ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರೋಷನ್ ಬೇಗ್ ಎಸ್‌ಐಟಿ ವಶಕ್ಕೆ ; ಸಿಎಂ ಟ್ವೀಟ್‌ಗೆ ಬಿಜೆಪಿ ಸ್ಪಷ್ಟನೆ

|
Google Oneindia Kannada News

ಬೆಂಗಳೂರು, ಜುಲೈ 16 : ಐಎಂಎ ಹಗರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಮಾಜಿ ಸಚಿವ ರೋಷನ್ ಬೇಗ್ ವಶಕ್ಕೆ ಪಡೆದು ವಿಚಾರಣೆ ನಡೆಸಿದೆ. ಆದರೆ, ರೋಷನ್ ಬೇಗ್ ವಶಕ್ಕೆ ಪಡೆದಿರುವುದು ಎಚ್. ಡಿ. ಕುಮಾರಸ್ವಾಮಿ ಮತ್ತು ಕರ್ನಾಟಕ ಬಿಜೆಪಿ ನಡುವಿನ ಟ್ವೀಟ್ ಸಮರಕ್ಕೆ ಕಾರಣವಾಗಿದೆ.

ಸೋಮವಾರ ರಾತ್ರಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ರೋಷನ್ ಬೇಗ್ ವಶಕ್ಕೆ ಪಡೆಯಲಾಗಿತ್ತು. 14 ತಾಸುಗಳ ವಿಚಾರಣೆ ಬಳಿಕ ಮಂಗಳವಾರ ಮಧ್ಯಾಹ್ನ ಅವರನ್ನು ಬಿಡುಗಡೆ ಮಾಡಲಾಗಿದೆ. ಜುಲೈ 19ರಂದು ಪುನಃ ವಿಚಾರಣೆಗೆ ಹಾಜರಾಗಬೇಕು ಎಂದು ಎಸ್‌ಐಟಿ ಸೂಚನೆ ಕೊಟ್ಟಿದೆ.

ಎಸ್ಐಟಿ ವಿಚಾರಣೆ ಬಳಿಕ ರೋಷನ್ ಬೇಗ್ ಪ್ರತಿಕ್ರಿಯೆ ನೀಡಿದ್ದೇನು?ಎಸ್ಐಟಿ ವಿಚಾರಣೆ ಬಳಿಕ ರೋಷನ್ ಬೇಗ್ ಪ್ರತಿಕ್ರಿಯೆ ನೀಡಿದ್ದೇನು?

ರೋಷನ್ ಬೇಗ್ ವಶಕ್ಕೆ ಪಡೆದಿರುವ ಕುರಿತು ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದರು. ಇದರಲ್ಲಿ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ. ಎಸ್. ಯಡಿಯೂರಪ್ಪ ಆಪ್ತ ಸಹಾಯಕ ಸಂತೋಷ್ ಹೆಸರು ಸೇರಿಸಿದ್ದರು.

ಬಿಎಸ್‌ವೈ ಆಪ್ತ ಸಂತೋಷ್, ಬಿಜೆಪಿ ಮುಖಂಡ ಸಿ.ಪಿ.ಯೋಗೀಶ್ವರ್‌ಗೆ ಸಂಕಷ್ಟಬಿಎಸ್‌ವೈ ಆಪ್ತ ಸಂತೋಷ್, ಬಿಜೆಪಿ ಮುಖಂಡ ಸಿ.ಪಿ.ಯೋಗೀಶ್ವರ್‌ಗೆ ಸಂಕಷ್ಟ

ಈ ಟ್ವೀಟ್‌ಗೆ ಬಿಜೆಪಿ ಪ್ರತಿಕ್ರಿಯೆ ಕೊಟ್ಟಿದ್ದು ಮುಖ್ಯಮಂತ್ರಿಗಳು ನಕಲಿ ಸುದ್ದಿಗಳನ್ನು ಹಬ್ಬಿಸಿ ರಾಜ್ಯದ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದೆ. ಬೋರ್ಡಿಂಗ್ ಪಾಸ್ ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಎಂದು ಆಗ್ರಹಿಸಿದೆ.

