ರಾಜ್ಯದಲ್ಲಿ ಹಿಜಾಬ್ ನಿಷೇಧ ವಾಪಸ್- ಎಚ್ಚರಿಕೆ ನೀಡಿದ ಬಿಜೆಪಿ
ಬೆಂಗಳೂರು, ಡಿಸೆಂಬರ್ 22: ಹಿಂದೆ ಬಿಜೆಪಿ ಸರ್ಕಾರದ ಆಡಳಿತದ ಅವಧಿಯಲ್ಲಿ ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಕೋಲಾಹಲ ಸೃಷ್ಟಿಸಿದ್ದ ಹಿಜಾಬ್ ವಿವಾದ ಇದೀಗ 2024 ಲೋಕಸಭಾ ಚುನಾವಣೆ ಹೊತ್ತಲಿ ರಾಜ್ಯ ಸರ್ಕಾರ ಹಿಜಾಬ್ ನಿಷೇಧ ವಾಪಸ್ ಪಡೆದುಕೊಂಡ ಬೆನ್ನಲ್ಲೇ ರಾಜ್ಯ ಬಿಜೆಪಿ ಆಕ್ರೋಶ ಹೊರ ಹಾಕಿದೆ.
ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ,ಜನಾಂಗದ ಶಾಂತಿಯ ತೋಟದಲ್ಲಿ ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಅವರ ಗ್ಯಾರಂಟಿ ಎಂದು ಬಿಜೆಪಿ ಕಿಡಿಕಾರಿದೆ.
ಹಿಜಾಬ್ ನಿಷೇಧವನ್ನು ವಾಪಾಸ್ ಪಡೆಯಲು ತಿಳಿಸಿದ್ದೇನೆ ಎಂದು ಸಿದ್ದರಾಮಯ್ಯನವರ ಎಕ್ಸ್ ಖಾತೆಗೆ ಪ್ರತಿಕ್ರಿಯಿಸಿರುವ ರಾಜ್ಯ ಬಿಜೆಪಿ, ಶಾಲೆ - ಕಾಲೇಜುಗಳಲ್ಲಿ ಮಕ್ಕಳು ಸಮಾನತೆಯಿಂದ ಕೂಡಿರಬೇಕು ಎಂದೇ ಸಮವಸ್ತ್ರ ನೀತಿಯನ್ನು ಜಾರಿಗೊಳಿಸಲಾಗಿದೆ. ಇದನ್ನು ಸುಪ್ರೀಂ ಕೋರ್ಟ್ ಸಹ ಎತ್ತಿ ಹಿಡಿದಿದೆ. ಆದರೆ, ಶಾಲಾ ವಿದ್ಯಾರ್ಥಿಗಳ ಮನಸ್ಸಲ್ಲಿ ಸಮವಸ್ತ್ರ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರು ಭೇದವನ್ನು ಹುಟ್ಟು ಹಾಕುತ್ತಿದ್ದಾರೆ ಆರೋಪಿಸಿದೆ.

ಪಿಎಫ್ಐ ಗೂಂಡಾಗಳು, ಅಲ್ಪಸಂಖ್ಯಾತರನ್ನು ಓಲೈಕೆ ಮಾಡಲು ವೋಟ್ ಬ್ಯಾಂಕ್‌ಗಾಗಿ ಸಿದ್ದರಾಮಯ್ಯ ಅವರು ಸಂವಿಧಾನವನ್ನೇ ತಿದ್ದುಪಡಿ ಮಾಡಲು ಹೊರಟಿದ್ದಾರೆ. ಮುಂದಿನ ದಿನಗಳಲ್ಲಿ ಇದಕ್ಕೆ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಎಚ್ಚರಿಕೆ ನೀಡಿದೆ.
ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ @siddaramaiah ಅವರ ಗ್ಯಾರಂಟಿ.
