ಕೆಂಪೇಗೌಡರ ಹೆಸರಿನಲ್ಲಿ ಮೋದಿ ವಿಜೃಂಭಣೆ; ಸಮುದಾಯದವರಿಗೆ ಅಪಮಾನ- ಎಚ್‌ಡಿಕೆ
ಬೆಂಗಳೂರು, ಅ.31: ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣ ಹೆಸರಿನಲ್ಲಿ ಬಿಜೆಪಿಯವರು ಸ್ವಂತ ಕಾರ್ಯಕ್ರಮ ಮಾಡಿಕೊಂಡು, ರಾಜಕೀಯ ಮಾಡಲು ಹೊರಟಿದ್ದಾರೆ. ನಮ್ಮ ಸಮಾಜದ ಹಿರಿಯರನ್ನು ಕಡೆಗಣಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ದಾಸರಹಳ್ಳಿ ಶಾಸಕ ಮಂಜುನಾಥ್ ರವರ ಕಚೇರಿಯಲ್ಲಿ ಇಂದು ಹಮ್ಮಿಕೊಂಡಿದ್ದ ಅಮ್ ಆದ್ಮಿ ಪಕ್ಷದ ಮುಖಂಡರ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಥಯಾತ್ರೆ ಮುಖಾಂತರ ಮಣ್ಣನ್ನು ಶೇಖರಣೆ ಮಾಡುತ್ತಿದ್ದಾರೆ. ಇದು ರಾಜಕೀಯವಾಗಿ ಜನರನ್ನು ಸೆಳೆಯುವ ಕಾರ್ಯಕ್ರಮ ಆಗುತ್ತಿದೆ. ನಮ್ಮ ಸಮಾಜದ ಹಿರಿಯರನ್ನು ಕಡೆಗಣಿಸಲಾಗಿದೆ ಎಂದರು.
ರಥಯಾತ್ರೆ ವಾಹನದಲ್ಲಿ ಪ್ರಧಾನಿ ನರೇಂದ್ರ ಮೋದಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಿಎಂ ಬಸವರಾಜ ಬೊಮ್ಮಾಯಿ ಭಾವಚಿತ್ರ ಹಾಕಿದ್ದಾರೆ. ನಮ್ಮ ಸಮಾಜದ ಸ್ವಾಮೀಜಿಗಳ ಭಾವಚಿತ್ರ ಇಲ್ಲ. ನಮ್ಮ ಸಮುದಾಯ ಹಿರಿಯರಾದ ಎಚ್.ಡಿ ದೇವೇಗೌಡರು, ಎಸ್.ಎಂ.ಕೃಷ್ಣ ಅವರ ಭಾವಚಿತ್ರ ಇಲ್ಲ. ಅವರಿಗೆ ಅಗೌರವ ತೋರಿಸುವ ಮೂಲಕ ಬಿಜೆಪಿಯ ಕಾರ್ಯಕ್ರಮ ಮಾಡಿಕೊಂಡು ಹೊರಟ್ಟಿದ್ದಾರೆ. ಹಾಗಾಗಿ, ದಾಸರಹಳ್ಳಿ, ತಿಪಟೂರು, ದೇವನಹಳ್ಳಿ, ಹೊಸಕೋಟೆ ಸೇರಿದಂತೆ ಹಲವು ಕಡೆ ಬಿಜೆಪಿ ರಥಯಾತ್ರೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಸರ್ಕಾರ ಸಣ್ಣತನದ ವಾತಾವರಣ ನಿರ್ಮಾಣ ಮಾಡಿದೆ. ರಾಜ್ಯದ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮಾಡಬೇಕಾದ ಕೆಲಸವನ್ನು ಒಂದು ಪಕ್ಷದ ಕೆಲಸ ಮಾಡಿಕೊಂಡಿದಕ್ಕೆ ಜನ ಧಿಕ್ಕರಿಸಿದ್ದಾರೆ ಎಂದು ಹೇಳಿದರು.

ಪರ್ಯಾಯವಾಗಿ ಜೆಡಿಎಸ್ ಇದೆ
ನನ್ನ ಮೇಲೆ ನಂಬಿಕೆ ಇದೆ. ಎಎಪಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯರು ಎರಡು ತಿಂಗಳಿಂದ ಕೆಲಸ ಮಾಡ್ತಾ ಇದ್ದಾರೆ. ಪಕ್ಷದಲ್ಲಿ ಮಹಿಳೆಯರ ಸಂಘಟನೆಗೆ ಸ್ಥಾನಮಾನ ನೀಡಲು ನಿರ್ಧಾರ ಮಾಡಿದ್ದೇವೆ. ಮುಂದಿನ ದಿನಗಳ ಜನ ಪರ ಸರ್ಕಾರ ತರುವ ನಿಟ್ಟಿನಲ್ಲಿ ಹೋರಾಟ ಮಾಡೋಣ ಎಂದು ಕರೆ ನೀಡಿದರು.
