ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪತ್ರಕರ್ತ ಸಂತೋಷ್ ತಮ್ಮಯ್ಯ ಬಂಧನ ಖಂಡಿಸಿದ ಬಿಜೆಪಿ

|
Google Oneindia Kannada News

ಬೆಂಗಳೂರು, ನವೆಂಬರ್ 13 : ಪತ್ರಕರ್ತ ಸಂತೋಷ್ ತಮ್ಮಯ್ಯ ಬಂಧನವನ್ನು ಕರ್ನಾಟಕ ಬಿಜೆಪಿ ಖಂಡಿಸಿದೆ. ಕಾಂಗ್ರೆಸ್‌-ಜೆಡಿಎಸ್ ಮೈತ್ರಿ ಸರ್ಕಾರ ಮಾತನಾಡುವ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಿತ್ತುಕೊಂಡಿದೆ ಎಂದು ಪಕ್ಷ ಆರೋಪಿಸಿದೆ.

ಇಸ್ಲಾಂ ಧರ್ಮದ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂಬ ಆರೋಪದ ಮೇಲೆ ಪತ್ರಕರ್ತ ಸಂತೋಷ್ ತಮ್ಮಯ್ಯ ಅವರನ್ನು ಗೋಣಿಕೊಪ್ಪಲು ಪೊಲೀಸರು ಬಂಧಿಸಿದ್ದಾರೆ. ಪೊನ್ನಂಪೇಟೆಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಪತ್ರಕರ್ತ ಸಂತೋಷ್ ತಮ್ಮಯ್ಯ ಬಂಧನವನ್ನು ವಿರೋಧಿಸಿ ಪ್ರತಿಭಟನೆಪತ್ರಕರ್ತ ಸಂತೋಷ್ ತಮ್ಮಯ್ಯ ಬಂಧನವನ್ನು ವಿರೋಧಿಸಿ ಪ್ರತಿಭಟನೆ

ತಮ್ಮಯ್ಯ ಅವರು ಸಮಾಜದಲ್ಲಿ ಶಾಂತಿ ಕದಡುವ ಯತ್ನ ನಡೆಸಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಿದ್ದಾಪುರ ಕರಡಿಗೋಡು ಗ್ರಾಮದ ಕೆ.ಜೆ.ಆಸ್ಕರ್ ಅವರು ದೂರು ನೀಡಿದ್ದರು. ದೂರಿನ ಅನ್ವಯ ಮಂಗಳವಾರ ಮುಂಜಾನೆ ಸಂತೋಷ್ ತಮ್ಮಯ್ಯ ಬಂಧಿಸಲಾಗಿದೆ.

Karnataka BJP condemns arrest of Journalist Santosh Thammaiah

ನವೆಂಬರ್ 5ರಂದು ಗೋಣಿಕೊಪ್ಪಲಿನಲ್ಲಿ ಪ್ರಜ್ಞಾ ಕಾವೇರಿ ಸಂಘಟನೆ ವತಿಯಿಂದ ಆಯೋಜಿಸಿದ್ದ 'ಟಿಪ್ಪು ಕರಾಳ ಮುಖಗಳ ಅನಾವರಣ' ಎಂಬ ವಿಚಾರ ಸಂಕಿರಣದಲ್ಲಿ ಸಂತೋಷ್ ತಮ್ಮಯ್ಯ ಅವರು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಸಂತೋಷ್ ತಮ್ಮಯ್ಯ ಬಂಧನ ಖಂಡಿಸಿ ಗೋಣಿಕೊಪ್ಪಲಿನಲ್ಲಿ ಕೊಡವ ಸಮಾಜ ಬೃಹತ್ ಪ್ರತಿಭಟನೆ ನಡೆಸಿದೆ. ಬಿಜೆಪಿ, ಹಿಂದೂಜಾಗರಣಾ ವೇದಿಕೆ, ವಿಶ್ವಹಿಂದೂ ಪರಿಷತ್ ಸದಸ್ಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ವಿಚಾರ ಸಂಕಿರಣದಲ್ಲಿ ಮೈಸೂರಿನ ಸುಧಾಕರ್ ಹೊಸಳ್ಳಿ, ಮಂಗಳೂರಿನ ರಾಬರ್ಟ್ ರೊಜಾರಿಯೋ, ಪೊನ್ನಂಪೇಟೆಯ ಅಡ್ಡಂಡ ಕಾರ್ಯಪ್ಪ ಮುಂತಾದವರು ಪಾಲ್ಗೊಂಡಿದ್ದರು, ಎಲ್ಲರ ವಿರುದ್ಧವೂ ದೂರು ದಾಖಲಾಗಿದೆ.

English summary
Karnataka BJP condemned the arrest of Journalist Santosh Thammaiah. Kodagu district Gonikoppalu police arrested Santosh Thammaiah for his abuse comment on Islam community.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X