ್ರತಿಭಟಿಸಲು ಸುಮಾರು 89 ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿವೆ. ಈಹಿನ್ನೆಲೆಯಲ್ಲಿ ಪೊಲೀಸರು ಸುವರ್ಣಸೌಧ ಸುತ್ತಮುತ್ತ ಭಾರೀ ಬಿಗಿ ಭದ್ರತೆ ಒದಗಿಸಿದ್ದಾರೆ. 6000 ಪೊಲೀಸರನ್ನು ಇಲ್ಲಿ ನಿಯೋಜಿಸಲಾಗಿದೆ. ಇತ್ತೀಚೆಗೆ ದೆಹಲಿ ಕೆಂಪುಕೋಟೆ ಬಳಿಯೇ ಸ್ಪೋಟ ಸಂಭವಿಸಿದ್ದರಿಂದ ಖಾಕಿ ಹೈಅಲರ್ಟ್ ಆಗಿದೆ. ಡಿಸೆಂಬರ್ 19ರವರೆಗೆ ಚಳಿಗಾಲ ವಿಧಾನಮಂಡಲ ಅಧಿವೇಶನ ನಡೆಯಲಿದೆ.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications