ಶಿಕ್ಷಣ ಕ್ಷೇತ್ರದಲ್ಲಿ ಕರ್ನಾಟಕದ ಉತ್ತಮ ಸಾಧನೆ: ಇದಕ್ಕೆ ಪ್ರಮುಖ ಪಾತ್ರ ವಹಿಸಿದ ಕೇಂದ್ರ ಸರ್ಕಾರದ ಸಂಸ್ಥೆಗಳಿವು
ಭಾರತದಲ್ಲಿಯೇ ಬೆಂಗಳೂರು ವಿಶೇಷವಾದ ಸ್ಥಾನಮಾನವನ್ನು ಪಡೆದಿದೆ. ಇದು ಸಿಲಿಕಾನ್ ವ್ಯಾಲಿ, ಐಟಿ ಹಬ್, ಗಾರ್ಡನ್ ಸಿಟಿ ಹೀಗೆ ಹಲವು ಹೆಸರುಗಳಿಂದ ಗುರುತಿಸಿಕೊಂಡಿದೆ. ತಂತ್ರಜ್ಞಾನ, ಉದ್ಯಮ ಶೀಲತೆಯಲ್ಲಿ ಈ ನಗರ ದಿನದಿಂದ ದಿನಕ್ಕೆ ಬೆಳೆಯುತ್ತಲೇ ಇದೆ.
ಅದರಲ್ಲೂ ಶಿಕ್ಷಣ ಕ್ಷೇತ್ರದಲ್ಲಿ ಕರ್ನಾಟಕ ಉತ್ತಮ ಸಾಧನೆ ಮಾಡಿದೆ. ಇದು 1916ರಲ್ಲೇ ಮೈಸೂರು ವಿಶ್ವವಿದ್ಯಾನಿಲಯ ಸ್ಥಾಪಿಸಿದ ಹೆಗ್ಗಳಿಕೆಗೆ ಪಾತ್ರವಾಗಿದೆ. ಇನ್ನು ಈ ಗೌರವಾನ್ವಿತ ಶೈಕ್ಷಣಿಕ ಸಂಸ್ಥೆಗಳು ರಾಜ್ಯದ ಸಂಸ್ಕೃತಿ, ಸಂಪ್ರದಾಯವನ್ನು ಎತ್ತಿ ಹಿಡಿಯುತ್ತಿವೆ.

ಹಾಗಾದರೆ ಕರ್ನಾಟಕ ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲು ಯಾವ್ಯಾವ ಸಂಸ್ಥೆಗಳ ಪಾತ್ರ ಪ್ರಮುಖವಾದುದ್ದಾಗಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಕೇಂದ್ರ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡುವ ಮೂಲಕ ಶೈಕ್ಷಣಿಕ ಸುಧಾರಣೆಯಲ್ಲಿ ಹೊಸ ಯುಗಕ್ಕೆ ನಾಂದಿ ಹಾಡಿದೆ. ಕರ್ನಾಟಕ 2021ರ ಆಗಸ್ಟ್‌ನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅಳವಡಿಸಿಕೊಂಡ ಮೊದಲ ರಾಜ್ಯವಾಗಿದೆ.
ಐಐಟಿ ಧಾರವಾಡ
2023ರಲ್ಲಿ ಐಐಟಿ ಧಾರವಾಡದ ಹೊಸ ಕ್ಯಾಂಪಸ್ ಉದ್ಘಾಟನೆಯಾಗಿದ್ದು, ಈ ಮೂಲಕ 850 ಕೋಟಿ ರೂಪಾಯಿಗೂ ಹೆಚ್ಚು ವೆಚ್ಚದಲ್ಲಿ ವಿವಿಧ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. 2016ರಲ್ಲಿ ಸ್ಥಾಪಿಸಲಾದ 470 ಎಕರೆ ವಿಸ್ತೀರ್ಣದ ಕ್ಯಾಂಪಸ್ ಇದಾಗಿದ್ದು, ಉತ್ತಮ ಮೂಲಭೂತ ಸೌಕರ್ಯಗಳನ್ನು ಹೊಂದಿದೆ.
