ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಚನದ ಮೂಲಕ ಬಿಜೆಪಿ ಕಚ್ಚಾಟ ಬಿಚ್ಚಿಟ್ಟ ಎಚ್. ಡಿ. ಕುಮಾರಸ್ವಾಮಿ

|
Google Oneindia Kannada News

ಬೆಂಗಳೂರು, ಜೂನ್ 17; ನಾಯಕತ್ವ ಬದಲಾವಣೆ, ಶಾಸಕರ ಕಾರ್ಯ ವೈಖರಿ ಹೀಗೆ ಕರ್ನಾಟಕ ಬಿಜೆಪಿಯಲ್ಲಿ ಹಲವು ಚರ್ಚೆಗಳು ನಡೆಯುತ್ತಿವೆ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮೂರು ದಿನಗಳ ಭೇಟಿಗಾಗಿ ರಾಜ್ಯಕ್ಕೆ ಆಗಮಿಸಿದ್ದಾರೆ. ಸಚಿವರು, ಶಾಸಕರ ಜೊತೆ ಸಭೆಗಳನ್ನು ಮಾಡುತ್ತಿದ್ದಾರೆ.

ಕೋವಿಡ್ ಕಾಲದಲ್ಲಿ ರಾಜ್ಯ ಬಿಜೆಪಿಯ ನಾಯಕರ ಕುರ್ಚಿ ಕಿತ್ತಾಟ ವಿರೋಧ ಪಕ್ಷಗಳ ಟೀಕೆಗಳಿಗೆ ಆಹಾರವಾಗಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ.

ಕಟ್ಟೆ ಪಂಚಾಯ್ತಿ ನಡೆಸಲು ಓಡೋಡಿ ಬಂದ ಅರುಣ್ ಸಿಂಗ್! ಕಟ್ಟೆ ಪಂಚಾಯ್ತಿ ನಡೆಸಲು ಓಡೋಡಿ ಬಂದ ಅರುಣ್ ಸಿಂಗ್!

ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಗುರುವಾರ ಸರಣಿ ಟ್ವೀಟ್‌ಗಳ ಮೂಲಕ ಸರ್ಕಾರ, ಬಿಜೆಪಿ ಪಕ್ಷದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 'ಕರ್ನಾಟಕದ ಸರ್ಕಾರವನ್ನು ನಡೆಸುತ್ತಿರುವ ಬಿಜೆಪಿಗೆ ಸರಿಯಾಗಿ ಹೊಂದುವ ಬಸವಣ್ಣನವರ ವಚನವಿದು' ಎಂದು ಟ್ವೀಟ್ ಮಾಡಿದ್ದಾರೆ.

ಅರುಣ್‌ ಸಿಂಗ್‌ಗೆ ದೂರು; ಬಿಎಸ್‌ವೈ ವಿರುದ್ಧದ 5 ಆರೋಪಗಳು! ಅರುಣ್‌ ಸಿಂಗ್‌ಗೆ ದೂರು; ಬಿಎಸ್‌ವೈ ವಿರುದ್ಧದ 5 ಆರೋಪಗಳು!

'ಮನೆಯೊಳಗೆ ಮನೆಯೊಡೆಯನಿದ್ದಾನೊ ಇಲ್ಲವೊ.
ಹೊಸ್ತಿಲಲ್ಲಿ ಹುಲ್ಲು ಹುಟ್ಟಿ
ಮನೆಯೊಳಗೆ ರಜ ತುಂಬಿ
ಮನೆಯೊಳಗೆ ಮನೆಯೊಡೆಯನಿದ್ದಾನೊ ಇಲ್ಲವೊ
- ಕೂಡಲ ಸಂಗಮದೇವ

ಎಂಬ ವಚನವನ್ನು ಟ್ವೀಟ್ ಮಾಡಿದ್ದು, 'ಬಿಜೆಪಿಯಲ್ಲಿ ನಾಯಕತ್ವ ಇದೆಯೋ? ಇಲ್ಲವೋ? ಎಂಬುದರ ಬಗ್ಗೆ ಅನುಮಾನಗಳು ಮೂಡುತ್ತಿವೆ' ಎಂದು ಪ್ರಶ್ನೆ ಮಾಡಿದ್ದಾರೆ.

