ಇಂದು ಬಿಜೆಪಿ-ದಳ ಮೈತ್ರಿ ದಳದ ಮೊದಲ ರಾಜ್ಯಮಟ್ಟದ ಸಭೆ: ಯಾರೆಲ್ಲಾ ಭಾಗಿ? ಯಾವ ವಿಷಯ ಚರ್ಚೆ?
ಬೆಂಗಳೂರು ಮಾರ್ಚ್ 29: ಲೋಕಸಭಾ ಚುನಾವಣೆಗೆ ಮೈತ್ರಿ ಮಾಡಿಕೊಂಡು ಬಿಜೆಪಿ ಹಾಗೂ ಜೆಡಿಎಸ್ ಪಕ್ಷ ಸ್ಪರ್ಧಿಸಲು ಮುಂದಾಗಿದೆ. ಈ ನಡುವೆ ಮೊದಲ ರಾಜ್ಯಮಟ್ಟದ ಸಭೆ ನಡೆಸಲು ಬಿಜೆಪಿ-ದಳ ಮೈತ್ರಿ ಪಕ್ಷಗಳು ನಿರ್ಧರಿಸಿವೆ. ಹೀಗಾಗಿ ಇಂದು ಉಭಯ ಪಕ್ಷಗಳ ನಾಯಕರ ಸಭೆ ನಡೆಯಲಿದೆ.
ಇಂದು ಬೆಳಗ್ಗೆ 11 ಗಂಟೆಗೆ ಖಾಸಗಿ ಹೊಟೇಲ್‌ನಲ್ಲಿ ಸಭೆ ನಿಗದಿ ಮಾಡಲಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ರಾಧಾಮೋಹನ್ ಅಗರ್‌ವಾಲ್ ಭಾಗವಹಿಸಲಿದ್ದಾರೆ.

ಯಾವೆಲ್ಲಾ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ?
*ಸ್ಥಳೀಯ ನಾಯಕರ ವಿರೋಧ ಶಮನ ಮಾಡುವುದು ಹೇಗೆ?
*ಎರಡೂ ಪಕ್ಷಗಳ ಕಾರ್ಯಕರ್ತರನ್ನು ಹೇಗೆ ಒಗ್ಗೂಡಿಸಬೇಕು?
* ಪ್ರಚಾರಕ್ಕೆ ಸಕಾರಾತ್ಮಕವಾಗಿ ಸ್ಪಂದಿಸದವರ ಓಲೈಕೆ ಹೇಗೆ?
*ಈ ವಿಚಾರಗಳ ಬಗ್ಗೆ ಉಭಯ ನಾಯಕರ ನಡುವೆ ಚರ್ಚೆ
ಸಭೆಯಲ್ಲಿ ಯಾರೆಲ್ಲಾ ಭಾಗಿ?
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಸೇರಿದಂತೆ ಉಭಯ ಪಕ್ಷಗಳ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ. ಸಭೆಯಲ್ಲಿ ಕಾಂಗ್ರೆಸ್‌ನ ಕಾರ್ಯತಂತ್ರಕ್ಕೆ ಪ್ರತಿಯಾಗಿ ಮೈತ್ರಿ ಪಕ್ಷವು ರಣತಂತ್ರ ರೂಪಿಸುವ ಕುರಿತು ಚರ್ಚೆಗಳು ನಡೆಯಲಿವೆ. ಈಗಾಗಲೇ ಜಿಲ್ಲಾ ಮಟ್ಟದಲ್ಲಿ ಜಂಟಿ ಕೋರ್ ಕಮಿಟಿ ಸಭೆಗಳನ್ನು ನಡೆಸಲಾಗುತ್ತಿದೆ. ಆದರೆ ರಾಜ್ಯ ಮಟ್ಟದ ಜಂಟಿ ಕೋರ್ ಕಮಿಟಿ ಸಭೆಯು ಇದೇ ಮೊದಲ ಬಾರಿಗೆ ನಡೆಸಲಾಗುತ್ತಿದೆ.

ಸಭೆಯಲ್ಲಿ ಎರಡು ಪಕ್ಷಗಳ ಕಾರ್ಯಕರ್ತರನ್ನು ಹೇಗೆ ಜೋಡಿಸಬೇಕು? ಸ್ಥಳೀಯ ನಾಯಕರ ವಿರೋಧ ಶಮನ ಮಾಡುವುದು ಸೇರಿದಂತೆ ಹಲವು ವಿಚಾರಗಳ ಕುರಿತು ಸಮಾಲೋಚನೆ ನಡೆಸಲಾಗುತ್ತದೆ. ಅಲ್ಲದೇ ಕೆಲವು ಕ್ಷೇತ್ರಗಳಲ್ಲಿ ಪ್ರಮುಖ ಮುಖಂಡರು ಮೈತ್ರಿ ಪ್ರಚಾರಕ್ಕೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿಲ್ಲ. ವೈಯಕ್ತಿಕ ಹಿತಾಸಕ್ತಿಯನ್ನು ಬದಿಗೊತ್ತಿ ಮೈತ್ರಿ ಅಭ್ಯರ್ಥಿ ಗೆಲುವಿಗೆ ಸಹಕಾರ ನೀಡುವ ಸಲಹೆ-ಸೂಚನೆ ನೀಡುವ ಕುರಿತು ಸಹ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ ಎನ್ನಲಾಗಿದೆ. ಹಾಸನ ಕ್ಷೇತ್ರದಲ್ಲಿ ಬಿಜೆಪಿಯ ಕೆಲವರು ಜೆಡಿಎಸ್‌ಗೆ ವಿರೋಧ ಮಾಡುತ್ತಿದ್ದು, ಇದನ್ನು ಶಮನ ಮಾಡಲು ಕಾರ್ಯತಂತ್ರ ರೂಪಿಸಲಾಗುತ್ತದೆ.
ಯಾವ ಕ್ಷೇತ್ರಗಳ ಬಗ್ಗೆ ಚರ್ಚೆ?
ತುಮಕೂರು ಕ್ಷೇತ್ರದಲ್ಲಿ ಕಾಮಗ್ರೆಸ್ ವಿರುದ್ಧ ರಣತಂತ್ರ ಹೆಣೆಯುವ ಕುರಿತು ಸಮಾಲೋಚನೆ ನಡೆಸಲಾಗುತ್ತದೆ. ಮಂಡ್ಯ ಕ್ಷೇತ್ರದಲ್ಲಿ ಹಾಲಿ ಸಂಸದೆ ಸುಮಲತಾ ಅವರಿಗೆ ಈ ಬಾರಿ ಬಿಜೆಪಿಯಿಂದ ಟಿಕೆಟ್ ತಪ್ಪಿದೆ. ಇದರಿಂದ ಸುಮಲತಾ ಅವರು ಮುನಿಸಿಕೊಂಡಿದ್ದು, ಅವರ ಮನವೊಲಿಕೆ ಮಾಡುವ ಬಗ್ಗೆ ಉಭಯ ಪಕ್ಷಗಳ ಮುಖಂಡರು ಚರ್ಚೆ ನಡೆಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ಪ್ರಚಾರಕ್ಕಾಗಿ ರಾಜ್ಯದ ಹಲವೆಡೆ ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ ಜೆಡಿಎಸ್ ಕಾರ್ಯಕರ್ತರು, ನಾಯಕರು ಭಾಗವಹಿಸುವ ಕುರಿತು ಮಾತುಕತೆ ನಡೆಯಲಿದೆ. ನರೇಂದ್ರ ಮೋದಿಯವರ ಸಮಾವೇಶದಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಭಾಗಿಯಾಗುವ ಕುರಿತು ಚರ್ಚೆ ನಡೆಸುವ ಸಾಧ್ಯತೆ ಇದೆ. ಅಲ್ಲದೇ, ಮಂಡ್ಯದಲ್ಲಿ ಮೋದಿ ಸಮಾವೇಶವನ್ನು ಜಂಟಿಯಾಗಿ ಯಶಸ್ವಿ ಮಾಡುವ ಕುರಿತು ಸಹ ಸಮಾಲೋಚನೆ ನಡೆಸಲಾಗುತ್ತದೆ ಎಂದು ಹೇಳಲಾಗಿದೆ.
ರಾಜ್ಯದ ಹಲವು ಕ್ಷೇತ್ರದಲ್ಲಿ ಜೆಡಿಎಸ್ ಮತಗಳು ಬಿಜೆಪಿಗಿಂತಲೂ ಹೆಚ್ಚಿವೆ. ಅಂತಹ ಕ್ಷೇತ್ರದಲ್ಲಿ ಸ್ಥಳೀಯ ನಾಯಕರು ಸಮಾವೇಶದಲ್ಲಿ ಭಾಗಿಯಾಗಲು ಅನುವು ಮಾಡಿಕೊಡುವ ಕುರಿತು ಚರ್ಚೆ ನಡೆಯಲಿವೆ. ಇದರಿಂದ ಸ್ಥಳೀಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಿದಂತಾಗುತ್ತದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಮಣಿಸಲು ಯಾವೆಲ್ಲಾ ಕಾರ್ಯತಂತ್ರಗಳನ್ನು ರೂಪಿಸಬೇಕೋ ಆ ಅಂಶಗಳ ಕುರಿತ ಚರ್ಚೆ ನಡೆಯಲಿದೆ ಎಂದು ತಿಳಿದು ಬಂದಿದೆ.
-
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್‌ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ










Click it and Unblock the Notifications