ಐಐಐಟಿ ರಾಯಚೂರು
ಐಐಐಟಿ ರಾಯಚೂರನ್ನು ಕೇಂದ್ರ ಸರ್ಕಾರವು ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಿಸಿದೆ. ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಮತ್ತು ಖಾಸಗಿ ಒಡೆತನದಲ್ಲಿ ಕ್ರಮವಾಗಿ 50:25:25ರ ಅನುಪಾತದಲ್ಲಿ ಹೂಡಿಕೆ ಮಾಡಲಾಗಿದೆ. ಐಐಐಟಿ ರಾಯಚೂರು ಇತರೆ ಸಂಸ್ಥೆಗಳಿಗಿಂತ ಹೆಚ್ಚಿನ ಖಾಸಗಿ ಸಹಭಾಗಿತ್ವ ಹೊಂದಿರುವ ಸಂಸ್ಥೆಯಾಗಿದೆ. ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಈ ಕ್ಯಾಂಪಸ್‌ಗೆ ಶಂಕುಸ್ಥಾಪನೆ ನೆರವೇರಿಸಿದರು.
ಏಕಲವ್ಯ ಮಾದರಿ ಶಾಲೆ
ಕರ್ನಾಟಕದಲ್ಲಿ ಬುಡಕಟ್ಟಿನ ಯುವಕರಿಗೆ ಶಿಕ್ಷಣ ನೀಡಲು ಕೇಂದ್ರ ಸರ್ಕಾರ ಅನೇಕ ಯೋಜನೆಗಳನ್ನು ಜಾರಿ ಮಾಡಿದೆ. ಅದರಲ್ಲಿ ಪ್ರಮುಖವಾಗಿ 9 ಏಕಲವ್ಯ ಮಾದರಿ ಶಾಲೆಗಳ ನಿರ್ಮಾಣ ಮಾಡಲಾಗಿದೆ. ಒಟ್ಟಾರೆ ದೇಶದಲ್ಲಿ 400ಕ್ಕೂ ಹೆಚ್ಚಿನ ಏಕಲವ್ಯ ವಸತಿ ಶಾಲೆಗಳನ್ನು ಸ್ಥಾಪಿಸಲಾಗಿದ್ದು, ಇದರಲ್ಲಿ ಒಟ್ಟು 38,000 ಶಿಕ್ಷಕರು, ಸಹಾಯಕ ಸಿಬ್ಬಂದಿಯನ್ನು ನೇಮಿಸಲಾಗಿದೆ. ಇದು ಬರೋಬ್ಬರಿ 3.5ಲಕ್ಷ ಬುಡಕಟ್ಟು ವಿದ್ಯಾರ್ಥಿಗಳಿಗೆ ಪ್ರಯೋಜನವಾಗಿದೆ.
ಪಿಎಂ ಶ್ರೀ ಯೋಜನೆ
ಅಷ್ಟೇ ಅಲ್ಲದೆ, ರೈಸಿಂಗ್ ಇಂಡಿಯಾ ಯೋಜನೆ ಅಡಿಯಲ್ಲಿ 14,500 ಪಿಎಂ ಶ್ರೀ ಶಾಲೆಗಳನ್ನು ಅಭಿವೃದ್ಧಿ ಮಾಡಲು ಉದ್ದೇಶಿಸಲಾಗಿದೆ. ಈ ಪಿಎಂ ಶ್ರೀ ಯೋಜನೆಗೆ ಕೇಂದ್ರೀಯ ವಿಶ್ವವಿದ್ಯಾಲಯ ರಾಯಚೂರು ಆಯ್ಕೆಯಾಗಿದೆ. ಅಲ್ಲದೆ ಸುಮಾರು 730 ಕೇಂದ್ರೀಯ ವಿದ್ಯಾಲಯಗಳನ್ನು ಪಿಎಂ ಶ್ರೀ ಶಾಲೆಗಳಾಗಿ ಆಯ್ಕೆಮಾಡಲಾಗಿದೆ.