ಐಎಂಎ ಹಗರಣ : ರೋಷನ್ ಬೇಗ್ ಎಸ್‌ಐಟಿ ವಶಕ್ಕೆಐಎಂಎ ಹಗರಣ : ರೋಷನ್ ಬೇಗ್ ಎಸ್‌ಐಟಿ ವಶಕ್ಕೆ

ಕುಮಾರಸ್ವಾಮಿ ಟ್ವೀಟ್ ಮಾಡಿದ್ದರು

ಕುಮಾರಸ್ವಾಮಿ ಟ್ವೀಟ್ ಮಾಡಿದ್ದರು

ಐಎಂಎ ಹಗರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ರೋಷನ್ ಬೇಗ್ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ವಿಮಾನ ನಿಲ್ದಾಣದಲ್ಲಿ ಯಡಿಯೂರಪ್ಪ ಪಿಎ ಸಂತೋಷ್ ಜೊತೆ ಮುಂಬೈಗೆ ಹೋಗಲು ಅವರು ಪ್ರಯತ್ನ ನಡೆಸುತ್ತಿದ್ದರು ಎಂದು ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದರು.

ಬಿಜೆಪಿಯಿಂದ ಸ್ಪಷ್ಟನೆ

ಬಿಜೆಪಿಯಿಂದ ಸ್ಪಷ್ಟನೆ

ಈ ಟ್ವೀಟ್‌ಗೆ ಕರ್ನಾಟಕ ಬಿಜೆಪಿ ಸ್ಪಷ್ಟನೆ ನೀಡಿದ್ದು, ರೋಷನ್ ಬೇಗ್ ಜೊತೆ ಯಡಿಯೂರಪ್ಪ ಪಿಎ ಸಂತೋಷ್ ಪ್ರಯಾಣಿಸುತ್ತಿದ್ದರು ಎಂಬುದು ಸುಳ್ಳು. ಸುಳ್ಳು ಸುದ್ದಿ ಮೂಲಕ ಮುಖ್ಯಮಂತ್ರಿಗಳು ರಾಜ್ಯದ ದಾರಿ ತಪ್ಪಿಸುತ್ತಿದ್ದಾರೆ. ಸಿಸಿಟಿವಿ ದೃಶ್ಯಾವಳಿ, ಬೋರ್ಡಿಂಗ್ ಪಾಸ್ ಚೆಕ್ ಮಾಡಿಕೊಳ್ಳಿ ಎಂದು ಹೇಳಿದೆ.

ಕುಮಾರಸ್ವಾಮಿ ಭೇಟಿ ಮಾಡಿದ್ದು ಏಕೆ?

ಕುಮಾರಸ್ವಾಮಿ ಭೇಟಿ ಮಾಡಿದ್ದು ಏಕೆ?

ರೋಷನ್ ಬೇಗ್ ಆರೋಪಿ ಎಂದಾದರೆ ಜುಲೈ 12ರಂದು ಎಚ್. ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದು ಏಕೆ?. ಈ ರಹಸ್ಯ ಭೇಟಿ ಬಗ್ಗೆ ಸಿಎಂ ವಿವರಣೆ ನೀಡುವರೇ? ಎಂದು ಕರ್ನಾಟಕ ಬಿಜೆಪಿ ಟ್ವೀಟ್ ಮೂಲಕ ಪ್ರಶ್ನಿಸಿದೆ.

ಮನ್ಸೂರ್ ಅಲಿಖಾನ್ ಪರಾರಿ

ಮನ್ಸೂರ್ ಅಲಿಖಾನ್ ಪರಾರಿ

ಬಿಜೆಪಿ ಎಚ್. ಡಿ. ಕುಮಾರಸ್ವಾಮಿ ಅವರು ರಾಜ್ಯವನ್ನು ಕಾಯುತ್ತಿರುವಾಗ ಮನ್ಸೂರ್ ಅಲಿಖಾನ್ ಪರಾರಿಯಾಗಿದ್ದು ಹೇಗೆ? ಎಂದು ಪ್ರಶ್ನಿಸಿದೆ. ಮನ್ಸೂರ್ ಅಲಿಖಾನ್ ಜೊತೆ ಬಿರಿಯಾನಿ ತಿಂದಿದ್ದು ಯಾರು? ಎಂದು ಬಿಜೆಪಿ ಪ್ರಶ್ನೆ ಮಾಡಿದೆ.

English summary
In a tweet Karnataka BJP clarified that B.S.Yeddyurappa personal assistant Santhosh not traveling with Roshan Baig. Roshan Baig detained by SIT on July 15, 2019 midnight in connection with the IMA scam.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X