• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಅಚ್ಛೇದಿನ್ ಎಲ್ಲಿ? ಎಂದ ಸಿದ್ದರಾಮಯ್ಯಗೆ ಬಿಜೆಪಿ ತಿರುಗೇಟು

|
   ಅಚ್ಛೇದಿನ್ ಎಲ್ಲಿ? ಎಂದ ಸಿದ್ದರಾಮಯ್ಯಗೆ ಬಿಜೆಪಿ ತಿರುಗೇಟು | Oneindia Kannada

   ಬೆಂಗಳೂರು, ಫೆಬ್ರವರಿ 25 : 'ಅಚ್ಛೇದಿನ್ ಎಲ್ಲಿ, 2 ಕೋಟಿ ಉದ್ಯೋಗ ಎಲ್ಲಿ? ಸೇರಿದಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಲವು ಪ್ರಶ್ನೆಗಳನ್ನು ಕೇಳಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಬಿಜೆಪಿ ಟ್ವಿಟರ್‌ನಲ್ಲಿ ತಿರುಗೇಟು ಕೊಟ್ಟಿದೆ.

   ಭಾನುವಾರ @siddaramaiah ಅಕೌಂಟ್‌ನಿಂದ ಸರಣಿ ಟ್ವೀಟ್‌ಗಳನ್ನು ಮಾಡಿದ್ದ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಲವು ಪ್ರಶ್ನೆಗಳನ್ನು ಕೇಳಿದ್ದರು. ಮೋದಿ ಅವರು ಮನ್ ಕೀ ಬಾತ್ ತಿಂಗಳ ರೇಡಿಯೋ ಕಾರ್ಯಕ್ರಮ ಸುಳ್ಳುಗಳನ್ನು ತುಂಬಿದ ಚೀಲ ಎಂದು ಟೀಕಿಸಿದ್ದರು.

   ಅಚ್ಛೇ ದಿನ್ ಎಲ್ಲಿ?, ಮೋದಿಗೆ ಸಿದ್ದರಾಮಯ್ಯ ಟ್ವೀಟ್ ಬಾಣ!

   ಕರ್ನಾಟಕ ಬಿಜೆಪಿ ಸಿದ್ದರಾಮಯ್ಯ ಅವರ ಟ್ವೀಟ್‌ಗಳಿಗೆ ತಿರುಗೇಟು ಕೊಟ್ಟಿದೆ. ನೀವು ಕರ್ನಾಟಕದ ಮುಖ್ಯಮಂತ್ರಿಯಾಗಿದ್ದಾಗ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸಿದ್ದೀರಿ ಎಂದು ಲೇವಡಿ ಮಾಡಿದೆ. ಜಂಗಲ್‌ ರಾಜ್‌ಗೆ ನಿಮ್ಮ ಸರ್ಕಾರ ಉತ್ತಮ ಉದಾಹರಣೆ ಎಂದು ಹೇಳಿದೆ.

   ಮೋದಿ, ಅಮಿತ್‌ ಶಾಗೆ ಸಿದ್ದರಾಮಯ್ಯ 5 ಪ್ರಶ್ನೆಗಳು

   ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಆಡಳಿತ ಮತ್ತು ಪ್ರತಿಪಕ್ಷಗಳ ನಾಯಕರ ಮಾತಿನ ಸಮರ ಜೋರಾಗಿದೆ. ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ನಾಯಕರು ಪರಸ್ಪರ ಟೀಕೆಗಳನ್ನು ಮಾಡುತ್ತಿದ್ದಾರೆ....

   ಕರ್ನಾಟಕಕ್ಕೆ ಬರುತ್ತಿರುವ ಮೋದಿಗೆ ಹಲವು ಪ್ರಶ್ನೆ ಕೇಳಿದ ಕಾಂಗ್ರೆಸ್!

