ದೆಹಲಿಯಲ್ಲಿ ಇಂದು ಕರ್ನಾಟಕ ಬಿಜೆಪಿ ಕೋರ್ ಕಮಿಟಿ ಸಭೆ

ಬೆಂಗಳೂರು, ಡಿ.22 : ಗೋಹತ್ಯೆ ನಿಷೇಧ ಮಸೂದೆ ಹಿಂದಕ್ಕೆ ಪಡೆದಿರುವ ಮತ್ತು ಮಠಗಳ ಮೇಲೆ ನಿಯಂತ್ರಣ ಸಾಧಿಸಲು ಮಸೂದೆ ಮಂಡಿಸಿರುವ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ರೂಪಿಸಲು ಇಂದು ಬಿಜೆಪಿ ರಾಜ್ಯ ಘಟಕದ ಕೋರ್ ಕಮಿಟಿ ಸಭೆ ನಡೆಯಲಿದೆ. ಜನವರಿಯಲ್ಲಿ ಬೆಂಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯುವ ಸಾಧ್ಯತೆಯೂ ಇದೆ.

ಕರ್ನಾಟಕ ಬಿಜೆಪಿ ಕೋರ್ ಕಮಿಟಿ ಪ್ರಮುಖ ಸದಸ್ಯರಾದ ರಾಜ್ಯಾಧ್ಯಕ್ಷ ಪ್ರಹ್ಲಾದ ಜೋಶಿ, ಕೇಂದ್ರ ಸಚಿವ ಅನಂತಕುಮಾರ್, ಡಿ.ವಿ.ಸದಾನಂದ ಗೌಡ, ಸಂಸದ ಬಿ.ಎಸ್‌. ಯಡಿಯೂರಪ್ಪ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸಲು ದೆಹಲಿಯಲ್ಲಿದ್ದಾರೆ. ಆದ್ದರಿಂದ ದೆಹಲಿಯಲ್ಲಿಯೇ ಸಭೆ ನಡೆಸಲಾಗುತ್ತಿದೆ.

BJP

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಇಂದು ನಡೆಯುವ ಸಭೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ಗೋಹತ್ಯೆ ನಿಷೇಧಿಸಲು ಬಿಜೆಪಿ ಸರ್ಕಾರದ ಅವಧಿಯಲ್ಲಿ ರೂಪಿಸಿದ್ದ ಮಸೂದೆಗಳನ್ನು ಕಾಂಗ್ರೆಸ್ ಸರ್ಕಾರ ಹಿಂದಕ್ಕೆ ಪಡೆ­ದಿದೆ. ಮಠಗಳ ಮೇಲೆ ನಿಯಂತ್ರಣ ಸಾಧಿ­ಸುವ ಮಸೂದೆಯನ್ನು ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲಾಗಿದೆ.[ಚರ್ಚೆ ಇಲ್ಲದೆ ಗೋಹತ್ಯೆ ಪ್ರತಿಬಂಧಕ ವಿಧೇಯಕ ವಾಪಸ್]

ಇದರಿಂದಾಗಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ನಡೆಸಲು ಇಂದಿನ ಕೋರ್ ಕಮಿಟಿ ಸಭೆಯಲ್ಲಿ ರೂಪುರೇಷೆ ತಯಾರಿಸಲಾಗುತ್ತದೆ. ಹಾಗೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಅರ್ಕಾವತಿ ಡಿನೋಟಿಫಿಕೇಷನ್ ಹಗರಣದ ವರದಿಯನ್ನು ರಾಜ್ಯ ನಾಯಕರು ರಾಷ್ಟ್ರೀಯ ನಾಯಕರಿಗೆ ಸಲ್ಲಿಸಲಿದ್ದಾರೆ. [ಮಠಗಳ ಮೇಲೆ ಹಿಡಿತಕ್ಕೆ ಸಜ್ಜಾದ ಸರ್ಕಾರ]

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ : 2015ರ ಜನವರಿಯಲ್ಲಿ ಬೆಂಗಳೂರಿ­ನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯುವ ಸಾಧ್ಯತೆ ಇದೆ. ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರ ದೆಹಲಿಯ ಹೊರಗೆ ನಡೆಯುತ್ತಿರುವ ಮೊದಲ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಇದಾಗಲಿದೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ. ಇಲ್ಲಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಸುವ ಮೂಲಕ ರಾಜಕೀಯ ಸಂದೇಶ­ವೊಂದನ್ನು ರವಾನಿಸಲು ಅಧ್ಯಕ್ಷ ಅಮಿತ್ ಶಾ ನಿರ್ಧರಿಸಿದ್ದಾರೆ. ಆದ್ದರಿಂದ ಜನವರಿಯಲ್ಲಿ ಇಲ್ಲಿ ಸಭೆ ಕರೆಯಲು ನಿರ್ಧರಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+