ಚುನಾವಣೆಯಲ್ಲಿ ಹೀನಾಯ ಸೋಲಿಗೆ ಕೊನೆಗೂ ನಿಖರ ಕಾರಣವನ್ನ ಹುಡುಕಿಕೊಂಡ ಬಿಜೆಪಿ! ಇಲ್ಲಿದೆ ಇನ್ ಸೈಡ್ ಸ್ಟೋರಿ!?
ಬೆಂಗಳೂರು, ಮೇ 16: ರಾಜ್ಯ ವಿಧಾನಸಭಾ ಚುನಾವಣೆಯ ಪ್ರಕಟಗೊಂಡಿದ್ದು, ರಾಜ್ಯ ಬಿಜೆಪಿಗೆ ದೊಡ್ಡ ಅಘಾತ ಉಂಟು ಮಾಡಿದೆ. ಮೂರು ವರ್ಷಗಳ ಕಾಲ ಅಧಿಕಾರ ನಡೆಸಿದ್ದ ಬಿಜೆಪಿ, ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂಬ ವಿಶ್ವಾಸ ಇಟ್ಟುಕೊಂಡಿದ್ದ ಬಿಜೆಪಿಗೆ ಅತಿಯಾದ ಆತ್ಮವಿಶ್ವಾಸವೇ ಸೋಲಿಗೆ ಕಾರಣವಾಗಿದೆ.
ಚುನಾವಣಾ ಸಮೀಕ್ಷೆಗಳ ವರದಿಗಳನ್ನು ಮೀರಿ ಕರ್ನಾಟಕದಲ್ಲಿ ಕಾಂಗ್ರೆಸ್ ಐತಿಹಾಸಿಕ ಗೆಲುವು ಸಾಧಿಸಿದೆ. ಬರೋಬ್ಬರಿ 135 ಸ್ಥಾನಗಳ್ಲಲಿ ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ಪಡೆದುಕೊಂಡಿದೆ. ಇನ್ನು ಬಿಜೆಪಿ 65 ಸ್ಥಾನಗಳನ್ನ ಪಡೆದಿದೆ. ಇತ್ತ ಗೆಲುವಿನ ನಿರೀಕ್ಷೆಯಲ್ಲಿದ್ದ ಬಿಜೆಪಿ ನಾಯಕರು ಹೀನಾಯ ಸೋಲಿಗೆ ಕಾರಣಗಳನ್ನು ಹುಡುಕಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನವನ್ನ ಗೆಲ್ಲುವ ತಂತ್ರ ಹಾಗೂ ಸೋಲಿಗೆ ಕಾರಣವನ್ನ ಹುಡುಕಿದೆ ಎನ್ನಲಾಗಿದೆ.

1. ತಮ್ಮ ಸ್ವಂತ ಜಿಲ್ಲೆ ಅಲ್ಲ ಎಂಬ ಕಾರಣಕ್ಕೆ ಉಸ್ತುವಾರಿ ಸಚಿವರು ಆಸಕ್ತಿ ತೋರಿಸಿಲ್ಲ.
ಸೋಲಿಗೆ ಕೆಲವು ನಿಖರ ಕಾರಣಗಳನ್ನು ಹುಡುಕಿರುವ ಬಿಜೆಪಿ, ಜಿಲ್ಲಾ ಉಸ್ತುವಾರಿ ಸಚಿವರುಗಳ ನೇಮಕಾತಿಯಲ್ಲಿನ ಬದಲಾವಣೆ ಸೋಲಿಗೆ ಪ್ರಧಾನ ಕಾರಣ ಎಂಬ ಮಾಹಿತಿ ಪಡೆದಿದೆ. ಅಯಾಯ ಜಿಲ್ಲೆಗಳ ಸಚಿವರನ್ನು ಬಿಟ್ಟು ಬೇರೆ ಜಿಲ್ಲೆಗಳ ಸಚಿವರನ್ನು ಉಸ್ತುವಾರಿ ಮಾಡಿ ಪ್ರಯೋಗ ಮಾಡಿದ್ದೇ ಸೋಲಿಗೆ ಪ್ರಮುಖ ಕಾರಣವಾಗಿದೆ. ತಮ್ಮ ಸ್ವಂತ ಜಿಲ್ಲೆ ಅಲ್ಲ ಎಂಬ ಕಾರಣಕ್ಕೆ ಉಸ್ತುವಾರಿ ಸಚಿವರು ಆಸಕ್ತಿ ತೋರಿಸಿಲ್ಲ. ಹೀಗಾಗಿ ಬಿಜೆಪಿ ಸೋಲಿಗೆ ಪ್ರಮುಖ ಕಾರಣ ಎಂದು ಹೇಳಲಾಗಿದೆ.
2. ಸೂಕ್ತವಲ್ಲದ ನೇಮಕಾತಿಯಿಂದಲೂ ಪಕ್ಷಕ್ಕೆ ನಷ್ಟ
ನಿಗಮ ಮತ್ತು ಮಂಡಳಿಗಳ ಸೂಕ್ತವಲ್ಲದ ನೇಮಕಾತಿಯಿಂದಲೂ ಪಕ್ಷಕ್ಕೆ ನಷ್ಟವಾಗಿದೆ. ಬೆಂಗಳೂರು ವ್ಯಾಪ್ತಿಗೆ ಸಂಬಂಧಿಸಿದ ನಿಗಮ-ಮಂಡಳಿಗೆ ಹೊರಗಿನವರ ನೇಮಕಾತಿಯಿಂದ ಕೂಡಾ ಬಿಜೆಪಿ ಸಮಸ್ಯೆಯಾಗಿದ್ದು, ಸೋಲಿಗೆ ಇದು ಸಹ ಕಾರಣವೆಂದು ಬಿಜೆಪಿ ಪಾಳಯದಲ್ಲಿ ಚರ್ಚೆಯಾಗಿದೆ.