ಪಕ್ಷದಲ್ಲಿ ಭಿನ್ನಾಭಿಪ್ರಾಯವಿಲ್ಲ; ಅರುಣ್ ಸಿಂಗ್ ಪಕ್ಷದಲ್ಲಿ ಭಿನ್ನಾಭಿಪ್ರಾಯವಿಲ್ಲ; ಅರುಣ್ ಸಿಂಗ್

ಸರ್ಕಾರ ಇದ್ದೇನು ಉಪಯೋಗ?

ಸರ್ಕಾರ ಇದ್ದೇನು ಉಪಯೋಗ?

'ಸರ್ಕಾರದಲ್ಲಿ ನಾಯತ್ವ ಬಿಕ್ಕಟ್ಟು ಎದುರಾಗಿದೆಯಂತೆ, ನಾಯಕತ್ವ ಬದಲಿಸಲು ಸೂಕ್ತ ನಾಯಕನ ಹುಡುಕಾಟ ನಡೆದಿದೆಯಂತೆ, ಆದರೆ ಯಾವ ನಾಯಕರೂ ಸಿಗುತ್ತಿಲ್ಲವಂತೆ, ಬಿಜೆಪಿಯಲ್ಲಿ‌ ಸಿಎಂ ಆಗಬಲ್ಲ‌ ನಾಯಕನೇ ಇಲ್ಲವಂತೆ ಇವೆಲ್ಲವೂ ಬಿಜೆಪಿಯೊಳಗಿನ ಚರ್ಚೆಗಳ ಮಾಧ್ಯಮಗಳ ವರದಿ. ನಾಯಕತ್ವವೇ ಇಲ್ಲದ ಈ ಸರ್ಕಾರ ಇದ್ದೇನು ಉಪಯೋಗ, ವಿಸರ್ಜಿಸಿ ಮೊದಲು' ಎಂದು ಎಚ್. ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಯಜಮಾನನಿಲ್ಲದ ಮನೆ

ಯಜಮಾನನಿಲ್ಲದ ಮನೆ

'ನಾವಿಕನಿಲ್ಲದ ನಾವೆ, ಯಜಮಾನನಿಲ್ಲದ ಮನೆ, ನಾಯಕನಿಲ್ಲದ ಸರ್ಕಾರ ಇದು ಅಪಾಯಕಾರಿ. ಅದೂ ಸಾಂಕ್ರಾಮಿಕ ಕಾಲದಲ್ಲಿ ಮತ್ತಷ್ಟು ಅಪಾಯಕಾರಿ. ಈಗಿನ ಸರ್ಕಾರದ ನಾಯಕತ್ವ ಸರಿ ಇಲ್ಲ ಎಂದು ಬಿಜೆಪಿ ಶಾಸಕರೇ ಬಂಡೆದಿದ್ದಾರಂತೆ. ಇರುವವರನ್ನು ಬದಲಿಸಲು ನಾಯಕರ್ಯಾರೂ ಇಲ್ಲವಂತೆ. ಹಾಗಾಗಿ ಈ ಸರ್ಕಾರ ಜನರ ಪಾಲಿಗೆ ಅಪಾಯಕಾರಿಯಾಗಿದೆ ಎಂದರ್ಥ'

'ದೇಶದ ಅಭಿವೃದ್ಧಿಗಾಗಿ ಸಮರ್ಥ ನಾಯಕತ್ವ ಪ್ರತಿಪಾದಿಸುವ ಬಿಜೆಪಿ, ನಾಯಕತ್ವವೇ ಇಲ್ಲದ ಈ ಸರ್ಕಾರವನ್ನು ಅದು ಹೇಗೆ ಸಹಿಸಿಕೊಂಡಿದೆ. ನಾಯಕತ್ವ ಸರಿ ಇಲ್ಲ ಎಂದು ಶಾಸಕರೇ ಹೇಳುತ್ತಿರುವಾಗ ನಾಯಕತ್ವ ಬದಲಿಸಲು ಏಕೆ ಇಷ್ಟು ತಿಣುಕಾಡುತ್ತಿದೆ. ಹಾಗೊಂದು ನಾಯಕತ್ವವೇ ಇಲ್ಲದ ಮೇಲೆ ಬಿಜೆಪಿ ಸರ್ಕಾರ ವಿಸರ್ಜಿಸಿ, ಅಧಿಕಾರದಿಂದ ದೂರ ಉಳಿಯಬಾರದೇಕೆ?' ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಸಮಾಜ ಸುಧಾಕರಕರು ಇರುವ ಪಕ್ಷ

