ಬಿಜೆಪಿ ಕಾರ್ಯಕಾರಣಿ ಸಭೆ : ಬಿಎಸ್‌ವೈ ಗೈರು, 3 ನಿರ್ಣಯಗಳು

Posted By:
Subscribe to Oneindia Kannada

ಬೆಂಗಳೂರು, ಏಪ್ರಿಲ್ 01 : ಬೆಂಗಳೂರಿನಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡಲು 3 ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಭೆಗೆ ಗೈರು ಹಾಜರಾಗಿದ್ದು, ಅಚ್ಚರಿಗೆ ಕಾರಣವಾಗಿದೆ.

ಶುಕ್ರವಾರ ಸಂಜೆ ಪತ್ರಿಕಾಗೋಷ್ಠಿ ನಡೆಸಿದ ಮಾಜಿ ಸಚಿವ ಸಿ.ಟಿ.ರವಿ ಅವರು ಕಾರ್ಯಕಾರಣಿ ನಿರ್ಣಯಗಳನ್ನು ತಿಳಿಸಿದರು. ಪ್ರಮುಖವಾಗಿ 'ಭ್ರಷ್ಟಾಚಾರ ನಿಗ್ರಹ ದಳ ರಚನೆ ಆದೇಶವನ್ನು ವಾಪಸ್ ಪಡೆಯುವ ತನಕ ಹೋರಾಟ ಮುಂದುವರೆಸಲು ಪಕ್ಷ ನಿರ್ಧರಿಸಿದೆ' ಎಂದು ಸಿ.ಟಿ.ರವಿ ಹೇಳಿದರು. [ಎಸಿಬಿ ರಚನೆ : ಸಿದ್ದರಾಮಯ್ಯ ಸ್ಪಷ್ಟನೆಗಳು]

bjp

ಮೈಸೂರಿನಲ್ಲಿ ನಡೆದ ಬಿಜೆಪಿ ಮತ್ತು ವಿಶ್ವಹಿಂದೂಪರಿಷತ್ ಕಾರ್ಯಕರ್ತ ರಾಜು ಕೊಲೆ ಪ್ರಕರಣದ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆದಿದೆ. ಏ.4ರ ಸೋಮವಾರ ಮೈಸೂರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಿರುವ ಬಿಜೆಪಿ ನಾಯಕರು ಕೊಲೆ ಆರೋಪಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಲಿದ್ದಾರೆ. ['ರಾಜು ಕೊಲೆ ಪ್ರಕರಣ, ನ್ಯಾಯಾಂಗ ತನಿಖೆ ಅಗತ್ಯವಿಲ್ಲ']

ಯಡಿಯೂರಪ್ಪ ಸ್ಪಷ್ಟನೆ : ಇಂದು ನಡೆದ ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆಗೆ ಮಾಜಿ ಮುಖ್ಯಮಂತ್ರಿ ಮತ್ತು ಶಿವಮೊಗ್ಗ ಸಂಸದ ಬಿ.ಎಸ್.ಯಡಿಯೂರಪ್ಪ ಅವರು ಗೈರು ಹಾಜರಾಗಿದ್ದರು ಮತ್ತು ದೆಹಲಿಗೆ ತೆರಳಿದ್ದರು. ಶುಕ್ರವಾರ ಸಂಜೆ ಬೆಂಗಳೂರಿಗೆ ಆಗಮಿಸಿದ ಅವರು, ಮಾಧ್ಯಮಗಳ ಜೊತೆ ಮಾತನಾಡಿದ್ದು, 'ಪೂರ್ವ ನಿಗದಿತ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ತೆರಳಿದ್ದೆ. ಕಾರ್ಯಕಾರಣಿಯಲ್ಲಿ ತೆಗೆದುಕೊಂಡ ನಿರ್ಧಾರಕ್ಕೆ ಬದ್ಧವಾಗಿದ್ದೇನೆ' ಎಂದು ಹೇಳಿದರು.

ಬರದ ಬಗ್ಗೆ ಅಧ್ಯಯನ : ರಾಜ್ಯದಲ್ಲಿನ ಬರ ಪರಿಸ್ಥಿತಿ ಬಗ್ಗೆ ಅಧ್ಯಯನ ನಡೆಸಲು ಕಾರ್ಯಕಾರಣಿ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಏ.10, 11 ಮತ್ತು 12 ರಂದು ಬಿಜೆಪಿ ನಾಯಕರು ರಾಜ್ಯದ ತುಂಬಾ ಸಂಚಾರ ನಡೆಸಿ ಬರ ಪರಿಸ್ಥಿತಿ ಬಗ್ಗೆ ಅಧ್ಯಯನವನ್ನು ಕೈಗೊಳ್ಳಲಿದ್ದಾರೆ.

-
-
-
-
-

ಮೂರು ನಿರ್ಣಯಗಳು

* ಸರ್ಕಾರ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರಚನೆ ಆದೇಶ ವಾಪಸ್ ಪಡೆಯುವ ತನಕ ಹೋರಾಟ ನಡೆಸುವುದು
* ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುವುದು
* ವಕ್ಫ್ ಮಂಡಳಿ ಆಸ್ತಿ ಕಬಳಿಕೆ ಕುರಿತು ಮುಖ್ಯಮಂತ್ರಿಗಳು ಸ್ಪಷ್ಟನೆ ನೀಡುವಂತೆ ಒತ್ತಾಯಿಸುವುದು

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Karnataka BJP in the state executive meeting on Friday, April 1st, 2016 adopted 3 resolution to protest against Chief Minister Siddaramaiah led Congress government.
Please Wait while comments are loading...