3. ಬೆಂಗಳೂರಿನಲ್ಲಿ ಮಾತ್ರ ಪ್ರಧಾನಿ ಮೋದಿ ವರ್ಚಸ್ಸು
ಬೆಂಗಳೂರಿನಲ್ಲಿ ಮಾತ್ರ ಪ್ರಧಾನಿ ಮೋದಿ ವರ್ಚಸ್ಸು ಪಕ್ಷಕ್ಕೆ ವರ್ಕೌಟ್ ಆಗಿದೆ. ಆದರೆ, ರಾಜ್ಯದ ಹಲವು ಭಾಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಲೆ ಇದೆ ಎಂದು ಅತಿಯಾಗಿ ನಂಬಿಕೊಂಡಿದ್ದು ಕೂಡಾ ಬಿಜೆಪಿಯ ಹಿನ್ನೆಡೆಗೆ ಕಾರಣವಾಗಿದೆ.
4. ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಜೆಡಿಎಸ್ ಮತಗಳನ್ನು ಕಸಿತ
ಈ ಬಾರೀ ಸ್ವಂತ ಬಲದ ಮೇಲೆ ಅಧಿಕಾರವನ್ನ ಪಡೆಯಬೇಕು ಎಂದು ಕೊಂಡಿದ್ದ ಬಿಜೆಪಿ ಹಳೇ ಮೈಸೂರು ಭಾಗದಲ್ಲಿ ಹಲವು ತಂತ್ರಗಳನ್ನ ರೂಪಿಸಿತ್ತು. ಹಳೆ ಮೈಸೂರು ಭಾಗದಲ್ಲಿ 1:10 ಮತ ಪ್ರಮಾಣ ಹೆಚ್ಚಳವಾದರೂ ಲಾಭವಾಗಿಲ್ಲ. ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಜೆಡಿಎಸ್ ಮತಗಳನ್ನು ಕಸಿದಿದ್ದು ಕಾಂಗ್ರೆಸ್ ಪಕ್ಷಕ್ಕೆ ಲಾಭವಾಗಿದೆ.
5. ನಿಗಮ-ಮಂಡಳಿಗಳ ನೇಮಕಾತಿ ವಿಳಂಬ
ಪಕ್ಷಕ್ಕಾಗಿ ಶ್ರಮವಹಿಸಿದ್ದ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರು ನಿಗಮ ಮಂಡಳಿಗಳ ಮೇಲೆ ಕಣ್ಣೀಟ್ಟಿದ್ದು, ನಿಗಮ-ಮಂಡಳಿಗಳ ನೇಮಕಾತಿ ವಿಚಾರದಲ್ಲಿನ ವಿಳಂಬ ನೀತಿಯಿಂದಾಗಿ ಕಾರ್ಯಕರ್ತರು ಬೇಸತ್ತಿದ್ದು, ಸೋಲಿಗೆ ಕಾರಣವಾಗಿದೆ.
6 ಅಭ್ಯರ್ಥಿ ಆಯ್ಕೆಯ ಹೊಸ ಪ್ರಯೋಗದಿಂದ ಕೈ ಸುಟ್ಟುಕೊಂಡ ಬಿಜೆಪಿ
ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲು ಪಣ ತೊಟ್ಟಿದ್ದ ಬಿಜೆಪಿ ಹೈಕಮಾಂಡ್ ನಾಯಕರ ಸೂಚನೆ ಮೇರೆಗೆ ರಾಜ್ಯದಲ್ಲಿ ಟಿಕೆಟ್ ಹಂಚಿಕೆಯಲ್ಲಿ ಹೊಸ ಪ್ರಯೋಗವನ್ನ ಅನುಸರಿಸಿತ್ತು, ಈ ಬಾರೀ ಹೊಸ ಮುಖಗಳಿಗೆ ಅವಕಾಶವನ್ನ ಮಾಡಿಕೊಟ್ಟಿತ್ತು. ಇದು ಸಹ ಬಿಜೆಪಿ ಸೋಲಿಗೆ ಕಾರಣ ಎಂದು ಹೇಳಲಾಗಿದೆ.












Click it and Unblock the Notifications