ನಮ್ಮ ಪಂಚರತ್ನ ಯೋಜನೆ ಇಟ್ಟುಕೊಂಡು ಶಿಕ್ಷಣ, ಉದ್ಯೋಗ, ಸೇರಿದಂತೆ ಕಾರ್ಯಕ್ರಮಗಳನ್ನಯ ರೂಪಿಸಲಾಗುತ್ತಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ
ನಾಡಿನಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುತ್ತೇವೆ ಎಂದರು ಕುಮಾರಸ್ವಾಮಿ ಅವರು.

ರಸ್ತೆಯಲ್ಲಿ ಪೊಲೀಸರಿಂದ ಹಣ ವಸೂಲಿ
ಇತ್ತೀಚೆಗೆ ಇನ್ಸ್‌ಪೆಕ್ಟರ್ ನಂದೀಶ್ ಅವರನ್ನು ಬಾಣಸವಾಡಿಗೆ ವರ್ಗಾವಣೆ ಮಾಡಲು ಪ್ರಯತ್ನ ಮಾಡಿದರು. ಆದರೆ ಕೆಆರ್ ಪುರಂ ಗೆ ವರ್ಗಾವಣೆ ಮಾಡಿಸಿಕೊಂಡರು. ಸಚಿವ ಎಂಟಿಬಿ ನಾಗರಾಜ್ ಅವರು ವಿಡಿಯೋ ಮುಂದೆ ಇಟ್ಟಾಗ ಯಾರೂ ಗಂಭೀರವಾಗಿ ತೆಗೆದುಕೊಂಡಿಲ್ಲ. ಈಗ ಕಾಂಗ್ರೆಸ್ ನಾಯಕರು ಸರ್ಕಾರದ ಮೇಲೆ ಬಿದ್ದಾರೆ. ಈಗ ರಸ್ತೆಯಲ್ಲಿ ಬರುವಾಗ ನೋಡಿದೆ, ದಾರಿಯಲ್ಲಿ ಪೊಲೀಸರು ಹಣ ವಸೂಲಿ ಮಾಡುತ್ತಿದ್ದರು. ಯಾಕೆ ಈ ಪರಿಸ್ಥಿತಿ ಬರುತ್ತದೆ ನಮಗೆ? ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಭಾಷೆಗೆ ಧಕ್ಕೆ ಬರುವ ರೀತಿಯಲ್ಲಿ ಕೇಂದ್ರದ ಕೆಲಸ
ನಮ್ಮ ನಾಡಿನಲ್ಲಿ ಭಾಷೆಗೆ ಧಕ್ಕೆ ಬರುವ ರೀತಿಯಲ್ಲಿ ಕೇಂದ್ರ ಸರ್ಕಾರ ಮಾಡುತ್ತಿದೆ. ಇದನ್ನು ನಾವು ಎದುರಿಸಲು ಸಿದ್ದವಾಗಿದ್ದೇವೆ. ಈಗಾಗಲೇ ನಾನು ನವೆಂಬರ್ 1 ಕ್ಕೆ ಪ್ರತಿ ಮನೆಯಲ್ಲಿ ಕನ್ನಡ ಧ್ವಜ ಹಾರಿಸಲು ನಾನು ಮನವಿ ಮಾಡಿದ್ದೇನೆ. ನಮ್ಮ ಪಕ್ಷದ ಕಾರ್ಯಕರ್ತರು, ಹಲವಾರು ಸಂಘಟನೆಗಳು ತಮ್ಮ ಮನೆ ಮೇಲೆ ಧ್ವಜ ಹಾರಿಸಲು ತೀರ್ಮಾನಿಸಿದಕ್ಕೆ ನಾನು ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದ ಹೆಚ್ ಡಿಕೆ, ನವೆಂಬರ್1 ರಂದು ಪಂಚರತ್ನ ಯಾತ್ರೆಯಂದು ನಮ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದರು.
