ಅ.9ರಿಂದ ಮಹಾರಾಷ್ಟ್ರದಲ್ಲಿ ಸಿದ್ದರಾಮಯ್ಯ ಪ್ರಚಾರ

ಬೆಂಗಳೂರು, ಅ.6 : ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಅಖಾಡ ರಂಗೇರುತ್ತಿದೆ. ರಾಷ್ಟ್ರೀಯ ನಾಯಕರು ಈಗಾಗಲೇ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಕರ್ನಾಟಕ ಮುಖ್ಯಮಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯದ ಪ್ರಮುಖ ಬಿಜೆಪಿ ನಾಯಕರು ಮಹಾರಾಷ್ಟ್ರದ ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ.

ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಕೆಲವು ಸಚಿವರು, ಬಿಜೆಪಿ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ರಾಜ್ಯ ಬಿಜೆಪಿ ಅಧ್ಯಕ್ಷ ಪ್ರಹ್ಲಾದ್ ಜೋಶಿ, ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ, ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ಮುಂತಾದವರು ಮಹಾರಾಷ್ಟ್ರದಲ್ಲಿ ಪ್ರಚಾರ ನಡೆಸಲಿದ್ದಾರೆ. [ಸಿದ್ದು, ಖರ್ಗೆ ಸ್ಟಾರ್ ಪ್ರಚಾರಕರು]

Siddaramaiah

ಸಿದ್ದರಾಮಯ್ಯ, ಪರಮೇಶ್ವರ್ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಅ.9ರಿಂದ 12ರ ವರೆಗೆ ಮಹಾರಾಷ್ಟ್ರದ ನಾನಾ ಪ್ರದೇಶಗಳಲ್ಲಿ ಚುನಾವಣಾ ಪ್ರಚಾರ ನಡೆಸಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತಯಾಚಿಸಲಿದ್ದಾರೆ. ಸಚಿವರಾದ ಆರ್.ವಿ.ದೇಶಪಾಂಡೆ, ಕೃಷ್ಣ ಭೈರೇಗೌಡ, ಎಂ.ಬಿ.ಪಾಟೀಲ್, ಡಿ.ಕೆ.ಶಿವಕುಮಾರ್, ಎಸ್.ಆರ್.ಪಾಟೀಲ್, ರೋಷನ್ ಬೇಗ್ ಮುಂತಾದವರು ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ. [ಮುರಿದು ಬಿದ್ದ ಬಿಜೆಪಿ-ಶಿವಸೇನಾ 'ಮಹಾ' ಮೈತ್ರಿ]

ಬಿಜೆಪಿಯಿಂದ ತಂಡ ರಚನೆ : ಕರ್ನಾಟಕ ಬಿಜೆಪಿ ಮಹಾರಾಷ್ಟ್ರದಲ್ಲಿ ಪ್ರಚಾರ ನಡೆಸಲು ನಾಯಕರ ತಂಡವೊಂದನ್ನು ರಚಿಸಲಿದೆ. ಉಳಿದಂತೆ ಕೇಂದ್ರ ಸಚಿವರಾದ ಅನಂತ್ ಕುಮಾರ್, ಡಿ.ವಿ.ಸದಾನಂದ ಗೌಡ, ಜಿ.ಎಂ.ಸಿದ್ದೇಶ್ವರ್ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ. ಕರ್ನಾಟಕ ಮಹಾರಾಷ್ಟ್ರ ಗಡಿ ಭಾಗದಲ್ಲಿ ಕೆಲವು ನಾಯಕರು ಪ್ರಚಾರ ನಡೆಸಿದರೆ, ಹಿಂದಿ ಬಲ್ಲ ನಾಯಕರು ರಾಜ್ಯದ ವಿವಿಧ ಪ್ರದೇಶಗಳಲ್ಲಿ ಮತಯಾಚನೆ ಮಾಡಲಿದ್ದಾರೆ.

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಎನ್‌ಸಿಪಿ ಜೊತೆಗಿನ ಮೈತ್ರಿಯನ್ನು ಬಿಜೆಪಿ ಶಿವಸೇನೆ ಜೊತೆಗಿನ ಮೈತ್ರಿಯನ್ನು ಕಡಿದುಕೊಂಡಿವೆ. ಆದ್ದರಿಂದ ಉಭಯ ಪಕ್ಷಗಳಿಗೂ ಈ ಚುನಾವಣೆ ಮಹತ್ವದ್ದಾಗಿದೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. 288 ಸ್ಥಾನಗಳ ಮಹಾರಾಷ್ಟ್ರ ವಿಧಾನಸಭೆಗೆ ಅ.15ರಂದು ಮತದಾನ ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+