BY Vijayendra: ವಿಜಯೇಂದ್ರ ಪದಗ್ರಹಣ ಕಾರ್ಯಕ್ರಮ ಬದಲಾವಣೆ ಆಗಿದ್ಯಾಕೆ? ಬಿಜೆಪಿಯ ಪ್ಲಾನ್‌ ಏನು?

ಬೆಂಗಳೂರು, ನವೆಂಬರ್ 13: ನೂತನವಾಗಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ ಎಸ್‌ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಗೆ ಬಿಜೆಪಿ ಹೈಕಮಾಂಡ್‌ ರಾಜ್ಯಾಧ್ಯಕ್ಷ ಹುದ್ದೆ ನೀಡಿದ್ದು, ನವೆಂಬರ್ 15ರಂದು ಅಧಿಕೃತವಾಗಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.

ಇನ್ನೂ ನವೆಂಬರ್‌ 16 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಕಾರ್ಯಕರ್ತರ ಸಮಾವೇಶ ಮಾಡುವ ಮೂಲಕ ಒಗ್ಗಟ್ಟು ಪ್ರದರ್ಶನಕ್ಕೆ ಬಿಜೆಪಿ ಭರ್ಜರಿ ಸಿದ್ದತೆ ನಡೆಸಿತ್ತು. ಆದರೆ, ಇದೀಗ ಕಾರ್ಯಕ್ರಮವನ್ನ ಬಿಜೆಪಿ ಮುಂದೂಡಿದ್ದು, ನವೆಂಬರ್ 23ರ ನಂತರ ಬಿಜೆಪಿ ಕಾರ್ಯಕರ್ತರ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ.

Karnataka BJP Convention Will Postponed Says BJP MLC N Ravi Kumar

ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ರಾಜ್ಯ ಬಿಜೆಪಿ, ಇದೀಗ ಲೋಕಸಭಾ ಚುನಾವಣೆಗೆ ತಯಾರಿ ನಡೆಸುತ್ತಿದ್ದು, ರಾಜ್ಯ ಕಾಂಗ್ರೆಸ್‌ ಗೆ ಠಕ್ಕರ್‌ ಕೊಡಲು ರಾಜ್ಯ ಬಿಜೆಪಿ ಹೊಸ ಪ್ಲಾನ್‌ ನಡೆಸಿದೆ. ರಾಜ್ಯ ಬಿಜೆಪಿ ಬಿಜೆಪಿ ಕಾರ್ಯಕರ್ತರ ಸಮಾವೇಶಕ್ಕೆ ಸಿದ್ದತೆ ನಡೆಸಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರನ್ನು ಆಹ್ವಾನಿಸಿ ದೊಡ್ಡ ಸಮಾವೇಶ ನಡೆಸಲು ಬಿಜೆಪಿ ಪ್ಲಾನ್ ಮಾಡಿದೆ.

ಈಗಾಗಲೇ ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಹೈಕಮಾಂಡ್‌ ನಾಯಕರು ಬ್ಯುಸಿಯಾಗಿದ್ದು, ಈ ಸಂದರ್ಭದಲ್ಲಿ ಹೈಕಮಾಂಡ್‌ ನಾಯಕರನ್ನ ಆಹ್ವಾನಿಸಿದ್ರೆ ಬರುವುದಿಲ್ಲವೆಂದು ನವೆಂಬರ್‌ 16 ರ ಸಮಾವೇಶವನ್ನು ಮುಂದೂಡಿದ್ದು, ನವೆಂಬರ್ 23ರ ನಂತರ ಬಿಜೆಪಿ ಕಾರ್ಯಕರ್ತರ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ.

ಇನ್ನೂ ಈ ಕುರಿತು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಮಾತನಾಡಿ, ನವೆಂಬರ್ 23ರ ನಂತರ ನವೆಂಬರ್‌ 30 ರೊಳಗೆ ದೊಡ್ಡ ಸಾರ್ವಜನಿಕ ಸಭೆ ನಡೆಸುತ್ತೇವೆ. ನವೆಂಬರ್‌ 23ಕ್ಕೆ ತೆಲಂಗಾಣ ಹೊರತುಪಡಿಸಿ ಉಳಿದ ರಾಜ್ಯಗಳಲ್ಲಿ ಚುನಾವಣೆ ಮುಗಿಯುತ್ತೆ. ಹೀಗಾಗಿ ವರಿಷ್ಠರಾದ ಅಮಿತ್ ಶಾ ಅಥವಾ ಜೆ.ಪಿ.ನಡ್ಡಾಗೆ ಆಹ್ವಾನ ನೀಡುತ್ತೇವೆ ಎಂದು ಹೇಳಿದ್ದಾರೆ.

Karnataka BJP Convention Will Postponed Says BJP MLC N Ravi Kumar

ಈ ಹಿಂದೆ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ನಳಿನ್ ಕುಮಾರ್ ಕಟೀಲ್ ಅವರು ನೂತನ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರಿಗೆ ಪಕ್ಷದ ಧ್ವಜ ಹಸ್ತಾಂತರ ಮಾಡಲಿದ್ದಾರೆ. ಇನ್ನು ಈ ಪದಗ್ರಹ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಮಾಜಿ ಸಚಿವರುಗಳು ಹಾಗೂ ಶಾಸಕರು, ನಿರ್ಗಮಿತ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಇತರ ಮುಖಂಡರು ಹಾಗೂ ಭಾಗವಹಿಸಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+