BY Vijayendra VS Yatnal: ಬಿಜೆಪಿ ಬಣ ಬಡಿದಾಟಕ್ಕೆ ಬ್ರೇಕ್ ಬೀಳುತ್ತಾ: ರಾಧಾಮೋಹನ್ ದಾಸ್ ಸಭೆಯಲ್ಲಿ ಚರ್ಚೆಯಾಗಿದ್ದೇನು?
ಬೆಂಗಳೂರು, ಜನವರಿ 22: ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹಾಗೂ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ನಡುವೆ ಆಂತರಿಕ ವಾರ್ ಶುರುವಾಗಿದೆ. ಕಮಲ ಪಾಳಯದಲ್ಲಿನ್ನ ಅಸಮಾಧಾನವನ್ನ ಶಮನಗೊಳಿಸಲು ಹೈಕಮಾಂಡ್ ಮುಂದಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಬಸವನಗೌಡ ಪಾಟೀಲ್ ಯತ್ನಾಳ್ ಬಣದಲ್ಲಿ ಶುರುವಾಗಿರುವ ಸಮರ ಹೈಕಮಾಂಡ್ ನಾಯಕರಿಗೆ ತಲೆ ಬಿಸಿ ಮಾಡಿದೆ.
ಬಿಜೆಪಿ ಪಡೆಯಲ್ಲಿ ಉಂಟಾದ ಗೊಂದಲ ಹಾಗೂ ಅಸಮಾಧಾನವನ್ನ ಶಮನಗೊಳಿಸಲು ಬಿಜೆಪಿ ಶಾಸಕರ ಜೊತೆಗೆ ಮಂಗಳವಾರ ರಾಜ್ಯ ಬಿಜೆಪಿ ಉಸ್ತುವಾರಿ ರಾಧಮೋಹನ್ ದಾಸ್ ಅಗರವಾಲ್ಗೆ ಸಭೆ ನಡೆಸಿದ್ದಾರೆ. ರಾಜ್ಯ ಕಮಲದಲ್ಲಿ ವಿಜಯೇಂದ್ರ ವರ್ಸಸ್ ಯತ್ನಾಳ್ ಬಣದ ನಡುವೆ ಕದನ ತಾತರಕ್ಕೇರಿದೆ. ಈ ಅಸಮಾಧಾನಕ್ಕೆ ಅಂತ್ಯಕ್ಕೆ ರಾಧಮೋಹನ್ ದಾಸ್ ಅಗರವಾಲ್ ಪಕ್ಷದ ಕಚೇರಿಯಲ್ಲಿ ಬ್ಯಾಕ್ ಟು ಬ್ಯಾಕ್ ಸಭೆಗಳನ್ನ ನಡೆಸಿದ್ದಾರೆ.

ಇನ್ನೂ ರಾಧಮೋಹನ್ ದಾಸ್ ಅಗರವಾಲ್ ಅವರ ಸಭೆಗೂ ಮುನ್ನ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರ ಬಣದ ಎಂ ಪಿ ರೇಣುಕಾಚಾರ್ಯ ಅವರ ನೇತೃತ್ವದಲ್ಲಿ ಮಾಜಿ ಶಾಸಕರ ಸಭೆ ನಡೆಸಿ ಎಂದು ಹೇಳಿದ್ದಾರೆ. ಅಲ್ಲದೇ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನ ಮುಂದುವರೆಸಿ ಯತ್ನಾಳ್ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ರಾಜ್ಯ ಬಿಜೆಪಿ ಉಸ್ತುವಾರಿ ರಾಧ ಮೋಹನ್ ದಾಸ್ ಅವರ ಮುಂದೆ ಬೇಡಿಕೆ ಇಟ್ಟಿದ್ದಾರೆ.
ರಾಜ್ಯ ಬಿಜೆಪಿ ಉಸ್ತುವಾರಿ ರಾಧ ಮೋಹನ್ ದಾಸ್ ಸಭೆ ನಡೆಸಿದ ಬಳಿಕ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಅವರು ಮಾತನಾಡಿ, ರಾಜ್ಯ ಉಸ್ತುವಾರಿ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾಮೋಹನ್ ದಾಸ್ ಅಗರವಾಲ್ ಅವರ ಸಮ್ಮುಖದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ 'ಸಂಘಟನಾ ಪರ್ವ'ದ ವಿಚಾರವಾಗಿ ಸಭೆ ನಡೆದಿದೆ. ಬಹುತೇಕ ಎಲ್ಲ ಶಾಸಕರು, ವಿಧಾನಪರಿಷತ್ ಸದಸ್ಯರನ್ನು ಒಳಗೊಂಡಂತೆ ಪ್ರಸ್ತುತ ರಾಜಕೀಯ ಪರಿಸ್ಥಿತಿ ಬಗ್ಗೆ ಎಲ್ಲರ ಅಭಿಪ್ರಾಯ ಮತ್ತು ವಸ್ತುಸ್ಥಿತಿಯನ್ನು ಪಡೆಯಲಾಗಿದೆ ಎಂದು ತಿಳಿಸಿದರು.