ಮಾದರಿಯಾಗಿ ಶಾಸಕ ಮಂಜುನಾಥ್ ಕೆಲಸ ಮಾಡುತ್ತಿದ್ದಾರೆ. ಈ ರೀತಿಯ ಶಾಸಕರು ಎಲ್ಲ ಕ್ಷೇತ್ರಕ್ಕೂ ಬೇಕಾಗಿದೆ. ನವೆಂಬರ್ 1 ರಂದು ಕನ್ನಡ ಧ್ವಜ ನೀಡುತ್ತಿರುವ ಮಂಜುನಾಥ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಪ್ರತಿದಿನ ಬೆಲೆ ಏರಿಕೆ ಆಗುತ್ತಿದೆ
ನಮ್ಮ ರಾಜ್ಯದಲ್ಲಿ ಬಿಜೆಪಿ ಆಪರೇಷನ್ ಕಮಲ ಮಾಡಿ ಸರ್ಕಾರ ಮಾಡಿದ್ದಾರೆ. ದೇಶದ ಎಲ್ಲ ಕಡೆ ಆಪರೇಷನ್ ಕಮಲ ಮಾಡಿ ಸರ್ಕಾರ ರಚನೆ ಮಾಡಿದ್ದಾರೆ. ರಾಜ್ಯದಲ್ಲಿ, ಬೆಂಗಳೂರಿನಲ್ಲಿ ಅಭಿವೃದ್ಧಿ ಕೆಲಸ ಆಗುತ್ತಿಲ್ಲ. ಪ್ರತಿದಿನ ಬೆಲೆ ಏರಿಕೆ ಆಗುತ್ತಿದೆ. ಕೈಗಾರಿಕೆಗಳು ಮುಚ್ಚಿಕೊಂಡಿವೆ. 60 ವರ್ಷ ದಿಂದ ದೇವೆಗೌಡರು ರಾಜಕೀಯ ಮಾಡುತ್ತಿದ್ದಾರೆ. ಎಲ್ಲೂ ಶಿಕ್ಷಣ ಸಂಸ್ಥೆಗಳನ್ನು ಮಾಡಿಲ್ಲ. ರೈತರ ಸಾಲ ಮನ್ನಾ ಮಾಡಿದ್ದು ಕುಮಾರಸ್ವಾಮಿ ಅವರು. ರೈತ,ಬಡವರು ಪರ ಕುಮಾರಣ್ಣ ಕೆಲಸ ಮಾಡಿದ್ದಾರೆ. ರಾಜ್ಯಕ್ಕೆ ಒಳ್ಳೆಯದು ಮಾಡಬೇಕೆಂದು ಹೋರಾಟ ಮಾಡ್ತಾ ಇದ್ದಾರೆ ಎಂದರು.
ಸಂಪೂರ್ಣ ಬಹುಮತ ಬಂದು ಅವರು ಕೆಲಸ ಮಾಡಬೇಕು. ಸಮ್ಮಿಶ್ರ ಸರ್ಕಾರಗಳಲ್ಲಿ ಕೆಲಸ ಮಾಡೋಕೆ ಆಗಲ್ಲ. ಒಳ್ಳೆಯ ನಿರ್ಧಾರಗಳನ್ನು ತೆಗೆದುಕೊಳ್ಳಲು ಆಗಲ್ಲ. ಹಾಗಾಗಿ ಸಂಪೂರ್ಣ ಬಹುಮತದ ಸರ್ಕಾರ ಅಧಿಕಾರಕ್ಕೆ ಬರಬೇಕು. ನೂರಕ್ಕೆ ನೂರರಷ್ಟು ಮುಂದಿನ ದಿನಗಳಲ್ಲಿ ಕುಮಾರಸ್ವಾಮಿ ಅವರು ಸಿಎಂ ಆಗ್ತಾರೆ. ಸ್ವಯಂಪ್ರೇರಿತವಾಗಿ ಕಾಂಗ್ರೆಸ್, ಬಿಜೆಪಿಯಿಂದ ಸೇರ್ಪಡೆ ಆಗ್ತಾರೆ. ನಾವು ಹೈಕಮಾಂಡ್ ಗೆ ದೆಹಲಿಗೆ ಹೋಗುವ ಅವಶ್ಯಕತೆ ಇಲ್ಲ. ತೋಟದಲ್ಲಿ ಅಥವಾ ಜೆಪಿ ನಗರಕ್ಕೆ ಹೋದ್ರೆ ಕುಮಾರಣ್ಣ ಕರೆದು ಮಾತನಾಡುತ್ತಾರೆ ಎಂದು ಹೇಳಿದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications