ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಬಿಜೆಪಿಯಿಂದ ಬರ ಅಧ್ಯಯನ : ತಂಡಗಳ ವಿವರ

|
Google Oneindia Kannada News

ಬೆಂಗಳೂರು, ಡಿಸೆಂಬರ್ 02 : ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶಕ್ಕೆ ಪ್ರತಿ ಪಕ್ಷ ಬಿಜೆಪಿ ತಯಾರಿ ನಡೆಸುತ್ತಿದೆ. 6 ತಂಡಗಳಲ್ಲಿ ಪಕ್ಷದ ನಾಯಕರು ರಾಜ್ಯ ಪ್ರವಾಸ ನಡೆಸಲಿದ್ದು, ಬರಪೀಡಿತ ಪ್ರದೇಶಗಳ ಪರಿಸ್ಥಿತಿ ಅಧ್ಯಯನ ನಡೆಸಲಿದ್ದಾರೆ.

ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬರ ಪೀಡಿತ ಪ್ರದೇಶಗಳು ಮತ್ತು ಕೊಡಗು ಜಿಲ್ಲೆಗೆ ಬಿಜೆಪಿ ನಿಯೋಗ ಭೇಟಿ ನೀಡಲು ನಿರ್ಧರಿಸಲಾಗಿದೆ. ತಂಡಗಳ ವರದಿಯನ್ನು ಆಧರಿಸಿ, ಅಧಿವೇಶನದಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷ ನಿರ್ಧರಿಸಿದೆ.

ಧಾರವಾಡದಲ್ಲಿ ಬರ ಪರಿಸ್ಥಿತಿ ಅಧ್ಯಯನ ನಡೆಸಿದ ಕೇಂದ್ರ ತಂಡಧಾರವಾಡದಲ್ಲಿ ಬರ ಪರಿಸ್ಥಿತಿ ಅಧ್ಯಯನ ನಡೆಸಿದ ಕೇಂದ್ರ ತಂಡ

ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ, ಆರ್.ಅಶೋಕ, ಕೋಟಾ ಶ್ರೀನಿವಾಸ ಪೂಜಾರಿ, ಕೇಂದ್ರ ಸಚಿವ ರಮೇಶ್ ಜಿಗಜಿಣಗಿ, ಡಿ.ವಿ.ಸದಾನಂದ ಗೌಡ ನೇತೃತ್ವದ ಸಮಿತಿಗಳು ವಿವಿಧ ಜಿಲ್ಲೆಗಳಿಗೆ ಡಿಸೆಂಬರ್ 3ರಿಂದ 5ರ ತನಕ ಭೇಟಿ ನೀಡಲಿವೆ.

ಕರ್ನಾಟಕದ ಬರಪೀಡಿತ ತಾಲೂಕುಗಳ ಪಟ್ಟಿ ಬಿಡುಗಡೆಕರ್ನಾಟಕದ ಬರಪೀಡಿತ ತಾಲೂಕುಗಳ ಪಟ್ಟಿ ಬಿಡುಗಡೆ

ಡಿ.ವಿ.ಸದಾನಂದ ಗೌಡ, ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕಟೀಲ್, ಪ್ರಹ್ಲಾದ್ ಜೋಶಿ ನೇತೃತ್ವದ ತಂಡ ಕೊಡಗು ಜಿಲ್ಲೆಗೆ ಭೇಟಿ ನೀಡಲಿದೆ. ಕೊಡಗಿನಲ್ಲಿ ಪರಿಹಾರ ಕಾರ್ಯ ಕೈಗೊಳ್ಳುವಲ್ಲಿ ಸರ್ಕಾರ ವಹಿಸಿದ ನಿರ್ಲಕ್ಷ್ಯದ ಬಗ್ಗೆ ತಂಡ ವರದಿ ತಯಾರು ಮಾಡಲಿದೆ....

ಬರ ಪೀಡಿತ ತಾಲೂಕುಗಳಿಗೆ 2,434 ಕೋಟಿ ಬೇಡಿಕೆ ಇಟ್ಟ ರಾಜ್ಯಬರ ಪೀಡಿತ ತಾಲೂಕುಗಳಿಗೆ 2,434 ಕೋಟಿ ಬೇಡಿಕೆ ಇಟ್ಟ ರಾಜ್ಯ

ಕೆ.ಎಸ್.ಈಶ್ವರಪ್ಪ ತಂಡ

ಕೆ.ಎಸ್.ಈಶ್ವರಪ್ಪ ತಂಡ

ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ನೇತೃತ್ವದ ತಂಡ ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ ಮತ್ತು ಯಾದಗಿರಿ ಜಿಲ್ಲೆಗೆ ಭೇಟಿ ನೀಡಲಿದೆ.

ರಮೇಶ್ ಜಿಗಜಿಣಗಿ

ರಮೇಶ್ ಜಿಗಜಿಣಗಿ

ಕೇಂದ್ರ ಸಚಿವ ರಮೇಶ್ ಜಿಗಜಿಣಗಿ ನೇತೃತ್ವದ ತಂಡ ಚಿಕ್ಕಬಳ್ಳಾಪುರ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಬರಪರಿಸ್ಥಿತಿ ಪರಿಶೀಲನೆ ನಡೆಸಲಿದೆ.

ಜಗದೀಶ್ ಶೆಟ್ಟರ್

ಜಗದೀಶ್ ಶೆಟ್ಟರ್

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನೇತೃತ್ವದ ನಿಯೋಗ ಗದಗ, ಕೊಪ್ಪಳ, ಬಳ್ಳಾರಿ, ಧಾರವಾಡ, ಬೆಳಗಾವಿ ಜಿಲ್ಲೆಗಳ ಪ್ರವಾಸವನ್ನು ಕೈಗೊಳ್ಳಲಿದೆ.

ಆರ್.ಅಶೋಕ

ಆರ್.ಅಶೋಕ

ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ ನೇತೃತ್ವ ತಂಡ ಚಾಮರಾಜನಗರ, ಮಂಡ್ಯ, ಬೆಂಗಳೂರು ನಗರ, ಕೋಲಾರ, ರಾಮನಗರ ಜಿಲ್ಲೆಗಳಿಗೆ ಭೇಟಿ ನೀಡಲಿದೆ.

ಕೋಟಾ ಶ್ರೀನಿವಾಸ ಪೂಜಾರಿ

ಕೋಟಾ ಶ್ರೀನಿವಾಸ ಪೂಜಾರಿ

ವಿಧಾನ ಪರಿಷತ್ ಪ್ರತಿಪಕ್ಷ ನಾಯಕರ ಕೋಟಾ ಶ್ರೀನಿವಾಸ ಪೂಜಾರಿ ನೇತೃತ್ವದ ತಂಡ ಹಾಸನ, ಚಿಕ್ಕಮಗಳೂರು, ದಾವಣಗೆರೆ, ಹಾವೇರಿ ಜಿಲ್ಲೆಗಳಿಗೆ ಭೇಟಿ ನೀಡಲಿದೆ.

English summary
Karnataka's opposition party BJP has decided to tour the state in 6 teams to study drought hit districts and team will also visit flood-hit Kodagu. Team will tour the state from December 3 to 5, 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X