ಈ ಸಭೆಯಲ್ಲಿ ಕಾರ್ಯಕರ್ತರ ಪರವಾಗಿ, ಕಾರ್ಯಕರ್ತರ ಧ್ವನಿಯಾಗಿ ಶಾಸಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆ ಅಭಿಪ್ರಾಯ ಕೇಂದ್ರದ ನಾಯಕರು ಮತ್ತು ಎಲ್ಲಿಗೆ ತಲುಪಬೇಕೋ ಅಲ್ಲಿಗೆ ತಲುಪಿದೆ. ಇತ್ತಿಚ್ಚೀನ ದಿನಗಳಲ್ಲಿ ಕೆಲವರು ಮಾತನಾಡುತ್ತಿರುವುದರಿಂದ ಪಕ್ಷದ ಇಮೇಜ್‍ಗೆ ಧಕ್ಕೆ ಆಗುತ್ತಿದೆ. ಕಾರ್ಯಕರ್ತರ ಮನಸ್ಸಿಗೂ ನೋವು ಉಂಟಾಗುತ್ತಿದೆ. ಹಾಗಾಗಿ ಇದಕ್ಕೆ ತಾರ್ಕಿಕ ಅಂತ್ಯ ಆಗಬೇಕು ಎಂಬ ಆಶಯ ವ್ಯಕ್ತವಾಗಿದೆ. ಸುಮಾರು 50 ಶಾಸಕರು ಬಂದಿದ್ದು, ಹಾದಿಬೀದಿಯಲ್ಲಿ ಮಾತನಾಡುವವರಿಗೆ ರಾಷ್ಟ್ರೀಯ ನಾಯಕರು ತಾಕೀತು ಮಾಡಬೇಕೆಂದು ಮನವಿ ಮಾಡಿದ್ದಾರೆ ಎಂದು ತಿಳಿಸಿದರು.
ಪರಿಸ್ಥಿತಿ ತಿಳಿಯಾಗಿ ಅವರು ಕೂಡ, ಪಕ್ಷದ ಸಂಘಟನೆಯ ಜೊತೆ ನಿಂತು ಪಕ್ಷವನ್ನು ಬಲವರ್ಧನೆ ಮಾಡುವುದಲ್ಲದೆ, ರಾಜ್ಯಾಧ್ಯಕ್ಷರಿಗೆ ಶಕ್ತಿ ಕೊಡುವ ನಿಟ್ಟಿನಲ್ಲಿ ಎಲ್ಲರೂ ಕೂಡ ಒಟ್ಟಾಗಿ ಕೆಲಸ ಮಾಡಬೇಕೆಂಬುದು ಎಲ್ಲ ಜನಪ್ರತಿನಿಧಿಗಳ ಆಶಯವಾಗಿತ್ತು. ಸಂಘಟನಾ ಪರ್ವದಲ್ಲಿ ನಡೆಯುತ್ತಿರುವ ಸದಸ್ಯತ್ವ ಅಭಿಯಾನ, ಮಂಡಲ ಅಧ್ಯಕ್ಷರು, ಜಿಲ್ಲಾ ಅಧ್ಯಕ್ಷರ ನಿಯುಕ್ತಿಗೆ ಆಗುತ್ತಿರುವ ಎಲ್ಲ ಕ್ರಮಗಳು ಅಚ್ಚುಕಟ್ಟಾಗಿ ಆಗುತ್ತಿದೆ ಎಂದು ಹೇಳಿದರು.
2028ರಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಸಂಘಟಿತವಾಗಿ ಕೆಲಸ ಆಗಬೇಕೆಂಬ ಅಭಿಪ್ರಾಯವನ್ನು ರಾಧಾಮೋಹನ್ ದಾಸ್ ಅಗರವಾಲ್ ಅವರಿಗೆ ತಿಳಿಸಲಾಗಿದೆ. ಈ ಮೂಲಕ ಪಕ್ಷದಲ್ಲಿ ಗೊಂದಲ ಮಾಡುವ ಪ್ರಯತ್ನಕ್ಕೆ ತೆರೆ ಎಳೆಯುವ ವಿಶ್ವಾಸವನ್ನು ಎಲ್ಲ ಶಾಸಕರು ವ್ಯಕ್ತಪಡಿಸಿದ್ದಾರೆ. ಶಾಸಕರು ಆಗ್ರಹಪೂರ್ವಕವಾಗಿ ಮಾತನಾಡಿದ್ದಾರೆ. ಬಿಜೆಪಿ ಇದರಲ್ಲಿ ಯಶಸ್ಸನ್ನು ಕಂಡು ಮುಂದಿನ ದಿನಗಳಲ್ಲಿ ಉತ್ತಮ ರೀತಿಯಲ್ಲಿ ಪಕ್ಷದ ಸಂಘಟನೆ ಆಗಲಿದೆ ಎಂದು ತಿಳಿಸಿದರು. ಶಾಸಕರ ಅಭಿಪ್ರಾಯವನ್ನು ರಾಜ್ಯದ ನಾಯಕರು ಮತ್ತು ಪಕ್ಷದ ಹಿರಿಯರು ಗಮನಿಸುವರೆಂದು ತಿಳಿಸಿದರು.












Click it and Unblock the Notifications