— BJP Karnataka (@BJP4Karnataka) December 22, 2023
ಶಾಲೆ - ಕಾಲೇಜುಗಳಲ್ಲಿ ಮಕ್ಕಳು ಸಮಾನತೆಯಿಂದ ಕೂಡಿರಬೇಕು ಎಂದೇ ಸಮವಸ್ತ್ರ ನೀತಿಯನ್ನು ಜಾರಿಗೊಳಿಸಲಾಗಿದೆ. ಇದನ್ನು ಸುಪ್ರೀಂ ಕೋರ್ಟ್ ಸಹ ಎತ್ತಿ ಹಿಡಿದಿದೆ.
ಆದರೆ, ಶಾಲಾ ವಿದ್ಯಾರ್ಥಿಗಳ ಮನಸ್ಸಲ್ಲಿ ಸಮವಸ್ತ್ರ ವಿಚಾರವಾಗಿ… https://t.co/L4vtHXNPF7
ಟ್ವೀಟ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದೇನು?
ಪ್ರಧಾನಿ ನರೇಂದ್ರ ಮೋದಿ ಅವರ ಸಬ್ ಕಾ ಸಾಥ್-ಸಬ್ ಕಾ ವಿಕಾಸ್ ಎನ್ನುವುದು ಬೋಗಸ್. ಬಟ್ಟೆ, ಉಡುಪು, ಜಾತಿ, ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ಒಡೆಯುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಹಿಜಾಬ್ ನಿಷೇಧವನ್ನು ವಾಪಾಸ್ ಪಡೆಯಲು ತಿಳಿಸಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ನೋ ಹಿಜಾಬ್, ಎಲ್ಲರು ಹಿಜಾಬ್ ಹಾಕಿಕೊಂಡು ಹೋಗಬಹುದು. ಆದೇಶ ಹಿಂಪಡೆಯಲು ಹೇಳಿದ್ದೇನೆ. ಡ್ರೆಸ್, ಊಟ ಮಾಡುವುದು ನಿಮಗೆ ಸೇರಿದ್ದು. ನಾನೇಕೆ ನಿಮಗೆ ಅಡ್ಡಿ ಪಡಿಸಲಿ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ನೀನು ಯಾವ ಊಟ ಮಾಡುತ್ತೀಯಾ ಮಾಡು. ನೀನು ಊಟ ಮಾಡುವುದು ನಿನ್ನ ಹಕ್ಕು. ನೀನು ಯಾವ್ ಡ್ರೆಸ್ ಹಾಕಿಕೊಳ್ಳುತ್ತೀಯಾ ಹಾಕಿಕೋ. ನಾನು ಊಟ ಮಾಡುವುದು ನನ್ನ ಹಕ್ಕು. ನಾನು ದೋತಿ ಮತ್ತು ಜುಬ್ಬ ಹಾಕಿಕೊಳ್ಳುತ್ತೇನೆ. ನೀನು ಪ್ಯಾಂಟ್ ಶರ್ಟ್ ಹಾಕಿಕೊಂಡರೆ ಹಾಕಿಕೋ, ಇದರಲ್ಲಿ ತಪ್ಪೇನಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಮತಕ್ಕಾಗಿ ರಾಜಕಾರಣ ಮಾಡುವುದು ತಪ್ಪು. ಬಡವರಿಗಾಗಿ ನಮ್ಮ ಸರ್ಕಾರ ಕೆಲಸ ಮಾಡುತ್ತೆ. ಇದರಿಂದ ವಿಚಲಿತರಾಗುವ ಪ್ರಶ್ನೆ ಇಲ್ಲ. ರಾಜೀ ಮಾಡಿಕೊಳ್ಳುವ ಪ್ರಶ್ನೆ ಇಲ್ಲ. ಸುಳ್ಳು, ಮೋಸ ಮಾಡುವವರ ಜೊತೆ ಇರಬೇಡಿ ಎಂದು ಪರೋಕ್ಷವಾಗಿ ವಿಪಕ್ಷಗಳ ವಿರುದ್ದ ಕಿಡಿಕಾರಿದರು.












Click it and Unblock the Notifications