   ನಿಮ್ಮಂತ ಮುಖ್ಯಮಂತ್ರಿಗಳನ್ನು ರಾಜ್ಯ ಕಂಡಿಲ್ಲ

   ಪ್ರಧಾನಿ ಮೋದಿಯಷ್ಟು ಸುಳ್ಳು ಹೇಳಿದ ಪ್ರಧಾನಿಗಳನ್ನು ದೇಶ ಕಂಡಿಲ್ಲ ಎಂದು ಟ್ವೀಟ್ ಮಾಡಿದ್ದ ಸಿದ್ದರಾಮಯ್ಯಗೆ ಬಿಜೆಪಿ ತಿರುಗೇಟು ಕೊಟ್ಟಿದೆ. ನಿಮ್ಮಂತ ಭ್ರಷ್ಟ ಮುಖ್ಯಮಂತ್ರಿಗಳನ್ನು ಕರ್ನಾಟಕ ಕಂಡಿಲ್ಲ ಎಂದು ಹೇಳಿದೆ.

   ಸಮಾಜದಲ್ಲಿ ಆತಂಕ ಮೂಡಿಸಿದ್ದೀರಿ

   ಕಾಂಗ್ರೆಸ್ 55 ವರ್ಷಗಳಲ್ಲಿ ಮಾಡದಿದ್ದನ್ನು ಮೋದಿ 55 ತಿಂಗಳಿನಲ್ಲಿ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದರು. ಇದಕ್ಕೆ ತಿರುಗೇಟು ನೀಡಿರುವ ಬಿಜೆಪಿ ಅತ್ಯಧಿಕ ಅಪರಾಧ ಸಂಖ್ಯೆ, ಪೊಲೀಸರ ಹತ್ಯೆಯಾಗಿದ್ದು ನೀವು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಎಂದು ಬಿಜೆಪಿ ಹೇಳಿದೆ.

   ಎಲ್ಲಾ ಭರವಸೆ ಈಡೇರಿಸಿದ್ದೇನೆ

   ನಾನು ಮುಖ್ಯಮಂತ್ರಿಯಾಗಿದ್ದಾಗ ನೀಡಿದ ಎಲ್ಲಾ ಭರವಸೆ ಈಡೇರಿಸಿದ್ದೆ ಎಂದು ಹೇಳಿದ್ದ ಸಿದ್ದರಾಮಯ್ಯಗೆ ತಿರುಗೇಟು ನೀಡಿರುವ ಬಿಜೆಪಿ ಹಿಂದೂ ಸಂಘಟನೆ ಕಾರ್ಯಕರ್ತರ ಹತ್ಯೆ, ಲೋಕಾಯುಕ್ತವನ್ನು ದುರ್ಬಲಗೊಳಿಸಿದ್ದು, ಸಮಾಜವನ್ನು ಒಡೆದದ್ದು ನಿಮ್ಮ ಆಡಳಿತದಲ್ಲಿ ಎಂದು ಬಿಜೆಪಿ ಹೇಳಿದೆ.

   ಯಡಿಯೂರಪ್ಪ, ಸಿದ್ದರಾಮಯ್ಯ ಭೇಟಿ

   ಸಾಮಾಜಿಕ ಜಾಲತಾಣದಲ್ಲಿ ಏಟು ಎದಿರೇಟು ಕೊಡುತ್ತಿದ್ದರೆ ಸೋಮವಾರ ಹುಬ್ಬಳ್ಳಿಯಲ್ಲಿ ಸಿದ್ದರಾಮಯ್ಯ ಮತ್ತು ಯಡಿಯೂರಪ್ಪ ಆಕಸ್ಮಿಕವಾಗಿ ಭೇಟಿಯಾದರು. ರಾಜಕೀಯ ಜೀವನದ ಹೊರತಾಗಿಯೂ ಯಡಿಯೂರಪ್ಪ ಮತ್ತು ನಾನು ಒಳ್ಳೆಯ ಗೆಳೆಯರು ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾ

   English summary
   Karnataka Former Chief Minister Siddaramaiah in series of tweet asked the Prime Minister of India Narendra Modi Where is Acche Din?. BJP state unit answered for Siddaramaiah questions.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X