ಸಮಾಜ ಸುಧಾಕರಕರು ಇರುವ ಪಕ್ಷ

'ಹಿಂದೆ ರಾಜ್ಯದಲ್ಲಿ ಅಸ್ತಿತ್ವದಲ್ಲಿದ್ದ 'ರಾಕ್ಷಸ ಸರ್ಕಾರ'ವನ್ನು ಜನರ ಹಿತಕ್ಕಾಗಿ, ಅಭಿವೃದ್ಧಿಗಾಗಿ ಕೆಡವಿದ "ಸಮಾಜ ಸುಧಾರಕರು" ಇರುವ ಪಕ್ಷ ಬಿಜೆಪಿ. ಈಗ ನಾಯಕತ್ವವಿಲ್ಲದ 'ಅಪಾಯಕಾರಿ ಸರ್ಕಾರ'ದ ಬಗ್ಗೆ ಆ ಸಮಾಜ ಸುಧಾರಕರು ಸುಮ್ಮನಿರುವುದಾದರೂ ಹೇಗೆ. ಈ ಸಮಾಜ ಸುಧಾರಕರ ದಿವ್ಯ ಮೌನ ನನಗೆ ಆಶ್ಚರ್ಯ ತರಿಸುತ್ತಿದೆ. ಆತಂಕ ಉಂಟು ಮಾಡಿದೆ'

'ಕೋವಿಡ್‌, ಲಾಕ್‌ಡೌನ್‌ಗಳಿಂದ ತತ್ತರಿಸಿರುವ ಕ್ಷೋಬೆಯ ಕಾಲವಿದು. ಆಳುವವರು ಅಂದುಕೊಂಡಷ್ಟು ನೆಮ್ಮದಿಯಿಂದ ಜನ ಬದುಕುತ್ತಿಲ್ಲ. ಅವರ ಬದುಕು ಕಷ್ಟದಲ್ಲಿದೆ. ಈ ಸಂದರ್ಭದಲ್ಲಿ ಆಡಳಿತಾರೂಢ ಬಿಜೆಪಿಯಲ್ಲಿ ನಡೆಯುತ್ತಿರುವ ಈ ಅಧಿಕಾರ ದಾಹದ ವರ್ತನೆ ಜನರನ್ನು ಗೇಲಿ ಮಾಡುತ್ತಿದೆ. ಇದರ ಕಿಂಚಿತ್ತು ಪಾಪಪ್ರಜ್ಞೆಯಾದರೂ ಬಿಜೆಪಿಗೆ ಇರಬೇಕಿತ್ತು' ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.

ಬಿಜೆಪಿ ಆಡಳಿತದಿಂದ ಜನರಿಗೆ ವೈರಾಗ್ಯ ಬಂದಿದೆ

ಬಿಜೆಪಿ ಆಡಳಿತದಿಂದ ಜನರಿಗೆ ವೈರಾಗ್ಯ ಬಂದಿದೆ

'ಇನ್ನೊಂದೆಡೆ, ಬಿಜೆಪಿಯ ದುರಾಡಳಿತ ಕಂಡು ಜನರಿಗೆ ವೈರಾಗ್ಯ ಬಂದಿದೆ ಎಂದು ಕಾಂಗ್ರೆಸ್ ನಾಯಕರೊಬ್ಬರು ಅಭಿಪ್ರಾಯಪಟ್ಟಿದ್ದಾರೆ‌. ಈ ದುರಾಡಳಿತ ಬರಲು, ಅದರಿಂದ ಜನರಿಗೆ ವೈರಾಗ್ಯ ಮೂಡಲು ಕಾರಣರಾರು? ಇದೇ ಕಾಂಗ್ರೆಸ್ ಅಲ್ಲವೇ? ಮೈತ್ರಿಕೂಟದಲ್ಲಿದ್ದೂ ಮಿತ್ರ ಪಕ್ಷದ ಮೇಲಿನ ದ್ವೇಷ, ಅಸೂಯೆಯಿಂದ ಶಾಸಕರನ್ನು ಓಡಿಹೋಗುವಂತೆ ಮಾಡಿದ್ದರ ಫಲವಿದು'

English summary
Former chief minister H. D. Kumaraswamy tweet about Karnataka BJP crisis and Arun Singh visit to Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X