3 ಜಿಲ್ಲೆಗೆ ಹೊಸ ಅಧ್ಯಕ್ಷರನ್ನು ನೇಮಿಸಿದ ಕರ್ನಾಟಕ ಬಿಜೆಪಿ

ಬೆಂಗಳೂರು, ಜನವರಿ 05; ಮುಂದಿನ ವರ್ಷದ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಬಿಜೆಪಿ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿದೆ. ಮೂರು ಜಿಲ್ಲೆಗಳಿಗೆ ಹೊಸ ಅಧ್ಯಕ್ಷರನ್ನು ನೇಮಕ ಮಾಡಿದೆ.

ಮಂಗಳವಾರ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಈ ಕುರಿತು ಆದೇಶ ಹೊರಡಿಸಿದ್ದಾರೆ. ಅಲ್ಪ ಸಂಖ್ಯಾತರ ಮೋರ್ಚಾಕ್ಕೆ ರಾಜ್ಯ ಅಧ್ಯಕ್ಷರು ಮತ್ತು ರಾಜ್ಯ ಉಪಾಧ್ಯಕ್ಷರನ್ನು ಸಹ ನೇಮಕ ಮಾಡಲಾಗಿದೆ.

ರಾಜೀನಾಮೆಯಿಂದ ತೆರವಾಗಿದ್ದ ತುಮಕೂರು, ಮಧುಗಿರಿ, ಹುಬ್ಬಳ್ಳಿ-ಧಾರವಾಡ ಜಿಲ್ಲೆಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. 2023ರಲ್ಲಿ ವಿಧಾನಸಭೆ ಚುನಾವಣೆ ನಡೆಯುವುದರಿಂದ ತಯಾರಿ, ಪಕ್ಷ ಸಂಘಟನೆಗೆ ಸಹಾಯಕವಾಗಲು ಹೊಸ ಜಿಲ್ಲಾಧ್ಯಕ್ಷರ ನೇಮಕವಾಗಿದೆ.

Karnataka BJP Appointed New President For Three Districts

ಪದಾಧಿಕಾರಿಗಳ ಪಟ್ಟಿ

* ತುಮಕೂರು ಜಿಲ್ಲಾ ಅಧ್ಯಕ್ಷರಾಗಿ ತುಮಕೂರು ಗ್ರಾಮಾಂತರದ ಲಕ್ಷ್ಮೀಶ ನೇಮಕಗೊಂಡಿದ್ದಾರೆ. (ವಿಧಾನಸಭಾ ಕ್ಷೇತ್ರಗಳು; ತುಮಕೂರು ನಗರ, ತುಮಕೂರು ಗ್ರಾಮಾಂತರ, ಕುಣಿಗಲ್, ತುರುವೇಕೆರೆ, ತಿಪಟೂರು, ಚಿಕ್ಕನಾಯಕನಹಳ್ಳಿ, ಗುಬ್ಬಿ)

* ಮಧುಗಿರಿ ಜಿಲ್ಲಾ ಅಧ್ಯಕ್ಷರಾಗಿ ಶಿರಾದ ಬಿ. ಕೆ. ಮಂಜುನಾಥ್ ನೇಮಕಗೊಂಡಿದ್ದಾರೆ. (ವಿಧಾನಸಭಾ ಕ್ಷೇತ್ರಗಳು; ಮಧುಗಿರಿ, ಕೊರಟಗೆರೆ, ಶಿರಾ, ಪಾವಗಡ)

* ಹುಬ್ಬಳ್ಳಿ-ಧಾರವಾಡ ಜಿಲ್ಲಾ ಅಧ್ಯಕ್ಷರಾಗಿ ಧಾರವಾಡದ ಸಂಜಯ್ ಕಪಾಟ್‌ಕರ್ ನೇಮಕಗೊಂಡಿದ್ದಾರೆ.

* ಅಲ್ಪ ಸಂಖ್ಯಾತ ಮೋರ್ಚಾದ ರಾಜ್ಯಾಧ್ಯಕ್ಷರಾಗಿ ಬೆಂಗಳೂರಿನ ಸೈಯದ್ ಸಲಾಂ ನೇಮಕಗೊಂಡಿದ್ದಾರೆ.

* ಅಲ್ಪ ಸಂಖ್ಯಾತ ಮೋರ್ಚಾದ ರಾಜ್ಯ ಉಪಾಧ್ಯಕ್ಷರಾಗಿ ಮೊಹಮ್ಮದ್ ಫಾರೂಕ್ ನೇಮಕವಾಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+