ಮೂರು ಜಿಲ್ಲೆಗಳಿಗೆ ಹೊಸ ಅಧ್ಯಕ್ಷರನ್ನು ನೇಮಿಸಿದ ಬಿಜೆಪಿ

ಬೆಂಗಳೂರು, ಜನವರಿ 31 : ಕರ್ನಾಟಕ ಬಿಜೆಪಿ ಮೂರು ಜಿಲ್ಲೆಗಳಿಗೆ ನೂತನ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಜನವರಿ 28ರಂದು 12 ಜಿಲ್ಲೆಗಳಿಗೆ ಹೊಸ ಅಧ್ಯಕ್ಷರನ್ನು ನೇಮಕ ಮಾಡಿತ್ತು.

ಶುಕ್ರವಾರ ಕರ್ನಾಟಕ ಬಿಜೆಪಿ ಮಂಡ್ಯ, ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಿಗೆ ನೂತನ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಈ ಕುರಿತು ಆದೇಶವನ್ನು ಹೊರಡಿಸಿದ್ದಾರೆ.

ಮಂಡ್ಯ ಜಿಲ್ಲೆಗೆ ಕೆ. ಜೆ. ವಿಜಯ್ ಕುಮಾರ್, ಬೀದರ್‌ ಜಿಲ್ಲೆಗೆ ಶಿವಾನಂದ, ಕಲಬುರಗಿ ನಗರಕ್ಕೆ ಸಿದ್ದಾಜಿ ಎಸ್. ಪಾಟೀಲ್‌ರನ್ನು ಜಿಲ್ಲಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ.

ಜನವರಿ 28ರ ಮಂಗಳವಾರ 12 ಜಿಲ್ಲೆಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿತ್ತು. ವಿವಿಧ ಜಿಲ್ಲೆಗಳಲ್ಲಿ ಪಕ್ಷ ಸಂಘಟನೆಯನ್ನು ಗಟ್ಟಿಗೊಳಿಸಲು ಬಿಜೆಪಿ ಸಂಘಟನಾತ್ಮಕವಾಗಿ ಹಲವು ಬದಲಾವಣೆಗಳನ್ನು ಮಾಡುತ್ತಿದೆ.

Karnataka BJP

ಜನವರಿ 16ರಂದು ಕರ್ನಾಟಕ ಬಿಜೆಪಿ ಅಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ನೇಮಕಗೊಂಡಿದ್ದರು. 2020-2023ನೇ ಸಾಲಿಗೆ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಕಾರ್ಯ ನಿರ್ವಹಣೆ ಮಾಡಲಿದ್ದಾರೆ.

ಜನವರಿ 20ರಂದು ಬಿಜೆಪಿ ರಾಷ್ಟ್ರೀ ಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದು, ಮುಂದಿನ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಹಲವು ಬದಲಾವಣೆಗಳನ್ನು ಮಾಡಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+