ರಾಜ್ಯ ಸರ್ಕಾರ ವಿರೋಧಿಸುತ್ತಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಬೆಂಬಲಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸಹಿ ಅಭಿಯಾನವನ್ನು ಆರಂಭಿಸಿದೆ. ಈ ಅಭಿಯಾನ ರಾಷ್ಟ್ರೀಯ ಶಿಕ್ಷಣ ನೀತಿ ಮತ್ತು ಅದರ ಪ್ರಯೋಜನಗಳನ್ನು ಉಳಿಸಲು ಒತ್ತಾಯಿಸಿ ಒಂದು ಕೋಟಿ ಸಹಿ ಸಂಗ್ರಹದ ಗುರಿಯನ್ನ ಹೊಂದಿದೆ. ಪ್ರಧಾನಿ ಮೋದಿ ನಾಯಕತ್ವದಲ್ಲಿ ಕೇಂದ್ರ ಸರ್ಕಾರ ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಬೆಳವಣಿಗೆಗೆ ಯೋಜನೆಗಳನ್ನು ರೂಪಿಸುತ್ತಿದೆ. ಐಐಐಟಿಗಳ ಸಂಖ್ಯೆಯನ್ನು 9ರಿಂದ 25ಕ್ಕೆ ಹೆಚ್ಚಿಸಿದೆ. ಈ ಮೂಲಕ ಶಿಕ್ಷಣದ ಪರಿವರ್ತನೆಗೆ ಕೇಂದ್ರ ಸರ್ಕಾರ ಒತ್ತು ನೀಡಿದೆ.
ಹಿಂದುಳಿದ ಪ್ರದೇಶದಲ್ಲಿ ಗುಣಮಟ್ಟದ ಶಿಕ್ಷಣವನ್ನು ಪಡೆಯುವ ವಿದ್ಯಾರ್ಥಿಗಳನ್ನು ಒಳಗೊಂಡಂತೆ ಇಡೀ ರಾಷ್ಟ್ರದ ನುರಿತ ಯುವಜನತೆ ದೇಶದ ಆರ್ಥಿಕ ಪ್ರಗತಿಯ ಪ್ರಯೋಜನ ಪಡೆಯಲು ಸಿದ್ಧವಾಗಿದ್ದಾರೆ. ಕೇಂದ್ರ ಸರ್ಕಾರ ಏಕಲವ್ಯ ಮಾದರಿ ಶಾಲೆಗಳ ಮೂಲಕ ಸಾಮಾಜಿಕ, ಆರ್ಥಿಕ, ಭೌಗೋಳಿಕ ಪ್ರತ್ಯೇಕತೆಯನ್ನು ಸರಿದೂಗಿಸಲು ಸಹಕಾರಿಯಾಗಿದ್ದು, ಈ ಶಿಕ್ಷಣ ನೀತಿ ಬಡ ವಿದ್ಯಾರ್ಥಿಗಳಿಗೆ ವರದಾನವಾಗಿದೆ.
-
School Property: ಸರ್ಕಾರಿ ಶಾಲೆ 12 ವರ್ಷಗಳಿಂದ ಒಂದೇ ಭೂಮಿಯಲ್ಲಿದ್ದರೆ ಅದು ರಾಜ್ಯ ಸರ್ಕಾರದ ಆಸ್ತಿ: ಏನಿದು ಹೊಸ ಕಾನೂನು? -
ದ್ವಿತೀಯ PUC ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ -
PUC ಅಂಕಪಟ್ಟಿ ಇನ್ನು ಡಿಜಿಟಲ್: ಮುಂದಿನ ವರ್ಷದಿಂದ ಸಿಗಲ್ಲ ಭೌತಿಕ ಅಂಕಪಟ್ಟಿ , ಡಿಜಿಲಾಕರ್ನಲ್ಲಿ ಮಾತ್ರ ಲಭ್ಯ -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ












Click it and Unblock the Notifications