ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿ.ಕೆ.ಹರಿಪ್ರಸಾದ್‌ರನ್ನು ನಿಮ್ಹಾನ್ಸ್‌ಗೆ ಸೇರಿಸಲು ರಾಹುಲ್‌ಗೆ ಬಿಜೆಪಿ ಮನವಿ!

|
Google Oneindia Kannada News

ಬೆಂಗಳೂರು, ಜನವರಿ 17 : ಬಿಜೆಪಿ ಅಧ್ಯಕ್ಷ ಅಮಿತ್ ಶಾ ಆರೋಗ್ಯದ ಬಗ್ಗೆ ವ್ಯಂಗ್ಯವಾಡಿದ ರಾಜ್ಯಸಭಾ ಸದಸ್ಯ ಮತ್ತು ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಅವರನ್ನು ನಿಮ್ಹಾನ್ಸ್‌ಗೆ ದಾಖಲು ಮಾಡಬೇಕು ಎಂದು ಕರ್ನಾಟಕ ಬಿಜೆಪಿ ಹೇಳಿದೆ.

ಬೆಂಗಳೂರಿನಲ್ಲಿ ಗುರುವಾರ ಕಾಂಗ್ರೆಸ್ ಬಿಜೆಪಿಯ ಆಪರೇಷನ್ ಕಮಲದ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿತ್ತು. ಪ್ರತಿಭಟನೆಯಲ್ಲಿ ಮಾತನಾಡಿದ್ದ ಬಿ.ಕೆ.ಹರಿಪ್ರಸಾದ್ ಬಿಜೆಪಿ ಅಧ್ಯಕ್ಷ ಅಮಿತ್‌ ಶಾಗೆ ಬಂದಿರುವ ಹಂದಿ ಜ್ವರದ ಬಗ್ಗೆ ವ್ಯಂಗ್ಯವಾಡಿದ್ದರು.

ಅಮಿತ್ ಶಾ ದೊಡ್ಡ ಸುಳ್ಳುಗಾರ, ಚಾಣಾಕ್ಷ ಅಲ್ಲ : ಕಾಂಗ್ರೆಸ್‌ ವ್ಯಂಗ್ಯಅಮಿತ್ ಶಾ ದೊಡ್ಡ ಸುಳ್ಳುಗಾರ, ಚಾಣಾಕ್ಷ ಅಲ್ಲ : ಕಾಂಗ್ರೆಸ್‌ ವ್ಯಂಗ್ಯ

Karnataka BJP attacked on Congress MP BK Hariprasad

ಟ್ವೀಟ್ ಮೂಲಕ ಬಿ.ಕೆ.ಹರಿಪ್ರಸಾದ್ ಅವರಿಗೆ ಕರ್ನಾಟಕ ಬಿಜೆಪಿ ತಿರುಗೇಟು ಕೊಟ್ಟಿದೆ. ಬಿ.ಕೆ.ಹರಿಪ್ರಸಾದ್ ಅವರನ್ನು ನಿಮ್ಹಾನ್ಸ್‌ಗೆ ಸೇರಿಸಲು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಬಿಜೆಪಿ ಮನವಿ ಮಾಡಿದೆ.

ಶಾಸಕಾಂಗ ಸಭೆಗೆ ಗೈರಾಗಬೇಡಿ : ಸಿದ್ದರಾಮಯ್ಯ ಖಡಕ್ ಎಚ್ಚರಿಕೆ!ಶಾಸಕಾಂಗ ಸಭೆಗೆ ಗೈರಾಗಬೇಡಿ : ಸಿದ್ದರಾಮಯ್ಯ ಖಡಕ್ ಎಚ್ಚರಿಕೆ!

ಬಿ.ಕೆ.ಹರಿಪ್ರಸಾದ್ ಹೇಳಿದ್ದೇನು? : 'ಕಾಂಗ್ರೆಸ್ ಶಾಸಕರನ್ನು ಕಿಡ್ನಾಪ್‌ ಮಾಡಿ ಬಾಂಬೆಯಲ್ಲಿಟ್ಟಿದ್ದಾರೆ. ಆರ್‌ಎಸ್‌ಎಸ್‌ ಮತ್ತು ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತರು ಅವರಿಗೆ ಸರ್ವಗಾವಲಾಗಿದ್ದಾರೆ. ಕೆಲವು ಶಾಸಕರು ಈಗಾಗಲೇ ವಾಪಸ್ ಬಂದಿರುವುದರಿಂದ ಅಮಿತ್ ಶಾ ಅವರಿಗೆ ಗಾಬರಿಯಾಗಿ ಜ್ವರ ಬಂದಿದೆ. ಜ್ವರ ಎಂದರೆ ಕಮ್ಮಿ ಜ್ವರ ಅಲ್ಲ, ಅದು ಹಂದಿ ಜ್ವರ ಕರ್ನಾಟಕದಲ್ಲಿ ಸರ್ಕಾರವನ್ನು ಕಡೆವಲು ಪ್ರಯತ್ನ ಮಾಡಿದರೆ ಕೇವಲ ಹಂದಿ ಜ್ವರ ಅಲ್ಲ ವಾಂತಿ, ಭೇದಿ ರೋಗಗಳು ಬರುತ್ತವೆ' ಎಂದು ಬಿ.ಕೆ.ಹರಿಪ್ರಸಾದ್ ಹೇಳಿದ್ದರು.

ಆಪರೇಷನ್ ಠುಸ್... 3 ನೇ ಬಾರಿಗೂ ಯಡಿಯೂರಪ್ಪ ಫೇಲ್?ಆಪರೇಷನ್ ಠುಸ್... 3 ನೇ ಬಾರಿಗೂ ಯಡಿಯೂರಪ್ಪ ಫೇಲ್?

ಟ್ವೀಟರ್ ಮೂಲಕ ಅವರಿಗೆ ತಿರುಗೇಟು ಕೊಟ್ಟಿರುವ ಬಿಜೆಪಿ, 'ಹರಿಪ್ರಸಾದ್ ಅವರು ಅಮಿತ್ ಶಾ ಅವರ ಆರೋಗ್ಯವನ್ನು ವ್ಯಂಗ್ಯವಾಡಿದ್ದಾರೆ. ಇದು ಅವರ ಮನಸ್ಥಿತಿಯನ್ನು ತೋರಿಸುತ್ತದೆ. ಇಂತಹ ನಾಗರಿಕ ಸಮಾಜದಲ್ಲಿ ಬದುಕಲು ಅರ್ಹರಲ್ಲ. ರಾಹುಲ್ ಗಾಂಧಿ ಅವರಿಗೆ ಮನವಿ ಮಾಡುತ್ತಿದ್ದೇವೆ. ಹರಿಪ್ರಸಾದ್ ಅವರನ್ನು ನಿಮ್ಹಾನ್ಸ್‌ಗೆ ಸೇರಿಸಿ' ಎಂದು ಬಿಜೆಪಿ ಹೇಳಿದೆ.

English summary
In a tweet Karnataka BJP said that Congress MP & AICC General Secretary B.K.Hariprasad should admit to NIMHANS. B.K.Hariprasad mocked at health condition of BJP president Amit Shah.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X